Karnataka Rain: ಕರ್ನಾಟಕದ ಈ 8 ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆ, ಯೆಲ್ಲೋ ಅಲರ್ಟ್​ ಘೋಷಣೆ

|

Updated on: Sep 08, 2023 | 7:29 AM

ಕರ್ನಾಟಕದ ಈ 8 ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗಲಿದ್ದು, ಹವಾಮಾನ ಇಲಾಖೆ ಹಳದಿ ಅಲರ್ಟ್​ ಘೋಷಿಸಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೀದರ್, ಕಲಬುರಗಿ, ವಿಜಯಪುರ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಇನ್ನುಳಿದಂತೆ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯಪುರದಲ್ಲಿ ಸಾಧಾರಣ ಮಲೆಯಾಗಲಿದೆ, ಸೆಪ್ಟೆಂಬರ್ 13ರ ನಂತರ ಮುಂಗಾರು ಚುರುಕುಗೊಳ್ಳಲಿದೆ.

Karnataka Rain: ಕರ್ನಾಟಕದ ಈ 8 ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆ, ಯೆಲ್ಲೋ ಅಲರ್ಟ್​ ಘೋಷಣೆ
ಮಳೆ
Image Credit source: Indian Express
Follow us on

ಕರ್ನಾಟಕದ ಈ 8 ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗಲಿದ್ದು, ಹವಾಮಾನ ಇಲಾಖೆ ಹಳದಿ ಅಲರ್ಟ್​ ಘೋಷಿಸಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೀದರ್, ಕಲಬುರಗಿ, ವಿಜಯಪುರ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಇನ್ನುಳಿದಂತೆ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯಪುರದಲ್ಲಿ ಸಾಧಾರಣ ಮಲೆಯಾಗಲಿದೆ, ಸೆಪ್ಟೆಂಬರ್ 13ರ ನಂತರ ಮುಂಗಾರು ಚುರುಕುಗೊಳ್ಳಲಿದೆ.

ನೈಋತ್ಯ ಮುಂಗಾರು ಕರಾವಳಿಯಲ್ಲಿ ದುರ್ಬಲವಾಗಿತ್ತು, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು. ನಾಪೋಕ್ಲು, ಬೆಳ್ಳೂರು, ಬೀದರ್, ಕೊಟ್ಟಿಗೆಹಾರ, ಬೀದರ್, ಮೂರ್ನಾಡು, ಗೋಣಿಕೊಪ್ಪಲ್, ಕೊಲ್ಲೂರು, ಮುಡಬಿ, ಭಾಗಮಂಡಲ, ಧರ್ಮಸ್ಥಳ, ಸಿದ್ದಾಪುರ, ಶಿರಾಲಿ, ಕುಮಟಾ, ಭಾಲ್ಕಿ, ನಿರ್ಣಾ, ಚಿಂಚೋಳಿ, ಪೊನ್ನಂಪೇಟೆ, ಸೋಮವಾರಪೇಟೆ, ದೇವನಹಳ್ಳಿ. ಗುಬ್ಬಿ, ಉಪ್ಪಿನಂಗಡಿ, ಅಂಕೋಲಾ, ಹುಮನಾಬಾದ್, ಮಂಠಾಳ, ಕಮಲಾಪುರ, ಸೇಡಂ, ತಾಳಗುಪ್ಪ, ಮಂಡಗದ್ದೆ, ಕಮ್ಮರಡಿ, ಮೂಡಿಗೆರೆ, ಬೇಲೂರು, ಸಾಲಿಗ್ರಾಮ, ರಾಯಲಪಾಡು, ಉತ್ತರಹಳ್ಳಿ, ದೊಡ್ಡಬಳ್ಳಾಪುರ, ತಿಪಟೂರು, ಕುಣಿಗಲ್, ಹೆಬ್ಬೂರು, ರಾಮನಗರ, ಚನ್ನಪಟ್ಟಣದಲ್ಲಿ ಮಳೆಯಾಗಿದೆ.

ಉತ್ತರ ಒಳನಾಡಿನ ಕಲಬುರಗಿ, ಬೀದರ್, ವಿಜಯಪುರ, ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಮತ್ತಷ್ಟು ಓದಿ: Karnataka Rain: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಸೆಪ್ಟೆಂಬರ್ 12ರವರೆಗೆ ಮಳೆಯ ಮುನ್ಸೂಚನೆ

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಕಳೆದ 3 ದಿನಗಳಿಂದ ಮಳೆಯಾಗುತ್ತಿದೆ. ಎಚ್​ಎಎಲ್​ನಲ್ಲಿ 28.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ