AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಮಳೆ ಅಬ್ಬರ: ಈ ಜಿಲ್ಲೆಗಳಲ್ಲಿ ನಾಳೆ ಶಾಲೆ ಕಾಲೇಜಿಗಳಿಗೆ ರಜೆ ಮುಂದುವರಿಕೆ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರಿಸುತ್ತಿದೆ. ನಿರಂತರ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಇನ್ನು ಕೆಲ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ರೆಡ್‌ ಅಲರ್ಟ್ ಘೋಷಿಸಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಹಲವೆಡೆ ಅಂಗನವಾಡಿ ಸೇರಿದಂತೆ ಶಾಲೆಗಳು-ಕಾಲೇಜುಗಳಿಗೆ ನಾಳೆ ರಜೆ ನೀಡಲಾಗಿದೆ.

ಕರ್ನಾಟಕದಲ್ಲಿ ಮಳೆ ಅಬ್ಬರ: ಈ ಜಿಲ್ಲೆಗಳಲ್ಲಿ ನಾಳೆ ಶಾಲೆ ಕಾಲೇಜಿಗಳಿಗೆ ರಜೆ ಮುಂದುವರಿಕೆ
ಕರ್ನಾಟಕದಲ್ಲಿ ಮಳೆ ಅಬ್ಬರ: ಈ ಜಿಲ್ಲೆಗಳಲ್ಲಿ ನಾಳೆ ಶಾಲೆ ಕಾಲೇಜಿಗಳಿಗೆ ರಜೆ ಮುಂದುವರಿಕೆ
ಗಂಗಾಧರ​ ಬ. ಸಾಬೋಜಿ
|

Updated on:Jul 18, 2024 | 9:02 PM

Share

ಬೆಂಗಳೂರು, ಜುಲೈ 18: ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯಬ್ಬರ (Rain) ಜೋರಾಗುತ್ತಿದೆ. ಉಡುಪಿ ಮತ್ತು ಶಿವಮೊಗ್ಗ, ಬೆಳಗಾವಿ, ಚಿಕ್ಕಮಗಳೂರು ಸೇರಿದಂತೆ ಮಲೆನಾಡು ಭಾಗದಲ್ಲಿ ಹವಾಮಾನ ಇಲಾಖೆ ರೆಡ್‌ ಅಲರ್ಟ್ ಘೋಷಿಸಿದೆ. ಹೀಗಾಗಿ, ಹಲವೆಡೆ ಶಾಲೆಗಳು-ಕಾಲೇಜುಗಳಿಗೆ ಮುಂಜಾಗ್ರತಾ ಕ್ರಮವಾಗಿ ನಾಳೆ (ಜುಲೈ 18) ಕೂಡ ಜಿಲ್ಲಾಧಿಕಾರಿಗಳು, ಡಿಡಿಪಿಐಗಳು ರಜೆ (holiday) ಘೋಷಿಸಿ ಆದೇಶ ಹೊರಡಿಸಿದ್ದಾರೆ. ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ಕೊಡಗು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ.

ಯಾವ ಯಾವ ಜಿಲ್ಲೆಗಳಲ್ಲಿ ಶಾಲಾ-ಕಾಲೇಜಿಗೆ ರಜೆ?  

ಬೆಳಗಾವಿ ಜಿಲ್ಲೆಯ ಖಾನಾಪುರ ಮತ್ತು ಪಶ್ಚಿಮ ಘಟ್ಟ ಭಾಗದಲ್ಲಿ ಭಾರಿ ಮಳೆ ಹಿನ್ನೆಲೆ ಖಾನಾಪುರ ತಾಲೂಕಿನ ಶಾಲಾ ಕಾಲೇಜುಗಳಿಗೆ ಜು. 19 ಮತ್ತು 20ರಂದು ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ಚಿಕ್ಕಮಗಳೂರಿನಲ್ಲಿ ಮಳೆ ಅಬ್ಬರ: ಶೃಂಗೇರಿ-ಹೊರನಾಡು ಸೇರಿದಂತೆ ಪ್ರವಾಸ ತಾಣಗಳ ರಸ್ತೆ ಸಂಚಾರ ಬಂದ್

ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಜಿಲ್ಲೆಯ ಸಾಗರ, ಸೊರಬ, ಹೊಸನಗರ, ತೀರ್ಥಹಳ್ಳಿ ತಾಲೂಕಿನ ಶಾಲಾ, ಕಾಲೇಜುಗಳಿಗೆ ನಾಳೆ ರಜೆ ನೀಡಿ ಆಯಾ ತಾಲೂಕಿನ ತಹಶೀಲ್ದಾರ್‌ಗಳಿಂದ ಆದೇಶಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಕೂಡ ಮಳೆ ಆರ್ಭಟಿಸಿದ್ದು ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರೀ ಮಳೆ ಹಿನ್ನೆಲೆ ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ಎನ್​ಆರ್​ ಪುರ ತಾಲೂಕಿನ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ನಾಳೆ ರಜೆ ನೀಡಲಾಗಿದೆ. ಚಿಕ್ಕಮಗಳೂರು ನಗರ, ಅಂಬಳೆ ಹೋಬಳಿ, ಲಕ್ಯಾ ಹೋಬಳಿ ‌ಹೊರತು ಪಡಿಸಿ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶಿಸಿದ್ದಾರೆ. ನಾಳೆಯೂ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟ: ಮಾಗುಂಡಿ ಸೇತುವೆ ಮುಳುಗಡೆ, 15ಕ್ಕೂ ಹೆಚ್ಚು ಗ್ರಾಮಗಳ ಸಂಪರ್ಕ ಕಡಿತ

ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪಿಯು ಕಾಲೇಜಿಗೆ ನಾಳೆ ರಜೆ ಘೋಷಿಸಿ ಉಡುಪಿ ಡಿಸಿ ಡಾ.ವಿದ್ಯಾಕುಮಾರಿ ಆದೇಶಿಸಿದ್ದಾರೆ. ಐಟಿಐ, ಯುಜಿ, ಪಿಜಿ, ಇಂಜಿನಿಯರಿಂಗ್ ಕಾಲೇಜುಗಳಿಗೆ ರಜೆ ಇಲ್ಲ. ಇನ್ನು ಕೊಡಗಿನಲ್ಲೂ ಭಾರಿ ಗಾಳಿ ಮಳೆ ಮುಂದುವರೆದಿದ್ದು ಪದವಿ ಹಾಗೂ ಸ್ನಾತಕೋತ್ತರ ಕಾಲೇಜುಗಳನ್ನ ಹೊರತು ಪಡಿಸಿ ನಾಳೆ ಒಂದು ದಿನ ಜಿಲ್ಲೆಯಾದ್ಯಂತ ಅಂಗನವಾಡಿ ಸೇರಿದಂತೆ ಶಾಲಾ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ವೆಂಕಟರಾಜಾ ಘೋಷಣೆ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:49 pm, Thu, 18 July 24

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More