Karnataka Rain: ಬೆಂಗಳೂರು ಸೇರಿದಂತೆ ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆ ಸಾಧ್ಯತೆ

ಬೆಂಗಳೂರು ಸೇರಿದಂತೆ ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮುಂದಿನ 24 ಗಂಟೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

Karnataka Rain: ಬೆಂಗಳೂರು ಸೇರಿದಂತೆ ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆ ಸಾಧ್ಯತೆ
ಮಳೆ

Updated on: Oct 22, 2023 | 8:01 AM

ಬೆಂಗಳೂರು ಸೇರಿದಂತೆ ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮುಂದಿನ 24 ಗಂಟೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲೂ ಮಳೆಯಾಗಲಿದೆ. ಪಣಂಬೂರಿನಲ್ಲಿ ಮಳೆಯಾಗಿದೆ. ಶಿರಾಲಿಯಲ್ಲಿ 36.6 ಡಿಗ್ರಿ ಸೆಲ್ಸಿಯಸ್​ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ವಿಜಯಪುರದಲ್ಲಿ 17.5 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರಾವಳಿಯ ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ, ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗಲಿದೆ, ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬಾಗಲಕೋಟೆ, ಧಾರವಾಡ, ಗದಗ, ಕೊಪ್ಪಳ, ವಿಜಯಪುರ, ಯಾದಗಿರಿ, ರಾಯಚೂರು, ಮತ್ತು ಕಲಬುರ್ಗಿ ಹಾಗೂ ದಕ್ಷಿಣ ಒಳನಾಡಿನ ಚಿತ್ರದುರ್ಗ, ಹಾಸನ, ಮಂಡ್ಯ, ಮೈಸೂರು, ಶಿವಮೊಗ್ಗ, ಬಳ್ಳಾರಿ, ವಿಜಯಪುರ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶವು 2-3 ಡಿಗ್ರಿ ಸೆಲ್ಸಿಯಸ್​ಗಿಂತ ಹೆಚ್ಚಾಗುವ ಸಾಧ್ಯತೆ ಇದೆ.

ಮತ್ತಷ್ಟು ಓದಿ:Karnataka Rain: ಕರ್ನಾಟಕದ ಕರಾವಳಿಯಲ್ಲಿ ಅ.25ರವರೆಗೂ ಮಳೆ, ಈ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ ಹೆಚ್ಚಳ

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 29.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 31.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us