
ಬೆಂಗಳೂರು, (ಜೂನ್ 10): ಕರ್ನಾಟಕದಲ್ಲಿ ಮುಂಗಾರು ಮಳೆಯ (Karnataka Monson Rain) ಅಬ್ಬರ ಜೋರಾಗಿದ್ದು, ಮುಂದಿನ ಐದು ದಿನಗಳ ಕಾಲ ವರಣು ಅಬ್ಬರ ಮುಂದುವರೆಯಲಿದೆ. ಇಂದಿನಿಂದ ಅಂದರೆ ಜೂನ್ 10ರಿಂದ ಜೂನ್ 14 ರವರೆಗೆ ರಾಜ್ಯಾದ್ಯಂತ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾದಾರಣ ಹಾಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಲ್ಲೂ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರ್ನಾಟಕದಲ್ಲಿ ಮುಂದಿನ ಐದು ದಿನಗಳ ಕಾಲ ರಾಜ್ಯಾದ್ಯಂತ ಜೋರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದ್ದು, ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಸಾಧಾರಣದಿಂದ ಭಾರೀ ಮಳೆಯಾಗಲಿದೆ ಎಂದು ತಿಳಿಸಿದ್ದು, ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ವಿಶೇಷವಾಗಿ, ಕಲಬುರಗಿ, ಬೀದರ್, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಮಳೆ ಅಬ್ಬರ ಹೆಚ್ಚಿರಲಿದ್ದು, ಈ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಗಾಳಿಯು ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬೀಸುವ ಸಾಧ್ಯತೆಯಿದೆ.
ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ತಂಪಾದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ., 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಗರಿಷ್ಠ ತಾಪಮಾನವು ಸುಮಾರು 30 ಹಾಗೂ ಕನಿಷ್ಠ 21 ಡಿಗ್ರಿ ಆಸುಪಾಸಿನಲ್ಲಿ ಇರಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.