AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಕರ್ನಾಟಕದಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆ, 9 ಜಿಲ್ಲೆಗಳಿಗೆ ರೆಡ್ ಅಲರ್ಟ್​

ಕರ್ನಾಟಕದಲ್ಲಿ ಜೂನ್ 13ರಿಂದ ಮಳೆಯ ಪ್ರಮಾಣ ಮತ್ತಷ್ಟು ಹೆಚ್ಚಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.ವಿಜಯನಗರ, ಮೈಸೂರು, ಹಾಸನ, ದಾವಣಗೆರೆ, ಕೊಪ್ಪಳ, ರಾಯಚೂರು, ಗದಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Karnataka Rains: ಕರ್ನಾಟಕದಲ್ಲಿ ಮುಂದಿನ 48 ಗಂಟೆಗಳಲ್ಲಿ  ಭಾರಿ ಮಳೆ, 9 ಜಿಲ್ಲೆಗಳಿಗೆ ರೆಡ್ ಅಲರ್ಟ್​
ಮಳೆImage Credit source: PTI
ನಯನಾ ರಾಜೀವ್
|

Updated on: Jun 11, 2025 | 7:50 AM

Share

ಬೆಂಗಳೂರು, ಜೂನ್ 11: ಕರ್ನಾಟಕದಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆ(Rain)ಯಾಗುವ ಸಾಧ್ಯತೆ ಇದ್ದು, 9 ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.ವಿಜಯನಗರ, ಮೈಸೂರು, ಹಾಸನ, ದಾವಣಗೆರೆ, ಕೊಪ್ಪಳ, ರಾಯಚೂರು, ಗದಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಮಂಗಳವಾರ ರಾತ್ರಿ ಬೆಂಗಳೂರು ಸೇರಿ ಕರ್ನಾಟಕದ ವಿವಿಧೆಡೆ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ. ಔರಾದ್, ಬೀದರ್, ಬರಗೂರು, ಅಣ್ಣಿಗೆರೆ, ಹುಮ್ನಾಬಾದ್, ಚಿತ್ತಾಪುರ್, ಚಿಟಗುಪ್ಪ, ಸಿರಾ, ಬೆಂಗಳೂರು, ದಾವಣಗೆರೆ, ಮದ್ದೂರು, ಗುಬ್ಬಿ, ಜಗಳೂರು, ಹಿರಿಯೂರು, ಇಂಡಿ, ಭಾಲ್ಕಿ, ಸೇಡಂ, ಕಾರ್ಕಳ, ಮಂಗಳೂರು, ಬಂಟವಾಳ, ಕುಂದಾಪುರ, ಜಿಕೆವಿಕೆಯಲ್ಲಿ ಮಳೆಯಾಗಿದೆ. ಮುಂಗಾರು ಪೂರ್ವ ಮಳೆ ಹೊಯ್ದು ಮುಂಗಾರು ಆರಂಭವಾದ ಬಳಿಕ ಮಳೆಯೇ ಇರಲಿಲ್ಲ, ಈಗ ಮತ್ತೆ ಜೂನ್ 10ರಿಂದ ಮುಂಗಾರು ಚುರುಕುಗೊಂಡಿದೆ.

ಬೆಂಗಳೂರು ಎಚ್​ಎಎಲ್​ನಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 31.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಬೆಂಗಳೂರು ಸೇರಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಚುರುಕು

ಬೆಳಗಾವಿಯಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ಬೀದರ್​​ನಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಬಾಗಲಕೋಟೆಯಲ್ಲಿ 32.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 29.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 31.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 32.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!