ಕರ್ನಾಟಕದ ಹಲವೆಡೆ ಅತಿವೃಷ್ಟಿ: ಜಿಲ್ಲಾಧಿಕಾರಿಗಳ ಸಭೆ ನಡೆಸಿದ ಸಿಎಂ ಯಡಿಯೂರಪ್ಪ

| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jul 20, 2021 | 6:27 PM

ಅನಾಹುತಗಳು ಸಂಭವಿಸುವ ಮೊದಲೇ ಮುನ್ನೆಚ್ಚರಿಕೆ ವಹಿಸಿ, ಅಗತ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳಿ ಎಂದು ಸೂಚಿಸಿದರು.

ಕರ್ನಾಟಕದ ಹಲವೆಡೆ ಅತಿವೃಷ್ಟಿ: ಜಿಲ್ಲಾಧಿಕಾರಿಗಳ ಸಭೆ ನಡೆಸಿದ ಸಿಎಂ ಯಡಿಯೂರಪ್ಪ
ಬಿ.ಎಸ್.ಯಡಿಯೂರಪ್ಪ
Follow us on

ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ವ್ಯಾಪಕವಾಗಿ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಲವು ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆಗೆ ವಿಡಿಯೊ ಕಾನ್ಫರೆನ್ಸ್​ ಮೂಲಕ ಸಭೆ ನಡೆಸಿದರು. ಅನಾಹುತಗಳು ಸಂಭವಿಸುವ ಮೊದಲೇ ಮುನ್ನೆಚ್ಚರಿಕೆ ವಹಿಸಿ, ಅಗತ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳಿ ಎಂದು ಸೂಚಿಸಿದರು.

ಪ್ರವಾಹ ಪರಿಹಾರ ಕಾಮಗಾರಿಗಳಿಗೆ ಅತ್ಯಾಧುನಿಕ ಉಪಕರಣಗಳನ್ನು ಬಳಸಿ. ಇಂಥ ಉಪಕರಣಗಳ ಖರೀದಿಗೆ ಹಣ ಬಿಡುಗಡೆ ಮಾಡಲಾಗುವುದು. ಜಿಲ್ಲಾಧಿಕಾರಿಗಳ ಪಿಡಿ ಖಾತೆಗಳಲ್ಲಿರುವ ಹಣ ಬಳಸಿ ಪರಿಸ್ಥಿತಿ ನಿಭಾಯಿಸಿ. ನದಿ ಮತ್ತು ಭೂಕುಸಿತ ಉಂಟಾಗುವ ಪ್ರದೇಶ ಗುರುತಿಸಲು ವಿಶೇಷ ತಂಡ ರಚಿಸಿ. ಭೂಕುಸಿತ ಉಂಟಾಗಬಹುದಾದ ಪ್ರದೇಶದ ಜನರನ್ನು ಮುಂಚಿತವಾಗಿಯೇ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿ. ಬೆಳೆನಷ್ಟ ಸಮೀಕ್ಷೆ ನಡೆಸಿ ಪರಿಹಾರ ವಿತರಣೆಗೆ ತಕ್ಷಣ ಕ್ರಮಕೈಗೊಳ್ಳಿ ಎಂದು ಯಡಿಯೂರಪ್ಪ ಹೇಳಿದರು.

ಕೊಡಗು, ಬಳ್ಳಾರಿ, ಹಾಸನ, ಉಡುಪಿ, ಶಿವಮೊಗ್ಗ, ಉತ್ತರ ಕನ್ನಡ, ಮಂಗಳೂರು, ಚಿಕ್ಕಮಗಳೂರು, ವಿಜಯಪುರ, ಕಲಬುರಗಿ, ಮೈಸೂರು, ಕೊಪ್ಪಳ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಕಳೆದ 8 ದಿನಗಳಿಂದ ಹೆಚ್ಚಿನ ಮಳೆಯಾಗುತ್ತಿದೆ. ಬೆಳೆ ನಷ್ಟ ಉಂಟಾಗಿರುವ ಬಗ್ಗೆ ಸಮೀಕ್ಷೆ ನಡೆಸಿ ವರದಿ ನೀಡಿದಲ್ಲಿ ಪರಿಹಾರ ವಿತರಣೆಗೆ ತಕ್ಷಣವೇ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಕಂದಾಯ ಸಚಿವ ಆರ್.ಅಶೋಕ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್, ಕೃಷಿ ಸಚಿವ ಬಿ.ಸಿ.ಪಾಟೀಲ್, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ, ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಉಪಸ್ಥಿತರಿದ್ದರು.

(Heavy Rains in Karnataka CM BS Yediyurappa virtual meeting with DC CEOs of many districts)

ಇದನ್ನೂ ಓದಿ: Karnataka Dam Water Level: ವ್ಯಾಪಕ ಮುಂಗಾರು ಮಳೆ, ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಹೀಗಿದೆ

ಇದನ್ನೂ ಓದಿ: Gurugram Rains: ಭಾರೀ ಮಳೆಯಿಂದ ನದಿಗಳಾದ ಗುರುಗ್ರಾಮದ ರಸ್ತೆಗಳು; ನೀರಿನಲ್ಲಿ ತೇಲಿಬಂದ ಕಾರುಗಳ ವಿಡಿಯೋ ವೈರಲ್

Published On - 6:22 pm, Tue, 20 July 21