AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಬಹುತೇಕ ಕಡೆ ಧಾರಾಕಾರ ಮಳೆ: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಶಾಲೆಗಳಿಗೆ ಸೂಚಿಸಿದ ಶಿಕ್ಷಣ ಇಲಾಖೆ

ರಾಜ್ಯದಲ್ಲಿ ಬಹುತೇಕ ಕಡೆ ಧಾರಾಕಾರ ಮಳೆಯಾಗುತ್ತಿರುವ  ಹಿನ್ನೆಲೆ ಮುಂಜಾಗ್ರತೆ ಕ್ರಮವಾಗಿ ಶಾಲೆಗಳು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ರಾಜ್ಯದಲ್ಲಿ ಬಹುತೇಕ ಕಡೆ ಧಾರಾಕಾರ ಮಳೆ: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಶಾಲೆಗಳಿಗೆ ಸೂಚಿಸಿದ ಶಿಕ್ಷಣ ಇಲಾಖೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jul 11, 2022 | 10:36 PM

Share

ಬೆಂಗಳೂರು: ರಾಜ್ಯದಲ್ಲಿ ಬಹುತೇಕ ಕಡೆ ಧಾರಾಕಾರ ಮಳೆಯಾಗುತ್ತಿರುವ  ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಶಾಲೆಗಳು (Schools) ಕೈಗೊಳ್ಳಬೇಕಾದ ಕ್ರಮಗಳ ಕುರಿತು ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆ (Education Department) ಹೊರಡಿಸಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಆಯಾ ಮುಖ್ಯೋಪಾದ್ಯಯರಿಗೆ ಸುತ್ತೋಲೆ ಮೂಲಕ ಆದೇಶ ರವಾನಿಸಲಾಗಿದೆ.

1. ವರುಣನ ಆರ್ಭಟ ಜಾಸ್ತಿಯಾಗುತ್ತಿದ್ದು, ಶಿಥಿಲಾವಸ್ಥೆ ಅಲ್ಲಿರುವ ಕಟ್ಟಡ ಅಥವಾ ಶೌಚಾಲಯಗಳನ್ನು ಮಕ್ಕಳು ಬಳಸದಂತೆ ನಿಗಾವಹಿಸಬೇಕು.

2. ಶಿಥಿಲಾವಸ್ಥೆಯ ಕಟ್ಟಡದಿಂದ ಮಕ್ಕಳನ್ನು ತಕ್ಷಣವೇ  ಸ್ಥಳಾಂತರ ಮಾಡಬೇಕು.

3. ಮಕ್ಕಳಲ್ಲಿ ಕೆಮ್ಮು, ನೆಗಡಿ, ಜ್ವರ ಕೋವಿಡ್ ಅಂತಹ ಲಕ್ಷಣ ಕಂಡು ಬಂದರೆ ತಕ್ಷಣ ಅಗತ್ಯ ಕ್ರಮ ಕೈಗೊಳ್ಳಬೇಕು.

4. ಕೆಲವು ಶಾಲೆಯ ತರಗತಿ ಒಳಗಡೆ ನೀರು ತುಂಬಿದರೆ ಆ ಶಾಲೆಯ ನೀರು ಸ್ವಚ್ಚ ಮಾಡಿದ ಬಳಿಕ ಮಕ್ಕಳಿಗೆ ಬರಲು ಹೇಳಬೇಕು.

5. ಸ್ಥಳೀಯ ಪುರಸಭೆ ಅಥವಾ ಗ್ರಾಮ ಪಂಚಾಯಿತಿ ನೆರವಿನೊಂದಿಗೆ ಶಾಲಾ ತರಗತಿಯ ಸ್ವಚ್ಛಗೊಳಿಸಬೇಕು.

6. ಕ್ಷೇತ್ರ ಶಿಕ್ಷಾಧಿಕಾರಿಗಳ ಪೂರ್ವ ಅನುಮತಿ ಪಡೆದು ಆ ದಿನ ಶಾಲೆ ರಜೆ ಘೋಷಣೆ ಮಾಡಬೇಕು.

7. ಮಳೆಯಿಂದ ಮಕ್ಕಳಿಗೆ ಯಾವುದೇ ತೊಂದರೆ ಜೀವಹಾನಿ ಆಗದಂತೆ ನೋಡಿ ಕೊಳ್ಳಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ

Published On - 10:35 pm, Mon, 11 July 22

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?