AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಮಳೆ ಮುಂದುವರಿಕೆ: ಈ ಜಿಲ್ಲೆಗಳಲ್ಲಿ ಆ.30ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ಕರ್ನಾಟಕದ ಮೇಲೆ ಬಿದ್ದಿದೆ. ಹೀಗಾಗಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ವರುಣ ಅಬ್ಬರ ಮುಂದುವರೆದಿದೆ. ಇದರಿಂದ ಮುಂಜಾಗ್ರತೆ ಕ್ರಮವಾಗಿ ರಾಜ್ಯದ ಕೆಲವೊಂದು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹಾಗಾದ್ರೆ, ಯಾವೆಲ್ಲಾ ಜಿಲ್ಲೆಗಳಲ್ಲಿ ನಾಳೆ(ಆಗಸ್ಟ್ 30) ಶಾಲಾ-ಕಾಲೇಜಿಗೆ ರಜೆ ನೀಡಲಾಗಿದೆ ಎನ್ನುವ ವಿವರ ಇಲ್ಲಿದೆ.

ಕರ್ನಾಟಕದಲ್ಲಿ  ಮಳೆ ಮುಂದುವರಿಕೆ: ಈ ಜಿಲ್ಲೆಗಳಲ್ಲಿ ಆ.30ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
Holiday
ರಮೇಶ್ ಬಿ. ಜವಳಗೇರಾ
|

Updated on:Aug 29, 2025 | 11:15 PM

Share

ಚಿಕ್ಕಮಗಳೂರು/ಕಾರವಾರ, (ಆಗಸ್ಟ್ 29): ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ವರುಣ ಅಬ್ಬರ ಮುಂದುವರೆದಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯ ವಿವಿಧ ಜಿಲ್ಲೆಗಳಲ್ಲಿ ಮುಂದಿನ ತಿಂಗಳು ಅಂದರೆ ಸೆಪ್ಟೆಂಬರ್ ಮೊದಲ ವಾರದವರೆಗೂ ಮಳೆ ಅಬ್ಬರ ಇರಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ನಾಳೆ (ಆಗಸ್ಟ್ 30) ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ರಜೆ

ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದೆ. ಅದರಲ್ಲೂ ಕರಾವಳಿ ಭಾಗದಲ್ಲಿ ಮಳೆಯ ಪ್ರಮಾಣ ತೀವ್ರವಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಚಿಕ್ಕಮಗಳೂರು ಜಿಲ್ಲೆಯ ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್‌.ಆರ್.ಪುರ ತಾಲೂಕಿನ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆ (ಆಗಸ್ಟ್ 30) ರಜೆ ಘೋಷಿಸಲಾಗಿದೆ.

‌ಚಿಕ್ಕಮಗಳೂರು ತಾಲೂಕಿನ ಜಾಗರ, ಖಾಂಡ್ಯ, ಆಲ್ದೂರು, ಕಸಬಾ, ಅಂಬಳೆ, ವಸ್ತಾರೆ, ಆವತಿ ಹೋಬಳಿ ಹಾಗೂ ತರೀಕೆರೆ ತಾಲೂಕಿನ ಲಕ್ಕವಳ್ಳಿ ಹೋಬಳಿಯ ಲಿಂಗದಹಳ್ಳಿ ಹೋಬಳಿಯ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆ ರಜೆ ನೀಡಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ಮದ್ಯ ಪ್ರಿಯರಿಗೆ ಶಾಕ್: ಈ ದಿನದಂದು ಬಾರ್ ಬಂದ್, ಬೆಂಗಳೂರಿನಲ್ಲಿ ಎಣ್ಣೆ ಸಿಗಲ್ಲ

ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದೆ. ಅದರಲ್ಲೂ ಕರಾವಳಿ ಭಾಗದಲ್ಲಿ ಮಳೆಯ ಪ್ರಮಾಣ ತೀವ್ರವಾಗಿದ್ದು, ಗಣೇಶ ಚತುರ್ಥಿ ಹಬ್ಬವನ್ನು ಮಳೆಯಲ್ಲಿಯೇ ಅದ್ದೂರಿಯಾಗಿ ಆಚರಣೆ ಮಾಡಲಾಗಿದೆ. ಈ ವಾರ ಉತ್ತರ ಕನ್ನಡ ಜಿಲ್ಲೆ ವಿದ್ಯಾರ್ಥಿಗಳು ಗಣೇಶ ಚರ್ತುರ್ಥಿಯ ರಜೆ ಪಡೆದಿದ್ದ ಮರುದಿನವೇ ಮಳೆಯಿಂದಾಗಿ ರಜೆ ಪಡೆದುಕೊಂಡಿದ್ದರು. ಶುಕ್ರವಾರ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಗಿದ್ದರಿಂದ ಶಾಲಾ ಕಾಲೇಜುಗಳು ನಡೆದಿತ್ತು. ಅದರೆ, ಶನಿವಾರ ಭಾರೀ ಮಳೆಯಾಗುವ ಸೂಚನೆ ಇರುವ ಕಾರಣ ಉತ್ತರ ಕನ್ನಡ ಜಿಲ್ಲೆಯ ಶಾಲಾ ವಿದ್ಯಾರ್ಥಿಗಳಿಗೆ ನಾಳೆ( ಆಗಸ್ಟ್ 30) ರಜೆ ನೀಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ರಜೆ

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ವರುಣ ಅಬ್ಬರ ಜೋರಾಗಿರುವುದರಿಂದ ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ಮಾತ್ರ ರಜೆ ನೀಡಲಾಗಿದೆ. ಭಾರಿ ಮಳೆ ಸಾಧ್ಯತೆ ಹಿನ್ನಲೆ ಅಂಗನವಾಡಿಯಿಂದ ಪ್ರೌಢಶಾಲೆವರೆಗೆ ರಜೆ ಘೋಷಣೆ ಮಾಡಿ ದಕ್ಷಿಣಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಆದೇಶ ಹೊರಡಿಸಿದ್ದಾರೆ.

ಉತ್ತರ ಕನ್ನಡದಲ್ಲಿ ಮಳೆ ಮುಂದುವರಿದ ಮಳೆಯ ಆರ್ಭಟ

ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಮಳೆಯ ಆರ್ಭಟ ಮುಂದುರಿದೆ. ಹೀಗಾಗಿ ಹೊನ್ನಾವರ ತಾಲೂಕಿನ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆ ರಜೆ ನೀಡಿ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ. ಮಳೆಯಿಂದಾಗಿ ಈ ವಾರ ಹಲವು  ದಿನ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಆದ್ರೆ, ನಾಳೆ ಮಾತ್ರ ಹೊನ್ನಾವರ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:06 pm, Fri, 29 August 25