ಚಿಕ್ಕಮಗಳೂರಿನಲ್ಲಿ ಮಹಾಮಳೆಗೆ 3ನೇ ಬಲಿ: ಮಹಿಳೆ ಮೇಲೆ ಮರ ಬಿದ್ದು ಸಾವು

ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಕಟ್ಟಿನಮನೆ ಗ್ರಾಮದಲ್ಲಿ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆ ಮೇಲೆ ಮರ ಬಿದ್ದು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಆ ಮೂಲಕ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮಹಾಮಳೆಗೆ 3ನೇ ಸಾವಾಗಿದೆ. ಮುಂಗಾರು ಪೂರ್ವ ಬಿರುಗಾಳಿ ಮಳೆಗೆ ಕಳೆದ ಒಂದು ತಿಂಗಳ ಅಂತರದಲ್ಲಿ ಮರ ಬಿದ್ದು ಪ್ರತ್ಯೇಕ ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದರು. 

ಚಿಕ್ಕಮಗಳೂರಿನಲ್ಲಿ ಮಹಾಮಳೆಗೆ 3ನೇ ಬಲಿ: ಮಹಿಳೆ ಮೇಲೆ ಮರ ಬಿದ್ದು ಸಾವು
ಚಿಕ್ಕಮಗಳೂರಿನಲ್ಲಿ ಮಹಾಮಳೆಗೆ 3ನೇ ಬಲಿ: ಮಹಿಳೆ ಮೇಲೆ ಮರ ಬಿದ್ದು ಸಾವು
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ಗಂಗಾಧರ​ ಬ. ಸಾಬೋಜಿ

Updated on:May 12, 2024 | 6:32 PM

ಚಿಕ್ಕಮಗಳೂರು, ಮೇ 12: ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆ (Woman) ಮೇಲೆ ಮರ ಬಿದ್ದು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆ ಎನ್.ಆರ್.ಪುರ ತಾಲೂಕಿನ ಕಟ್ಟಿನಮನೆ ಗ್ರಾಮದಲ್ಲಿ ನಡೆದಿದೆ. ಆ ಮೂಲಕ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮಹಾಮಳೆಗೆ (Rain) 3ನೇ ಸಾವಾಗಿದೆ. 48 ವರ್ಷದ ಸವಿತಾ ಸ್ಥಳದಲ್ಲೇ ಮೃತ ಮಹಿಳೆ. ಕೊಪ್ಪದಿಂದ ಕಟ್ಟಿನಮನೆ ಗ್ರಾಮದ ತಾಯಿ ಮನೆಗೆ ಬಂದಿದ್ದರು. ಈ ವೇಳೆ ಗಾಳಿ ಮಳೆಯಿಂದ ಮರಬಿದ್ದು ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ಎನ್.ಆರ್.ಪುರ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮತ್ತೊಂದೆಡೆ ಕಾರಿನ ಮೇಲೆ ಬೃಹತ್ ಗಾತ್ರದ ಮರ ಬಿದ್ದು ಮೂವರ ಸ್ಥಿತಿ ಗಂಭೀರವಾಗಿದ್ದು, ಮೂವರು ಗಾಯಾಳುಗಳಿಗೆ ಬಾಳೆಹೊನ್ನೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮುಂಗಾರು ಪೂರ್ವ ಬಿರುಗಾಳಿ ಮಳೆಗೆ ಕಳೆದ ಒಂದು ತಿಂಗಳ ಅಂತರದಲ್ಲಿ ಮರ ಬಿದ್ದು ಪ್ರತ್ಯೇಕ ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದರು.

ಇದನ್ನೂ ಓದಿ: Bengaluru Rain: ಬೆಂಗಳೂರಿನ ವಿಜಯನಗರ ಸೇರಿದಂತೆ ಹಲವೆಡೆ ತುಂತುರು ಮಳೆ ಆರಂಭ

ಕಳೆದೊಂದು ವಾರದಿಂದ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗ್ತಿದ್ದು, ಮಲೆನಾಡಿಗರೇನೋ ಸಂತಸದಲ್ಲಿದ್ದಾರೆ. ಆದ್ರೆ, ಇತ್ತ ಬಯಲು ಸೀಮೆಯಲ್ಲಿ ಹನಿ ಹನಿ ನೀರಿಗೂ ಹಾಹಾಕಾರ ಪಡ್ತಿದ್ದು. ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಕೆಂಚಾಪುರ ಗ್ರಾಮದಲ್ಲಿ ಕುಡಿಯಲು ನೀರಿಲ್ಲದೆ ಮಹಿಳೆಯರು ಟ್ಯಾಂಕರ್ ನೀರಿಗಾಗಿ ರಾತ್ರಿಯಿಡೀ ಬಿಂದಿಗೆ ಹಿಡಿದು ರಸ್ತೆಯಲ್ಲಿ ಕಾದು ಕೂರುವ ಮಟ್ಟಿಗೆ ಬರದ ಛಾಯೆ ಆವರಿದೆ.

ಇದನ್ನೂ ಓದಿ: ಮಟಮಟ ಮಧ್ಯಾಹ್ನವೇ ರಾಜ್ಯದ ಹಲವೆಡೆ ತಂಪೆರೆದ ಮಳೆರಾಯ: ಬೆಂಗಳೂರಿಗರೇ ಎಚ್ಚರ!

ಮತ್ತೊಂದೆಡೆ ಇಷ್ಟು ದಿನವಾದ್ರೂ ಮಳೆ ಆರಂಭವಾಗದ ಹಿನ್ನೆಲೆಯಲ್ಲಿ ತರೀಕೆರೆ ತಾಲೂಕಿನ ಪಿರುಮೇನಹಳ್ಳಿ ಗ್ರಾಮದಲ್ಲಿ ಬಂಜಾರ ಸಮುದಾಯದವರು ಮಳೆಗಾಗಿ‌ ವಿಶೇಷ ದಂಡ ಪೂಜೆ ಮಾಡುವ ಮೂಲಕ ದೇವರ ಮೊರೆ ಹೋಗಿದ್ದಾರೆ. ಇನ್ನೂ ಕುಡಿಯುವ ನೀರು ಸೇರಿದಂತೆ ದಿನನಿತ್ಯದ ಬಳಕೆಗೆ ನೀರು ಸರಬರಾಜು ಮಾಡುವ ನಿಟ್ಟಿನಲ್ಲಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅಧಿಕಾರಿಗಳ ಸಭೆ ನಡೆಸಿದ್ದು ,ನೀರಿನ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:15 pm, Sun, 12 May 24

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ