ಧಾರಾಕಾರ ಮಳೆಗೆ ಕರ್ನಾಟಕ ತತ್ತರ: ಜು 26, 27ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ

ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದೆ. ನಿರಂತರ ಧಾರಾಕಾರ ಮಳೆಗೆ ಹಲವು ಪ್ರದೇಶಗಳಿಗೆ ಪ್ರವಾಹದ ಹೊಡೆತ ತಟ್ಟಿದೆ. ಹಲವೆಡೆ ಅವಾಂತರಗಳು ಸಂಭವಿಸಿದೆ. ಹೀಗಾಗಿ ಮುಂಜಾಗೃತ ಕ್ರಮವಾಗಿ ಧಾರವಾಡ, ಬೆಳಗಾವಿ, ಕೊಡಗು,  ಜಿಲ್ಲೆಗಳಲ್ಲಿ ನಾಳೆ ಕೂಡ ರಜೆ ಘೋಷಿಸಿ ಆಯಾ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಧಾರಾಕಾರ ಮಳೆಗೆ ಕರ್ನಾಟಕ ತತ್ತರ: ಜು 26, 27ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ಧಾರಾಕಾರ ಮಳೆಗೆ ಕರ್ನಾಟಕ ತತ್ತರ: ಜು 26, 27ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಲ್ಲಿ ರಜೆ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Jul 25, 2024 | 10:23 PM

ಬೆಂಗಳೂರು, ಜುಲೈ 25: ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದೆ. ನಿರಂತರ ಮಳೆಗೆ (Rain) ಹಲವು ಜಲಾಶಯಗಳು ಭರ್ತಿ ಆಗಿವೆ. ಮಹಾ ಮಳೆಗೆ ಹಲವೆಡೆ ಸಾಕಷ್ಟು ಅವಾಂತರಗಳು ಸಂಭವಿಸಿವೆ. ಹೀಗಾಗಿ ಮುಂಜಾಗ್ರತ ಕ್ರಮವಾಗಿ ಹಲವು ಜಿಲ್ಲೆಗಳಲ್ಲಿ ಅಂಗನವಾಡಿ ಸೇರಿದಂತೆ ಶಾಲಾ ಕಾಲೇಜುಗಳಿಗೆ ನಾಳೆ ಕೂಡ ರಜೆ (School Holiday) ಘೋಷಣೆ ಮಾಡಲಾಗಿದೆ. ಧಾರವಾಡ, ಬೆಳಗಾವಿ, ಕೊಡಗು, ಜಿಲ್ಲೆಗಳಲ್ಲಿ ರಜೆ ನೀಡಲಾಗಿದೆ.

ಯಾವೆಲ್ಲಾ ಜಿಲ್ಲೆಗಳಲ್ಲಿ ರಜೆ

ಬೆಳಗಾವಿ ಜಿಲ್ಲೆಯಲ್ಲಿ ಮುಂದುವರೆದ ವ್ಯಾಪಕ ಮಳೆಯ ಹಿನ್ನೆಲೆ ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಿ ಡಿಸಿ ಮೊಹಮ್ಮದ್ ರೋಷನ್ ಆದೇಶಿಸಿದ್ದಾರೆ. ನಿನ್ನೆ ಜಿಲ್ಲೆಯ ಎಂಟು ತಾಲೂಕುಗಳಿಗೆ ರಜೆ ಘೋಷಣೆ ಮಾಡಿದ್ದರು. ನಾಳೆಯೂ ಹೆಚ್ಚಿನ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಮುಂದುವರಿದ ಮಳೆ ಅಬ್ಬರ: ಜು.25, 26ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ

ಧಾರವಾಡ ಜಿಲ್ಲೆಯಲ್ಲಿ ಮಳೆ ಆರ್ಭಟ ಜೋರಾಗಿದ್ದು ನಾಳೆ ಶಾಲಾ ಕಾಲೇಜುಗಳಿಗೆ ರಜೆ ನೀಡಿದೆ. ಧಾರವಾಡ ಜಿಲ್ಲೆಯಲ್ಲಿ ಮಕ್ಕಳ‌ಸುರಕ್ಷತೆ ದೃಷ್ಟಿಯಿಂದ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ರಜೆ ನೀಡಿ  ಜಿಲ್ಲಾಧಿಕಾರಿ ದಿವ್ಯಪ್ರಭು ಆದೇಶ ಹೊರಡಿಸಿದ್ದಾರೆ.

ಹಾವೇರಿ ಜಿಲ್ಲೆಯಾದ್ಯಂತ ಜುಲೈ 26 ಮತ್ತು 27 ಎರಡು ದಿನ ರಜೆ

ಹಾವೇರಿ ಜಿಲ್ಲಾದ್ಯಂತ ಬಿಟ್ಟು ಬಿಡದೆ ಮಳೆ ಸುರಿಯಿತ್ತಿದೆ. ಈ ಹಿನ್ನೆಲೆ ಜಿಲ್ಲೆಯಾದ್ಯಂತ ಜುಲೈ 26 ಮತ್ತು 27 ಎರಡು ದಿನ ರಜೆ ಘೋಷಿಸಲಾಗಿದೆ. ಅಂಗನವಾಡಿ , ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿ ಮಾತ್ರ ರಜೆ ನೀಡಿ ಜಿಲ್ಲಾಧಿಕಾರಿ ವಿಜಯಮಹಾಂತೇಶ್ ಆದೇಶಿಸಿದ್ದಾರೆ.

ಇದನ್ನೂ ಓದಿ: ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಕೃಷ್ಣಾ ನದಿಯಲ್ಲಿ ಜನರ ಹುಚ್ಚಾಟ; ಮೀನು ಹಿಡಿಯಲು ಹೋಗಿ ದುಸ್ಸಾಹಸ

ಕೊಡಗು ಜಿಲ್ಲೆಯಾದ್ಯಂತ ಮಳೆ ಆರ್ಭಟ ಮುಂದುವರಿದ ಹಿನ್ನೆಲೆ ಮುಂಜಾಗ್ರತ ಕ್ರಮವಾಗಿ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ನಾಳೆ ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ.

6 ತಾಲೂಕಿನ ಶಾಲೆಗಳಿಗೆ ನಾಳೆ ರಜೆ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಕಡಿಮೆಯಾದರೂ ಬಿರುಗಾಳಿ ಹಿನ್ನೆಲೆ ಜಿಲ್ಲೆಯ 6 ತಾಲೂಕಿನ ಶಾಲೆಗಳಿಗೆ ನಾಳೆ ರಜೆ ಪ್ರಕಟಿಸಲಾಗಿದೆ. ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ಎನ್‌.ಆರ್‌.ಪುರ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ 9 ತಾಲೂಕಿನ ಶಾಲೆ, ಕಾಲೇಜಿಗೆ ನಾಳೆ ರಜೆ

ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮಳೆಯ ಅಬ್ಬರ ಮುಂದುವರೆದಿದ್ದು, ಜಿಲ್ಲೆಯ 9 ತಾಲೂಕಿನ ಶಾಲೆ, ಕಾಲೇಜಿಗೆ ನಾಳೆ ರಜೆ ನೀಡಲಾಗಿದೆ. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಾಟ್ಕಳ, ದಾಂಡೆಲಿ, ಜೋಯಿಡಾ, ಹಲಿಯಾಳ ಮತ್ತು ಯಲ್ಲಾಪುರ ತಾಲೂಕಿನ ಶಾಲಾ ಕಾಲೇಜ್​ಗೆ ರಜೆ ನೀಡಿದ್ದು, ಶಿರಸಿ ಮುಂಡಗೋಡ, ಸಿದ್ದಾಪುರ ತಾಲೂಕಿನ ಶಾಲಾ ಕಾಲೇಜ್​ಗಳಿಗೆ ರಜೆ ಇಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:16 pm, Thu, 25 July 24

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!