Karnataka Rain: ಕರಾವಳಿ ಜಿಲ್ಲೆಗಳಲ್ಲಿ ಸೆ.30ರಿಂದ ಮೂರು ದಿನಗಳ ಕಾಲ ವರುಣನ ಆರ್ಭಟ ಜೋರು, ಆರೆಂಜ್ ಅಲರ್ಟ್​ ಘೋಷಣೆ

|

Updated on: Sep 29, 2023 | 7:33 AM

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 30ರಿಂದ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದ್ದು ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಅಕ್ಟೋಬರ್ ಎರಡರವರೆಗೂ ಮಳೆಯಾಗಲಿದೆ. ಅಷ್ಟೇ ಅಲ್ಲದೆ ಬೆಳಗಾವಿ, ಬೀದರ್, ಧಾರವಾಡ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಕೂಡ ಅಧಿಕ ಮಳೆ ಸುರಿಯಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Karnataka Rain: ಕರಾವಳಿ ಜಿಲ್ಲೆಗಳಲ್ಲಿ ಸೆ.30ರಿಂದ ಮೂರು ದಿನಗಳ ಕಾಲ ವರುಣನ ಆರ್ಭಟ ಜೋರು, ಆರೆಂಜ್ ಅಲರ್ಟ್​ ಘೋಷಣೆ
ಮಳೆ
Image Credit source: The Weather Channel
Follow us on

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 30ರಿಂದ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದ್ದು ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಅಕ್ಟೋಬರ್ ಎರಡರವರೆಗೂ ಮಳೆಯಾಗಲಿದೆ. ಅಷ್ಟೇ ಅಲ್ಲದೆ ಬೆಳಗಾವಿ, ಬೀದರ್, ಧಾರವಾಡ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಕೂಡ ಅಧಿಕ ಮಳೆ ಸುರಿಯಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು,ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಪಣಂಬೂರು,ಕಾರ್ಕಳ, ಕೋಟ, ನರಗುಂದ, ಮಂಗಳೂರು ವಿಮಾನ ನಿಲ್ದಾಣ, ಕಾರವಾರ, ಕ್ಯಾಸಲ್​ರಾಕ್, ಗೇರುಸೊಪ್ಪ, ಕುಕನೂರು, ಪುತ್ತೂರು, ಮಾಣಿ, ಬೆಳ್ತಂಗಡಿ, ಕದ್ರಾ, ಗೋಕರ್ಣ, ಶಿರಾಲಿ, ಯಡ್ವಾಡ, ಯಲ್ಲಾಪುರ, ಮಂಕಿ, ಕುಮಟಾ, ಚಿಕ್ಕೋಡಿ, ಕಲಘಟಗಿ, ಮಹಾಲಿಂಗಪುರ, ಹುಣಸೂರು, ಮಂಚಿಕೆರೆ, ಸುಳ್ಯ, ಧರ್ಮಸ್ಥಳ, ಕೊಲ್ಲೂರು, ಕುಂದಾಪುರ, ಹೊನ್ನಾವರ, ಹುಕ್ಕೇರಿ, ಗೋಕಾಕ್, ಚಿಂಚೋಳಿ, ಕೊಟ್ಟಿಗೆಹಾರ, ಎಲೆಕ್ಟ್ರಾನಿಕ್ ಸಿಟಿ, ಭಾಗಮಂಡಲ, ಕುಡತಿನಿಯಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rain: ಅಕ್ಟೋಬರ್ 2ರವರೆಗೆ ಕರ್ನಾಟಕದಾದ್ಯಂತ ಮಳೆ, 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಹಲವು ಕಡೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ.
ಕರಾವಳಿಯಲ್ಲಿ ಗಾಳಿಯು ಗಂಟೆಗೆ 40-45 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಎಚ್​ಎಎಲ್​ನಲ್ಲಿ 29.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ