AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಕರ್ನಾಟಕದ ಕರಾವಳಿ ಭಾಗದಲ್ಲಿ ಜೂನ್ 30 ರಿಂದ ಭಾರಿ ಮಳೆ, ಆರೆಂಜ್ ಅಲರ್ಟ್ ಘೋಷಣೆ

ಕರ್ನಾಟಕದ ಕರಾವಳಿ ಭಾಗದಲ್ಲಿ ಜೂನ್ 30 ರಿಂದ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜೂನ್ 27ರಿಂದ 30ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ದಕ್ಷಿಣ ಕನ್ನಡ(Dakshina Kannada), ಉತ್ತರ ಕನ್ನಡ(Uttara Kannada), ಉಡುಪಿ(Udupi) ಜಿಲ್ಲೆಗಳಿಗೆ ಅತಿ ಹೆಚ್ಚು ಮಳೆಯಾಗಲಿದೆ

Karnataka Rain: ಕರ್ನಾಟಕದ ಕರಾವಳಿ ಭಾಗದಲ್ಲಿ ಜೂನ್ 30 ರಿಂದ ಭಾರಿ ಮಳೆ, ಆರೆಂಜ್ ಅಲರ್ಟ್ ಘೋಷಣೆ
ಮಳೆ
TV9 Web
| Updated By: ನಯನಾ ರಾಜೀವ್|

Updated on:Jun 26, 2022 | 3:07 PM

Share

ಕರ್ನಾಟಕದ ಕರಾವಳಿ ಭಾಗದಲ್ಲಿ ಜೂನ್ 30 ರಿಂದ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜೂನ್ 27ರಿಂದ 30ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ದಕ್ಷಿಣ ಕನ್ನಡ(Dakshina Kannada), ಉತ್ತರ ಕನ್ನಡ(Uttara Kannada), ಉಡುಪಿ(Udupi) ಜಿಲ್ಲೆಗಳಿಗೆ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ್, ಹಾವೇರಿ, ಕಲಬುರಗಿ, ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ರಾಮನಗರದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದ್ದು, ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ದಬಕ 8 ಸೆಂ.ಮೀ, ಗೇರುಸೊಪ್ಪ, ಭಾಗಮಂಡಲದಲ್ಲಿ 7 ಸೆಂ.ಮೀ ಮಳೆಯಾಗಿದೆ.

ಇದನ್ನೂ ಓದಿ

ಕದ್ರಾ, ಗೋಕರ್ಣ, ಅಂಕೋಲಾ, ಔರಾದ್, ನಿಲ್ಕುಂದ, ಕಾರವಾರ, ಸಿದ್ದಾಪುರ, ಯಲ್ಲಾಪುರ, ಮಂಕಿ, ಧರ್ಮಸ್ಥಳ, ಶಿರಾಲಿ, ಕುಮಟಾ, ಮಂಚಿಕೆರೆ, ನಾಪೋಕ್ಲು, ಉಡುಪಿ, ಕಾರ್ಕಳ, ಕುಂದಾಪುರ, ಮುಲ್ಕಿ, ಪಣಂಬೂರು, ಹೊನ್ನಾವರ, ಕಲಬುರ್ಗಿ, ಹಾಸನ, ಜಯಪುರ, ವಿರಾಜಪೇಟೆಯಲ್ಲಿ ಮಳೆಯಾಗಿದೆ.

ಮುಂದಿನ 24 ಗಂಟೆಗಳಲ್ಲಿ ಕರಾವಳಿ ಭಾಗದಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗಲಿದೆ ಎಂದು ಹೇಳಲಾಗಿದೆ. ಮುಂದಿನ 24 ಗಂಟೆಗಳಲ್ಲಿ ಬಳ್ಳಾರಿ, ಕೋಲಾರ, ಚಿಕ್ಕಬಳ್ಳಾಪುರ , ಕೋಲಾರ ಹೊರತುಪಡಿಸಿ ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಕರ್ನಾಟಕದ ಕರಾವಳಿಯಲ್ಲಿ ಗಾಳಿಯು 40-50 ಕಿ.ಮೀ ವೇಗದಲ್ಲಿ ಮೀಸಲಿದೆ, ಮೇಲ್ಮೈ ಸುಳಿಗಾಳಿ 60 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ ಹಾಗಾಗಿ ಆ ಸಮಯದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

Published On - 3:07 pm, Sun, 26 June 22