AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಬೀದರ್, ವಿಜಯಪುರ ಸೇರಿದಂತೆ ರಾಜ್ಯದ ಉತ್ತರ ಒಳನಾಡಿನಲ್ಲಿ ಇಂದು ಧಾರಾಕಾರ ಮಳೆಯ ಮುನ್ಸೂಚನೆ

ಬೀದರ್, ವಿಜಯಪುರ, ಕಲಬುರ್ಗಿ ಸೇರಿದಂತೆ ರಾಜ್ಯದ ಉತ್ತರ ಒಳನಾಡಿನಲ್ಲಿ ಇಂದು ಭಾರಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಈ ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

Karnataka Rain: ಬೀದರ್, ವಿಜಯಪುರ ಸೇರಿದಂತೆ ರಾಜ್ಯದ ಉತ್ತರ ಒಳನಾಡಿನಲ್ಲಿ ಇಂದು ಧಾರಾಕಾರ ಮಳೆಯ ಮುನ್ಸೂಚನೆ
ಮಳೆImage Credit source: Mint
ನಯನಾ ರಾಜೀವ್
|

Updated on:Sep 23, 2023 | 7:36 AM

Share

ಬೀದರ್, ವಿಜಯಪುರ, ಕಲಬುರ್ಗಿ ಸೇರಿದಂತೆ ರಾಜ್ಯದ ಉತ್ತರ ಒಳನಾಡಿನಲ್ಲಿ ಇಂದು ಭಾರಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಈ ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಸೇಡಂನಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಚಿಂಚೋಳಿ, ಕದ್ರಾ, ಚಿತ್ತಾಪುರ, ಸೈದಾಪುರ, ಇಂಡಿ, ಕಾರವಾರ, ಮುಧೋಳ, ಜೇವರ್ಗಿ, ಶಹಾಪುರ, ಬೆಂಗಳೂರು ನಗರ, ಕುಣಿಗಲ್, ಕ್ಯಾಸಲ್​ರಾಕ್, ಗೇರುಸೊಪ್ಪ, ಆಳಂದ, ನೆಲೋಗಿ, ಅಡಕಿ, ಯಡ್ರಾಮಿ, ಗುಂಡಗುರ್ತಿ, ಕಟ್ಕೋಲ್, ದೇವದುರ್ಗ, ಧಾರವಾಡ, ಕುಂದಗೋಳ, ಬೀದರ್, ಔರಾದ್, ದೇವರಹಿಪ್ಪರಗಿ, ಶ್ರೀರಂಗಪಟ್ಟಣ, ಪೊನ್ನಂಪೇಟೆ, ಬೆಂಗಳೂರು ಎಚ್​ಎಎಲ್​ ವಿಮಾನ ನಿಲ್ದಾಣದ ಬಳಿ ಮಳೆಯಾಗಿದೆ.

ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಹಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆಗಳಿಲ್ಲ.

ಮತ್ತಷ್ಟು ಓದಿ: Karnataka Rain: ಕರ್ನಾಟಕದ ಈ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 27ರವರೆಗೂ ಮಳೆ

ಬೆಂಗಳೂರಿನಲ್ಲಿ ಬೆಳಗ್ಗೆ ಸ್ವಲ್ಪ ಬಿಸಿಲು ಕಾಣಿಸಿಕೊಂಡಿದೆ, ಮಧ್ಯಾಹ್ನದ ಬಳಿಕ ಮೋದಕವಿದ ವಾತಾವರಣ ನಿರ್ಮಾಣವಾಗಲಿದ್ದು ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 28.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 27.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:34 am, Sat, 23 September 23

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್