AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಕರ್ನಾಟಕದ ಈ 8 ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆ, ಯೆಲ್ಲೋ ಅಲರ್ಟ್​ ಘೋಷಣೆ

ಕರ್ನಾಟಕದ ಈ 8 ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗಲಿದ್ದು, ಹವಾಮಾನ ಇಲಾಖೆ ಹಳದಿ ಅಲರ್ಟ್​ ಘೋಷಿಸಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೀದರ್, ಕಲಬುರಗಿ, ವಿಜಯಪುರ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಇನ್ನುಳಿದಂತೆ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯಪುರದಲ್ಲಿ ಸಾಧಾರಣ ಮಲೆಯಾಗಲಿದೆ, ಸೆಪ್ಟೆಂಬರ್ 13ರ ನಂತರ ಮುಂಗಾರು ಚುರುಕುಗೊಳ್ಳಲಿದೆ.

Karnataka Rain: ಕರ್ನಾಟಕದ ಈ 8 ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆ, ಯೆಲ್ಲೋ ಅಲರ್ಟ್​ ಘೋಷಣೆ
ಮಳೆImage Credit source: Indian Express
ನಯನಾ ರಾಜೀವ್
|

Updated on: Sep 08, 2023 | 7:29 AM

Share

ಕರ್ನಾಟಕದ ಈ 8 ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗಲಿದ್ದು, ಹವಾಮಾನ ಇಲಾಖೆ ಹಳದಿ ಅಲರ್ಟ್​ ಘೋಷಿಸಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೀದರ್, ಕಲಬುರಗಿ, ವಿಜಯಪುರ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಇನ್ನುಳಿದಂತೆ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯಪುರದಲ್ಲಿ ಸಾಧಾರಣ ಮಲೆಯಾಗಲಿದೆ, ಸೆಪ್ಟೆಂಬರ್ 13ರ ನಂತರ ಮುಂಗಾರು ಚುರುಕುಗೊಳ್ಳಲಿದೆ.

ನೈಋತ್ಯ ಮುಂಗಾರು ಕರಾವಳಿಯಲ್ಲಿ ದುರ್ಬಲವಾಗಿತ್ತು, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು. ನಾಪೋಕ್ಲು, ಬೆಳ್ಳೂರು, ಬೀದರ್, ಕೊಟ್ಟಿಗೆಹಾರ, ಬೀದರ್, ಮೂರ್ನಾಡು, ಗೋಣಿಕೊಪ್ಪಲ್, ಕೊಲ್ಲೂರು, ಮುಡಬಿ, ಭಾಗಮಂಡಲ, ಧರ್ಮಸ್ಥಳ, ಸಿದ್ದಾಪುರ, ಶಿರಾಲಿ, ಕುಮಟಾ, ಭಾಲ್ಕಿ, ನಿರ್ಣಾ, ಚಿಂಚೋಳಿ, ಪೊನ್ನಂಪೇಟೆ, ಸೋಮವಾರಪೇಟೆ, ದೇವನಹಳ್ಳಿ. ಗುಬ್ಬಿ, ಉಪ್ಪಿನಂಗಡಿ, ಅಂಕೋಲಾ, ಹುಮನಾಬಾದ್, ಮಂಠಾಳ, ಕಮಲಾಪುರ, ಸೇಡಂ, ತಾಳಗುಪ್ಪ, ಮಂಡಗದ್ದೆ, ಕಮ್ಮರಡಿ, ಮೂಡಿಗೆರೆ, ಬೇಲೂರು, ಸಾಲಿಗ್ರಾಮ, ರಾಯಲಪಾಡು, ಉತ್ತರಹಳ್ಳಿ, ದೊಡ್ಡಬಳ್ಳಾಪುರ, ತಿಪಟೂರು, ಕುಣಿಗಲ್, ಹೆಬ್ಬೂರು, ರಾಮನಗರ, ಚನ್ನಪಟ್ಟಣದಲ್ಲಿ ಮಳೆಯಾಗಿದೆ.

ಉತ್ತರ ಒಳನಾಡಿನ ಕಲಬುರಗಿ, ಬೀದರ್, ವಿಜಯಪುರ, ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಮತ್ತಷ್ಟು ಓದಿ: Karnataka Rain: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಸೆಪ್ಟೆಂಬರ್ 12ರವರೆಗೆ ಮಳೆಯ ಮುನ್ಸೂಚನೆ

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಕಳೆದ 3 ದಿನಗಳಿಂದ ಮಳೆಯಾಗುತ್ತಿದೆ. ಎಚ್​ಎಎಲ್​ನಲ್ಲಿ 28.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ
'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ
ಸಿದ್ದರಾಮಯ್ಯ ನಮ್ ಜೊತೆ ಇದ್ದವರೇ, ಭೇಟಿಯಾದ್ರೆ ತಪ್ಪೇನು?
ಸಿದ್ದರಾಮಯ್ಯ ನಮ್ ಜೊತೆ ಇದ್ದವರೇ, ಭೇಟಿಯಾದ್ರೆ ತಪ್ಪೇನು?
ಗದಗದಲ್ಲಿ ಎಂಎಲ್‌ಸಿ ಎಲೆಕ್ಷನ್ ಹೈಡ್ರಾಮಾ
ಗದಗದಲ್ಲಿ ಎಂಎಲ್‌ಸಿ ಎಲೆಕ್ಷನ್ ಹೈಡ್ರಾಮಾ
ಡಿಕೆಶಿಯನ್ನು ತಾನು ಸಿಎಂ ಎಂದು ಒಪ್ಪಲ್ಲ ಎಂದ ಕುಮಾರಸ್ವಾಮಿ: ಕಾರಣ ಇಲ್ಲಿದೆ
ಡಿಕೆಶಿಯನ್ನು ತಾನು ಸಿಎಂ ಎಂದು ಒಪ್ಪಲ್ಲ ಎಂದ ಕುಮಾರಸ್ವಾಮಿ: ಕಾರಣ ಇಲ್ಲಿದೆ
ಮಾಂಜಾ ದಾರ ಬಳಸದಂತೆ ಬೆಳಗಾವಿ ಎಸ್​ಪಿ ರಾಮರಾಜನ್ ಖಡಕ್ ಎಚ್ಚರಿಕೆ
ಮಾಂಜಾ ದಾರ ಬಳಸದಂತೆ ಬೆಳಗಾವಿ ಎಸ್​ಪಿ ರಾಮರಾಜನ್ ಖಡಕ್ ಎಚ್ಚರಿಕೆ