Karnataka Rain: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ, 15ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ, 15ಕ್ಕೂ ಅಧಿಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ರಾಯಚೂರು, ವಿಜಯಪುರ, ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ನೀಡಲಾಗಿ
ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ, 15ಕ್ಕೂ ಅಧಿಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ರಾಯಚೂರು, ವಿಜಯಪುರ, ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ.
ಇನ್ನುಳಿದಂತೆ ಬೀದರ್, ಕಲಬುರಗಿ, ಕೊಪ್ಪಳ, ಯಾದಗಿರಿ, ಬಳ್ಳಾರಿ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ದಾವಣಗೆರೆ,ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ.
ತೊಂಡೇಭಾವಿ, ಗೋಕರ್ಣ, ಬೀದರ್, ಕಂಪ್ಲಿ, ಹೊನ್ನಾವರ, ಆಳಂದ, ಕುಕನೂರು, ಮಾನ್ವಿ, ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ಹೆಬ್ಬೂರು, ಕುಮಟಾ, ತಾಳಿಕೋಟೆ, ಚಿಂಚೋಳಿ, ಕೆಂಭಾವಿ, ದೊಡ್ಡಬಳ್ಳಾಪುರ, ಪುತ್ತೂರು, ಮಂಗಳೂರು, ಮಂಗಳೂರು ವಿಮಾನ ನಿಲ್ದಾಣ, ಅಂಕೋಲಾ, ಇಳಕಲ್, ನಿರ್ಣಾ, ಕಲಬುರ್ಗಿ,ಗುಂಡಗುರ್ತಿ, ಶಹಪುರ, ಶೋರಾಪುರದಲ್ಲಿ ಮಳೆಯಾಗಿದೆ.
ಮತ್ತಷ್ಟು ಓದಿ: Karnataka Rain: ಬೀದರ್, ವಿಜಯಪುರ ಸೇರಿದಂತೆ ರಾಜ್ಯದ ಉತ್ತರ ಒಳನಾಡಿನಲ್ಲಿ ಇಂದು ಧಾರಾಕಾರ ಮಳೆಯ ಮುನ್ಸೂಚನೆ
ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡಿನ ಹಲವು ಕಡೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಗದಗ, ಹಾವೇರಿ, ಧಾರವಾಡ ಬೆಳಗಾವಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ವೇಳೆ ಮಳೆಯಾಗುವ ನಿರೀಕ್ಷೆ ಇದೆ. ಎಚ್ಎಎಲ್ 28.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 29.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ