Karnataka Rain: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ, 15ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ, 15ಕ್ಕೂ ಅಧಿಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ರಾಯಚೂರು, ವಿಜಯಪುರ, ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ನೀಡಲಾಗಿ

Karnataka Rain: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ, 15ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​
ಮಳೆ
Image Credit source: DNA

Updated on: Sep 27, 2023 | 7:48 AM

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ, 15ಕ್ಕೂ ಅಧಿಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ರಾಯಚೂರು, ವಿಜಯಪುರ, ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ನೀಡಲಾಗಿದೆ.

ಇನ್ನುಳಿದಂತೆ ಬೀದರ್, ಕಲಬುರಗಿ, ಕೊಪ್ಪಳ, ಯಾದಗಿರಿ, ಬಳ್ಳಾರಿ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ದಾವಣಗೆರೆ,ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ.

ತೊಂಡೇಭಾವಿ, ಗೋಕರ್ಣ, ಬೀದರ್, ಕಂಪ್ಲಿ, ಹೊನ್ನಾವರ, ಆಳಂದ, ಕುಕನೂರು, ಮಾನ್ವಿ, ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ಹೆಬ್ಬೂರು, ಕುಮಟಾ, ತಾಳಿಕೋಟೆ, ಚಿಂಚೋಳಿ, ಕೆಂಭಾವಿ, ದೊಡ್ಡಬಳ್ಳಾಪುರ, ಪುತ್ತೂರು, ಮಂಗಳೂರು, ಮಂಗಳೂರು ವಿಮಾನ ನಿಲ್ದಾಣ, ಅಂಕೋಲಾ, ಇಳಕಲ್, ನಿರ್ಣಾ, ಕಲಬುರ್ಗಿ,ಗುಂಡಗುರ್ತಿ, ಶಹಪುರ, ಶೋರಾಪುರದಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rain: ಬೀದರ್, ವಿಜಯಪುರ ಸೇರಿದಂತೆ ರಾಜ್ಯದ ಉತ್ತರ ಒಳನಾಡಿನಲ್ಲಿ ಇಂದು ಧಾರಾಕಾರ ಮಳೆಯ ಮುನ್ಸೂಚನೆ

ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡಿನ ಹಲವು ಕಡೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಗದಗ, ಹಾವೇರಿ, ಧಾರವಾಡ ಬೆಳಗಾವಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ವೇಳೆ ಮಳೆಯಾಗುವ ನಿರೀಕ್ಷೆ ಇದೆ. ಎಚ್​ಎಎಲ್​ 28.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us