ಮಹಾರಾಷ್ಟ್ರದಲ್ಲಿ ವ್ಯಾಪಕ ಮಳೆ: ರಾಜ್ಯದಲ್ಲಿ ಕೃಷ್ಣಾ ಸೇರಿ ಹಲವು ನದಿಗಳಲ್ಲಿ ನೆರೆ ಭೀತಿ

| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jun 18, 2021 | 3:22 PM

ಕೃಷ್ಣಾ ಹಾಗೂ ಪಂಚಗಂಗಾ ನದಿಯ ಸಂಗಮಕ್ಷೇತ್ರವಾಗಿರುವ ಸುಕ್ಷೇತ್ರ ನರಸಿಂಹವಾಡಿ ದತ್ತಮಂದಿರಕ್ಕೆ ಕೃಷ್ಣಾ ನದಿ ನೀರು ನುಗ್ಗಿ ಅವಾಂತರವಾಗಿದೆ. ಚಿಕ್ಕೋಡಿ ತಾಲೂಕಿನ ಕಲ್ಲೋಳ ಬಳಿ ನದಿಯಲ್ಲಿ ಸುಮಾರು 80 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ.

ಮಹಾರಾಷ್ಟ್ರದಲ್ಲಿ ವ್ಯಾಪಕ ಮಳೆ: ರಾಜ್ಯದಲ್ಲಿ ಕೃಷ್ಣಾ ಸೇರಿ ಹಲವು ನದಿಗಳಲ್ಲಿ ನೆರೆ ಭೀತಿ
ಮಳೆಯಿಂದಾಗಿ ಮಹಾರಾಷ್ಟ್ರದ ನರಸಿಂಹವಾಡಿ ದತ್ತಮಂದಿರ ಜಲಾವೃತವಾಗಿದೆ.
Follow us on

ಬೆಳಗಾವಿ: ಮಹಾರಾಷ್ಟ್ರದ ಸಹ್ಯಾದ್ರಿ ಶ್ರೇಣಿಯಲ್ಲಿ ಮುಂಗಾರು ಚುರುಕಾಗಿದೆ. ಮಹಾರಾಷ್ಟ್ರದಲ್ಲಿ ಜಲಾನಯನ ಪ್ರದೇಶ ಹೊಂದಿರುವ ಮತ್ತು ಕರ್ನಾಟಕದಲ್ಲಿ ಹರಿಯುವ ಹಲವು ನದಿಗಳು ಉಕ್ಕಿ ಹರಿಯುತ್ತಿವೆ. ಮಹಾರಾಷ್ಟ್ರ ರಾಜ್ಯದ ನದಿ ತೀರದಲ್ಲೂ ಪ್ರವಾಹದ ಆತಂಕ ಕಂಡುಬಂದಿದೆ. ಮಹಾರಾಷ್ಟ್ರದ ಕೊಲ್ಹಾಪುರದಲ್ಲಿರುವ ನರಸಿಂಹವಾಡಿ ದತ್ತ ಮಂದಿರ ಸಂಪೂರ್ಣ ಜಲಾವೃತವಾಗಿದೆ.

ಕೃಷ್ಣಾ ಹಾಗೂ ಪಂಚಗಂಗಾ ನದಿಯ ಸಂಗಮಕ್ಷೇತ್ರವಾಗಿರುವ ಸುಕ್ಷೇತ್ರ ನರಸಿಂಹವಾಡಿ ದತ್ತಮಂದಿರಕ್ಕೆ ಕೃಷ್ಣಾ ನದಿ ನೀರು ನುಗ್ಗಿ ಅವಾಂತರವಾಗಿದೆ. ಚಿಕ್ಕೋಡಿ ತಾಲೂಕಿನ ಕಲ್ಲೋಳ ಬಳಿ ನದಿಯಲ್ಲಿ ಸುಮಾರು 80 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ.

ಮಳೆಯಿಂದಾಗಿ ಬೆಳಗಾವಿಯ ಬೆಳಗಾವಿ ಜಿಲ್ಲೆ ಮೂಡಲಗಿ ತಾಲ್ಲೂಕಿನ ಸುಣದೋಳಿ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಸೇತುವೆ ಮುಳುಗಡೆಯಾಗಿರುವ ಕಾರಣ 20 ಹಳ್ಳಿಗಳ ಜನರು ಮೂಡಲಗಿ ತಾಲ್ಲೂಕು ಕೇಂದ್ರ ತಲುಪಲು ಸಾಧ್ಯವಾಗುತ್ತಿಲ್ಲ. ಮೂಡಲಗಿ ತಾಲೂಕಿನಲ್ಲಿ ಒಟ್ಟು ಆರು ಸೇತುವೆಗಳು ಮುಳುಗಡೆಯಾಗಿವೆ. ಹಿಡಕಲ್ ಡ್ಯಾಂನಿಂದ ಹೊರಹರಿವು ಹೆಚ್ಚಿದರೆ ನೂರಾರು ಗ್ರಾಮಗಳು ಜಲಾವೃತವಾಗಲಿವೆ.

ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಭೆ
ಬಳ್ಳಾರಿ, ವಿಜಯನಗರ, ಕೊಪ್ಪಳ, ರಾಯಚೂರು, ಕಲಬುರಗಿ, ಯಾದಗಿರಿ, ಬೀದರ್, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗದಗ, ಹಾವೇರಿ, ಧಾರವಾಡ, ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಒಟ್ಟು 20 ಜಿಲ್ಲಾಡಳಿತಗಳ ಜತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಭೆ ನಡೆಸಲಿದ್ದಾರೆ.

ರಾಜ್ಯದಲ್ಲಿ ಹೆಚ್ಚು ಮಳೆ ಬೀಳುತ್ತಿರುವ ಪ್ರದೇಶಗಳ ಜಿಲ್ಲಾಡಳಿತಗಳ ಜೊತೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶನಿವಾರ ಮಧ್ಯಾಹ್ನ 12 ಗಂಟೆಗೆ ವಿಡಿಯೊ ಕಾನ್ಫರೆನ್ಸ್​ ಸಭೆ ನಡೆಸಲಿದ್ದಾರೆ. 20 ಜಿಲ್ಲಾಡಳಿತಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

(Heavy Rains in Maharashtra Flood Situation Grims in Belagavi District)

ಇದನ್ನೂ ಓದಿ: Rain Effect: ಕರ್ನಾಟಕದ ವಿವಿಧೆಡೆ ಭಾರೀ ಮಳೆ; ಮಳೆಗಾಲದ ಆರಂಭಿಕ ಹಂತದಲ್ಲಿಯೇ ತತ್ತರಿಸಿದ ಜನತೆ

ಇದನ್ನೂ ಓದಿ: Karnataka Dam Water Level: ಮಲೆನಾಡು ಭಾಗದಲ್ಲಿ ವಿಪರೀತ ಮಳೆ, ಜಲಾಶಯಗಳಿಗೆ ಭರಪೂರ ನೀರು; ಪ್ರಮುಖ ಜಲಾಶಯಗಳ ನೀರಿನ ಮಟ್ಟ ಇಂತಿದೆ