Karnataka Rains: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿಗೆ ಆರೆಂಜ್ ಅಲರ್ಟ್, ಎರಡು ದಿನ ಭಾರಿ ಮಳೆ​

ಕರ್ನಾಟಕದಾದ್ಯಂತ ಮುಂಗಾರು ಚುರುಕು ಪಡೆಯುತ್ತಿದೆ. ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮುಂದಿನ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದ್ದು, ಮುಂದಿನ ಎರಡು ದಿನ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ತುಮಕೂರು, ಶಿವಮೊಗ್ಗ, ಮೈಸೂರು, ಕೊಡಗು, ಹಾಸನ, ಬಳ್ಳಾರಿ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Karnataka Rains: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿಗೆ ಆರೆಂಜ್ ಅಲರ್ಟ್, ಎರಡು ದಿನ ಭಾರಿ ಮಳೆ​
ಮಳೆImage Credit source: Native Planet
Follow us
ನಯನಾ ರಾಜೀವ್
|

Updated on: Aug 16, 2024 | 7:41 AM

ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದ್ದು, ಮುಂದಿನ ಎರಡು ದಿನ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.

ತುಮಕೂರು, ಶಿವಮೊಗ್ಗ, ಮೈಸೂರು, ಕೊಡಗು, ಹಾಸನ, ಬಳ್ಳಾರಿ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೀದರ್, ಹಾವೇರಿ, ಕಲಬುರಗಿ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ, ವಿಜಯನಗರ ಜಿಲ್ಲೆಗಳಲ್ಲೂ ಮಳೆಯಾಗಲಿದೆ.

ಗಂಗಾವತಿ, ಧರ್ಮಸ್ಥಳ, ರೋಣ, ಬೆಳ್ತಂಗಡಿ, ಬಾದಾಮಿ, ತ್ಯಾಗರ್ತಿ, ಪುತ್ತೂರು, ಅಜ್ಜಂಪುರ, ಕುಡತಿನಿ, ನಾಯಕನಹಟ್ಟಿ, ಎಂಎಂಹಿಲ್ಸ್​, ಬನವಾಸಿ, ಮಾಣಿ, ಪಣಂಬೂರು, ಸಿದ್ದಾಪುರ, ಉಪ್ಪಿನಂಗಡಿ, ಕಾರ್ಕಳ, ಮಂಗಳೂರು, ಗದಗ, ಕುಷ್ಟಗಿ, ಬೆಳ್ಳಟ್ಟಿ, ಬೈಲಹೊಂಗಲ, ಹೊನ್ನಾಳಿ, ತರೀಕೆರೆ, ಗುಂಡ್ಲುಪೇಟೆ, ಶಿವಮೊಗ್ಗ, ಕಳಸ, ಕಡೂರು, ಎನ್​ಆರ್​ಪುರ, ಲಿಂಗನಮಕ್ಕಿ, ಕೊಳ್ಳೇಗಾಲ, ಚನ್ನಗಿರಿ, ಭಾಗಮಂಡಲ, ಯುಗಟಿಯಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಹೆಚ್ಚಲಿದೆ ಮಳೆಯ ಅಬ್ಬರ, ಆರೆಂಜ್, ಯೆಲ್ಲೋ ಅಲರ್ಟ್​

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 31.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 31.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 31.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 26.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 32.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್​ ಕನಬಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 32.5ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೀದರ್​ನಲ್ಲಿ 30.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 33.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 32.7ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 31.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 32.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 33.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 26.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 31.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.2ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮೋಕ್ಷಿತಾ ಈಗ ಯುವರಾಣಿ; ಇಬ್ಭಾಗವಾದ ಬಿಗ್ ಬಾಸ್ ಮನೆ
ಮೋಕ್ಷಿತಾ ಈಗ ಯುವರಾಣಿ; ಇಬ್ಭಾಗವಾದ ಬಿಗ್ ಬಾಸ್ ಮನೆ
6,6,6,6,6: RCB ಆಟಗಾರ ಲಿಯಾಮ್ ಲಿವಿಂಗ್​ಸ್ಟೋನ್ ಸಿಡಿಲಬ್ಬರ ಶುರು
6,6,6,6,6: RCB ಆಟಗಾರ ಲಿಯಾಮ್ ಲಿವಿಂಗ್​ಸ್ಟೋನ್ ಸಿಡಿಲಬ್ಬರ ಶುರು
Daily Devotional: ಪುಣ್ಯಕ್ಷೇತ್ರಗಳಿಗೆ ತೆರಳುವಾಗ ಅಪಘಾತವಾದರೆ ಏನರ್ಥ
Daily Devotional: ಪುಣ್ಯಕ್ಷೇತ್ರಗಳಿಗೆ ತೆರಳುವಾಗ ಅಪಘಾತವಾದರೆ ಏನರ್ಥ
Daily Horoscope: ಈ ರಾಶಿಯವರ ವ್ಯಾಪಾರದ ತೊಂದರೆಗಳು ನಿವಾರಣೆಯಾಗುತ್ತದೆ
Daily Horoscope: ಈ ರಾಶಿಯವರ ವ್ಯಾಪಾರದ ತೊಂದರೆಗಳು ನಿವಾರಣೆಯಾಗುತ್ತದೆ
ಹನುಮಂತನೊಟ್ಟಿಗೆ ಜಗಳ, ಮಹಾಪ್ರಭುಗಳ ಆಜ್ಞೆಯನ್ನೂ ಧಿಕ್ಕರಿಸಿದ ಶೋಭಾ ಶೆಟ್ಟಿ
ಹನುಮಂತನೊಟ್ಟಿಗೆ ಜಗಳ, ಮಹಾಪ್ರಭುಗಳ ಆಜ್ಞೆಯನ್ನೂ ಧಿಕ್ಕರಿಸಿದ ಶೋಭಾ ಶೆಟ್ಟಿ
ಸರ್ಕಾರದ ಎಲ್ಲ ಹಗರಣಗಳನ್ನು ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ: ಅಶೋಕ
ಸರ್ಕಾರದ ಎಲ್ಲ ಹಗರಣಗಳನ್ನು ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ: ಅಶೋಕ
ಸರ್ಕಾರ ಯಾವುದೇ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸುವುದಿಲ್ಲ: ಶಿವಕುಮಾರ್
ಸರ್ಕಾರ ಯಾವುದೇ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸುವುದಿಲ್ಲ: ಶಿವಕುಮಾರ್
ಬಾಂಗ್ಲಾದೇಶದಲ್ಲಿ ಹಿಂದೂಗಳ ಸ್ಥಿತಿ ಅತ್ಯಂತ ಕಳವಳಕಾರಿಯಾಗಿದೆ: ಸಿಟಿ ರವಿ
ಬಾಂಗ್ಲಾದೇಶದಲ್ಲಿ ಹಿಂದೂಗಳ ಸ್ಥಿತಿ ಅತ್ಯಂತ ಕಳವಳಕಾರಿಯಾಗಿದೆ: ಸಿಟಿ ರವಿ
ಬಿಜೆಪಿ ಚುನಾವಣೆಯಲ್ಲಿ ಸೋತಾಗಲೂ ಅಪ್ಪ-ಮಗ ಹೊಣೆ ಹೊರಬೇಕು: ಯತ್ನಾಳ್
ಬಿಜೆಪಿ ಚುನಾವಣೆಯಲ್ಲಿ ಸೋತಾಗಲೂ ಅಪ್ಪ-ಮಗ ಹೊಣೆ ಹೊರಬೇಕು: ಯತ್ನಾಳ್
ಸಹೋದರನ ಮದುವೆಗೆ 35 ಅಡಿ ಉದ್ದದ ನೋಟಿನ ಮಾಲೆ ಉಡುಗೊರೆಯಾಗಿ ನೀಡಿದ ಅಣ್ಣ
ಸಹೋದರನ ಮದುವೆಗೆ 35 ಅಡಿ ಉದ್ದದ ನೋಟಿನ ಮಾಲೆ ಉಡುಗೊರೆಯಾಗಿ ನೀಡಿದ ಅಣ್ಣ