Karnataka Rain: ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆ

ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

Karnataka Rain: ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆ
ಮಳೆ
Image Credit source: The New Indian Express

Updated on: Sep 22, 2023 | 7:27 AM

ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಗೋಕರ್ಣ, ಕಾರವಾರ, ಅಂಕೋಲ, ಕುಮಟಾ, ತಿಪಟೂರು, ಕೂಟ, ಲೋಕಾಪುರ, ತುಮಕೂರು, ಬೆಳಿಕೇರಿ, ಹೊನ್ನಾವರ, ಶಿರಾಲಿ, ಬೆಳ್ತಂಗಡಿ, ಬೆಂಗಳೂರು ನಗರ, ಹುಣಸೂರು, ದಾವಣಗೆರೆಯಲ್ಲಿ ಮಳೆಯಾಗಿದೆ.

ನೈಋತ್ಯ ಮುಂಗಾರು ಕರಾವಳಿಯಲ್ಲಿ ಸಾಮಾನ್ಯವಾಗಿತ್ತು ಮತ್ತು ಒಳನಾಡಿನಲ್ಲಿ ದುರ್ಬಲವಾಗಿತ್ತು, ಕರಾವಳಿಯಲ್ಲಿ ಸಾಕಷ್ಟು ಮಳೆಯಾಗಿದೆ.
ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.

ಮತ್ತಷ್ಟು ಓದಿ:Karnataka Rain: ಕರ್ನಾಟಕದ ಈ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 27ರವರೆಗೂ ಮಳೆ

ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ವೇಗದಲ್ಲಿ ಇರುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 29.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us