Karnataka Weather: ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ನವೆಂಬರ್ 16ರಿಂದ ಎರಡು ದಿನ ಮಳೆ, ಉಳಿದೆಡೆ ಒಣಹವೆ

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ನವೆಂಬರ್ 16ರಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

Karnataka Weather: ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ನವೆಂಬರ್ 16ರಿಂದ ಎರಡು ದಿನ ಮಳೆ, ಉಳಿದೆಡೆ ಒಣಹವೆ
ಮಳೆ
Image Credit source: Hindustan Times

Updated on: Nov 12, 2023 | 8:22 AM

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ನವೆಂಬರ್ 16ರಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಉಡುಪಿ, ಕೋಟ, ಪಣಂಬೂರು, ಉಪ್ಪಿನಂಗಡಿ, ಕೊಟ್ಟಿಗೆಹಾರದಲ್ಲಿ ಮಳೆಯಾಗಿದೆ. ವಿಜಯಪುರದಲ್ಲಿ 18.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರಾವಳಿಯ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ತುಂತುರು ಮಳೆಯಾಗುವ ಸಾಧ್ಯತೆ ಇದೆ.

ಮತ್ತಷ್ಟು ಓದಿ: Karnataka Weather: ಬೆಂಗಳೂರು ಸೇರಿ ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಯೊಳಗೆ ಧಾರಾಕಾರ ಮಳೆ

ಎಚ್​ಎಎಲ್​ನಲ್ಲಿ 28.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ  ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us