Karnataka Rain: ಅಕ್ಟೋಬರ್ 24ರವರೆಗೆ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ

ಅಕ್ಟೋಬರ್ 24ರವರೆಗೆ 14ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೊಡಗು ಹಾಗೂ ಮೈಸೂರಿನಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಹಾಸನ, ಮಂಡ್ಯ, ಶಿವಮೊಗ್ಗದಲ್ಲಿ ಮಳೆಯಾಗಲಿದೆ.

Karnataka Rain: ಅಕ್ಟೋಬರ್ 24ರವರೆಗೆ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ
ಮಳೆImage Credit source: Mint
Follow us
ನಯನಾ ರಾಜೀವ್
|

Updated on: Oct 18, 2023 | 7:25 AM

ಅಕ್ಟೋಬರ್ 24ರವರೆಗೆ ಕರ್ನಾಟಕದ 14ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೊಡಗು ಹಾಗೂ ಮೈಸೂರಿನಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಹಾಸನ, ಮಂಡ್ಯ, ಶಿವಮೊಗ್ಗದಲ್ಲಿ ಮಳೆಯಾಗಲಿದೆ.

ವಿರಾಜಪೇಟೆ, ಮಂಗಳೂರು ವಿಮಾನ ನಿಲ್ದಾಣ, ಜಯಪುರ, ಪಣಂಬೂರು, ಉಡುಪಿ, ಟಿ ನರಸೀಪುರ, ಹುಣಸೂರು, ಮಾಣಿ, ಮಂಗಳೂರು, ಬೆಳ್ತಂಗಡಿ, ಧರ್ಮಸ್ಥಳ, ಯಲ್ಲಾಪುರ, ಕದ್ರಾ, ಗೋಕರ್ಣ, ಸಿದ್ದಾಪುರ, ಶೃಂಗೇರಿ, ಮೈಸೂರು, ಮುಲ್ಕಿ, ಪುತ್ತೂರು, ಕಿರವತ್ತಿ, ಕೋಟ, ಕೊಲ್ಲೂರು, ಕಡೂರು, ತರೀಕೆರೆ, ಕಮ್ಮರಡಿ, ಹಾರಂಗಿ, ಅರಕಲಗೂಡು, ಹಾಸನ, ಬೆಳ್ಳೂರು, ಕುಣಿಗಲ್​ನಲ್ಲಿ ಮಳೆಯಾಗಿದೆ. ಸಾಲಿಗ್ರಾಮ, ಕೆಆರ್​ಪೇಟೆಯಲ್ಲಿ ಅತಿ ಹೆಚ್ಚು ಮಳೆಯಾಗಿದೆ.

ನೈಋತ್ಯ ಮುಂಗಾರು ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು, ಉತ್ತರ ಒಳನಾಡಿನಲ್ಲಿ ದುರ್ಬಲವಾಗಿತ್ತು. ಕಲಬುರ್ಗಿಯಲ್ಲಿ 35.2 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ವಿಜಯಪುರದಲ್ಲಿ 18.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಹಲವು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ ಹಾಗೂ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕಲಬುರ್ಗಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 2-3 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಮಂಡ್ಯ, ಮೈಸೂರು, ಚಿತ್ರದುರ್ಗ, ಹಾಸನ, ಬಳ್ಳಾರಿ, ವಿಜಯನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಾಗಲಿದೆ. ಬೆಂಗಳೂರಿನಲ್ಲಿ ಬೆಳಗ್ಗೆ ಶುಭ್ರ ಆಕಾಶವಿರಲಿದ್ದು, ಮಧ್ಯಾಹ್ನದ ಬಳಿಕ ಮೋಡಕವಿದ ವಾತಾವರಣ ನಿರ್ಮಾಣವಾಗಲಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ

ಎಚ್​ಎಎಲ್​ನಲ್ಲಿ 29.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ