Karnataka Rains: ಜುಲೈ 13ರಿಂದ ಕರ್ನಾಟಕದ ಕರಾವಳಿ ಸೇರಿ 13 ಜಿಲ್ಲೆಗಳಲ್ಲಿ ಮತ್ತಷ್ಟು ಹೆಚ್ಚಲಿದೆ ಮಳೆಯ ಅಬ್ಬರ

ಕರ್ನಾಟಕದಾದ್ಯಂತ ಕಳೆದ ಒಂದು ವಾರದಿಂದೀಚೆಗೆ ಭಾರಿ ಮಳೆಯಾಗುತ್ತಿದೆ. ಮಲೆನಾಡು, ಕರಾವಳಿ ಭಾಗಗಳಲ್ಲಿ ಅತಿ ಹೆಚ್ಚಿನ ಮಳೆ ಕಂಡುಬಂದಿದೆ. ಇದೀಗ ಜುಲೈ 13ರಿಂದ ಮೂರು ದಿನಗಳ ಕಾಲ ಕರಾವಳಿ ಸೇರಿದಂತೆ ಒಟ್ಟು 13ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Rains: ಜುಲೈ 13ರಿಂದ ಕರ್ನಾಟಕದ ಕರಾವಳಿ ಸೇರಿ 13 ಜಿಲ್ಲೆಗಳಲ್ಲಿ ಮತ್ತಷ್ಟು ಹೆಚ್ಚಲಿದೆ ಮಳೆಯ ಅಬ್ಬರ
ಮಳೆ
Image Credit source: Herzindagi

Updated on: Jul 11, 2024 | 7:51 AM

ಕರ್ನಾಟಕದಲ್ಲಿ ವರುಣನ ಆರ್ಭಟ ಮುಂದುವರೆದಿದೆ. ಕರಾವಳಿ ಹಾಗೂ ಮಲೆನಾಡಿನಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದೆ. ಅದನ್ನು ಹೊರತುಪಡಿಸಿ ಉತ್ತರ ಒಳನಾಡಿನಲ್ಲೂ ಮಳೆ ಶುರುವಾಗಿದೆ.
ಜುಲೈ 13ರಿಂದ ಮೂರು ದಿನಗಳ ಕಾಲ 13 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಹೆಚ್ಚು ಮಳೆ ಸುರಿಯಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.
ಗದಗ, ಹಾವೇರಿ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಉಪ್ಪಿನಂಗಡಿ, ಮಂಗಳೂರು ವಿಮಾನ ನಿಲ್ದಾಣ, ಕೋಟ, ಮಂಗಳೂರು, ಮಾಣಿ, ಉಡುಪಿ, ಪಣಂಬೂರು, ಧರ್ಮಸ್ಥಳ, ಬೆಳ್ತಂಗಡಿ, ಕಾರ್ಕಳ, ಕೊಟ್ಟಿಗೆಹಾರ, ಕಳಸ, ಶಿರಾಲಿ, ಕುಂದಾಪುರ, ಮುಲ್ಕಿ, ಕಾರವಾರ, ಜೋಯಿಡಾ, ಪುತ್ತೂರು, ಭಾಗಮಂಡಲ, ಕದ್ರಾ, ಮುದಗಲ್, ಪೊನ್ನಂಪೇಟೆ, ಶೃಂಗೇರಿ, ಬೇಲೂರು, ಹುಂಚದಕಟ್ಟೆಯಲ್ಲಿ ಮಳೆಯಾಗಿದೆ.

Karnataka Rains: ಕರ್ನಾಟಕ ಕರಾವಳಿಯಲ್ಲಿ ಮುಂದುವರೆಯಲಿದೆ ಮಳೆ, ಆರೆಂಜ್​ ಅಲರ್ಟ್

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಮಧ್ಯಾಹ್ನದ ಬಳಿಕ ಮಳೆಯಾಗುವ ನಿರೀಕ್ಷೆ ಇದೆ. ಎಚ್​ಎಎಲ್​ನಲ್ಲಿ 26.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 26.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 27.4ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 28.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 28.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 28.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಿಜಯಪುರದಲ್ಲಿ 29.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 26.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 28.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 30.9ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ,22.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us