Karnataka Rain: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಮುಂದಿನ ಒಂದು ವಾರ ಮಳೆ ಸಾಧ್ಯತೆ

|

Updated on: Sep 18, 2023 | 7:37 AM

ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಸೆಪ್ಟೆಂಬರ್ 26ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

Karnataka Rain: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಮುಂದಿನ ಒಂದು ವಾರ ಮಳೆ ಸಾಧ್ಯತೆ
ಮಳೆ
Image Credit source: DNA
Follow us on

ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಸೆಪ್ಟೆಂಬರ್ 26ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಸಿದ್ದಾಪುರದಲ್ಲಿ ಅತಿ ಹೆಚ್ಚು ಮಳೆಯಾಗಿದೆ, ಗೇರುಸೊಪ್ಪ, ಕೊಲ್ಲೂರು, ಕೋಟ, ಕುಮಟಾ, ಕ್ಯಾಸಲ್​ರಾಕ್, ಹೊನ್ನಾವರ, ಶಿರಾಲಿ, ಬೆಳ್ತಂಗಡಿ, ಮಾಣಿ, ಕೊಟ್ಟಿಗೆಹಾರ, ಮಂಗಳೂರು, ಧರ್ಮಸ್ಥಳ, ಪಣಂಬೂರು, ಕದ್ರಾ, ಕಮ್ಮರಡಿ, ಮಂಗಳೂರು ವಿಮಾನ ನಿಲ್ದಾಣ, ಪುತ್ತೂರು, ಎಚ್​ಎಂಎಸ್​, ಉಪ್ಪಿನಂಗಡಿ,ಕುಂದಾಪುರ, ಕಾರ್ಕಳ, ಸಿದ್ದಾಪುರ, ಕಾರವಾರ, ಮಂಕಿ, ಉಡುಪಿ, ಚಿಕ್ಕಬಳ್ಳಾಪುರ, ತೊಂಡೆಭಾವಿ, ಕೊಪ್ಪ, ತುಮಕೂರು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಲಿಂಗನಮಕ್ಕಿ, ತಾಳಗುಪ್ಪ, ಮಂಚಿಕೆರೆ, ಅಂಕೋಲಾ, ಜೋಯಿಡಾ, ಯಲ್ಲಾಪುರ, ಚಿಂತಾಮಣಿ,ಸಂತೆಬೆನ್ನೂರು, ದೊಡ್ಡಬಳ್ಳಾಪುರ, ದೇವನಹಳ್ಳಿ, ಮಧುಗಿರಿ, ಹುಂಚದಕಟ್ಟೆ, ಎನ್​ಆರ್​ಪುರ, ಭಾಗಮಂಡಲ, ಪರಶುರಾಂಪುರ, ಕೋಲಾರದಲ್ಲಿ ಮಳೆಯಾಗಿದೆ.

ಕರಾವಳಿಯ ಬಹುತೇಕ ಕಡೆಗಳಲ್ಲಿ, ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rain: ಚೌತಿಯಂದು ಕರ್ನಾಟಕದ 5 ಜಿಲ್ಲೆಗಳಲ್ಲಿ ಭಾರಿ ಮಳೆ, ಯೆಲ್ಲೋ ಅಲರ್ಟ್​ ಘೋಷಣೆ

ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿ.ಮೀ ಇಂದ 55 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ವೇಳೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 29.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ