ಬೆಂಗಳೂರಿನಲ್ಲಿ ಇನ್ನೆರೆಡು ದಿನ ಮಳೆ ಅಬ್ಬರ: ಈ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ

ಬೆಂಗಳೂರಿನಲ್ಲಿ ಹವಾಮಾನ ಇಲಾಖೆ ತಜ್ಞ ಸಿ.ಎಸ್ ಪಾಟೀಲ್ ಮಾತನಾಡಿ, ಇಂದು ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಿದೆ. ಉತ್ತರ ಒಳನಾಡು ಹಾಗೂ ಕರಾವಳಿಯ ಹಲವು ಕಡೆ ಮಳೆಯಾಗಿದೆ. ಪ್ರಮುಖವಾಗಿ ಶಿವಮೊಗ್ಗ 10 ಸೆ.ಮೀ, ಹೊಸಕೋಟೆ 8 ಸೆ.ಮೀ, ಬೀದರ್‌ 4 ಸೆ.ಮೀ ಮಳೆಯಾಗಿದೆ. ಕರ್ನಾಟಕದಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದಿದ್ದಾರೆ.

ಬೆಂಗಳೂರಿನಲ್ಲಿ ಇನ್ನೆರೆಡು ದಿನ ಮಳೆ ಅಬ್ಬರ: ಈ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ
ಬೆಂಗಳೂರಿನಲ್ಲಿ ಇನ್ನೆರೆಡು ದಿನ ಮಳೆ ಅಬ್ಬರ: ಈ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Oct 20, 2024 | 3:54 PM

ಬೆಂಗಳೂರು, ಅಕ್ಟೋಬರ್​ 20: ಬಿಡುವು ಕೊಡದೇ ಸುರಿಯುತ್ತಿರುವ ಮಳೆಗೆ (rain) ಸಿಟಿ ಮಂದಿ ಹೈರಾಣಾಗಿದ್ದಾರೆ. ಮನೆಯಿಂದ ಹೊರಗೆ ಹೆಜ್ಜೆ ಇಡಲು ಆಗದಂತೆ ರಚ್ಚೆ ಹಿಡಿದಿದೆ. ಹಿಂಗಾರು ಮಳೆ ರಾಜ್ಯದಲ್ಲಿ ಹಲವು ಅವಾಂತರ ಸೃಷ್ಟಿಸಿದೆ. ಈ ಮಧ್ಯೆ ಕರ್ನಾಟಕದಲ್ಲಿ ಮುಂದಿನ ಐದು ದಿನ ಮಳೆಯಾಗಲಿದ್ದು, ಬೆಂಗಳೂರಿನಲ್ಲಿ 22ರ ವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸುಚನೆ ನೀಡಿದೆ.

ಹವಾಮಾನ ಇಲಾಖೆ ತಜ್ಞ ಸಿ.ಎಸ್ ಪಾಟೀಲ್ ಹೇಳಿದ್ದಿಷ್ಟು 

ಈ ಬಗ್ಗೆ ಟಿವಿ9 ಜೊತೆಗೆ ಹವಾಮಾನ ಇಲಾಖೆ ತಜ್ಞ ಸಿ.ಎಸ್ ಪಾಟೀಲ್ ಪ್ರತಿಕ್ರಿಯಿಸಿದ್ದು, ಇಂದು ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಿದೆ. ಉತ್ತರ ಒಳನಾಡು ಹಾಗೂ ಕರಾವಳಿಯ ಹಲವು ಕಡೆ ಮಳೆಯಾಗಿದೆ. ಪ್ರಮುಖವಾಗಿ ಶಿವಮೊಗ್ಗ 10 ಸೆ.ಮೀ, ಹೊಸಕೋಟೆ 8 ಸೆ.ಮೀ, ಬೀದರ್‌ 4 ಸೆ.ಮೀ ಮಳೆಯಾಗಿದೆ.

ಆಂಧ್ರ ಪ್ರದೇಶ ಹಾಗೂ ತಮಿಳುನಾಡು ಕರಾವಳಿ ತೀರದಲ್ಲಿ ಗಾಳಿಯ ಪರಿಚಲನೆ 5.8 ಕಿ.ಮೀ ಎತ್ತರದಲ್ಲಿದೆ. ಪರಿಣಾಮ ಅಕ್ಟೋಬರ್ 23ರ ವರೆಗೆ ದಕ್ಷಿಣ ಒಳನಾಡಿನಲ್ಲಿ, ಕರಾವಳಿ ಉತ್ತರ ಒಳನಾಡಿನ ಹಲವು ಕಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರಿಗೆ ಮತ್ತೆ ಮಳೆ: ಕರ್ನಾಟಕದಲ್ಲಿ ಇನ್ನೆರಡು ದಿನ ಮಳೆ ಮುನ್ಸೂಚನೆ

ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ಗದಗ, ಕೊಪ್ಪಳ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಹಾಗೂ ರಾಮನಗರ ಜಿಲ್ಲೆಗಳ ಹಲವೆಡೆ ಭಾರಿ ಮಳೆ ಸಾಧ್ಯತೆ ಇದ್ದು, ಇಂದು ಮತ್ತು ನಾಳೆ ಈ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

13 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ

ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಉತ್ತರಕನ್ನಡ, ಉಡುಪಿ, ದಕ್ಷಿಣಕನ್ನಡ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಸೇರಿದಂತೆ ರಾಜ್ಯದ 13 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್​ ಘೋಷಿಸಲಾಗಿದೆ. ನಾಳೆ ಕರಾವಳಿ ಭಾಗದ ಜಿಲ್ಲೆಗಳು, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ. ಹೀಗಾಗಿ ಮೀನುಗಾರಿಕೆಗೆ ತೆರಳದಂತೆ ಕರಾವಳಿ ಭಾಗದ ಮೀನುಗಾರರಿಗೆ ಸೂಚನೆ ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.