ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆ: ಖಾನಾಪುರ ತಾಲೂಕಿನ 7 ಜಲಪಾತಗಳಿಗೆ ನಿರ್ಬಂಧ

ಮಹಾರಾಷ್ಟ್ರದ ಲೊನಾವಾಲಾ ದುರಂತದ ಬಳಿಕ ಎಚ್ಚೆತ್ತ ಅರಣ್ಯ ಇಲಾಖೆ ಖಾನಾಪುರ ತಾಲೂಕಿನ ಕಾಡಂಚಿನಲ್ಲಿರುವ ಪ್ರಸಿದ್ಧ ಜಲಪಾತಗಳ ವೀಕ್ಷಣೆಗೆ ಬ್ರೇಕ್ ಹಾಕಿದೆ. ಬಟವಾಡೆ ಫಾಲ್ಸ್, ಚಿಕ್ಕಲೆ ಫಾಲ್ಸ್, ಪಾರವಾಡ ಫಾಲ್ಸ್, ಚೋರ್ಲಾ ಫಾಲ್ಸ್, ವಜ್ರಾ ಫಾಲ್ಸ್​​ ಹೀಗೆ 7 ಜಲಪಾತಗಳ ವೀಕ್ಷಣೆಗೆ ನಿಷೇಧ ಹೇರಲಾಗಿದೆ.

Follow us
Sahadev Mane
| Updated By: ಆಯೇಷಾ ಬಾನು

Updated on: Jul 06, 2024 | 8:58 AM

ಬೆಳಗಾವಿ, ಜುಲೈ.06: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ (Karnataka Rain) ಹಿನ್ನೆಲೆ ದಟ್ಟ ಕಾಡಂಚಿನಲ್ಲಿರುವ ಜಲಪಾತಗಳ (Falls) ವೀಕ್ಷಣೆಗೆ ನಿರ್ಬಂಧ ಹೇರಲಾಗಿದೆ. ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ 7 ಜಲಪಾತಗಳಿಗೆ ನಿರ್ಬಂಧ ವಿಧಿಸಲಾಗಿದೆ. ಮಹಾರಾಷ್ಟ್ರದ ಲೊನಾವಾಲಾ ದುರಂತದ ಬಳಿಕ ಎಚ್ಚೆತ್ತ ಅರಣ್ಯ ಇಲಾಖೆ ಖಾನಾಪುರ ತಾಲೂಕಿನ ಕಾಡಂಚಿನಲ್ಲಿರುವ ಪ್ರಸಿದ್ಧ ಜಲಪಾತಗಳ ವೀಕ್ಷಣೆಗೆ ಬ್ರೇಕ್ ಹಾಕಿದೆ.

ಬಟವಾಡೆ ಫಾಲ್ಸ್, ಚಿಕ್ಕಲೆ ಫಾಲ್ಸ್, ಪಾರವಾಡ ಫಾಲ್ಸ್, ಚೋರ್ಲಾ ಫಾಲ್ಸ್, ವಜ್ರಾ ಫಾಲ್ಸ್​​ ಹೀಗೆ 7 ಜಲಪಾತಗಳ ವೀಕ್ಷಣೆಗೆ ನಿಷೇಧ ಹೇರಲಾಗಿದೆ. ಫಾಲ್ಸ್ ಬಳಿ ಅರಣ್ಯ ಇಲಾಖೆ ಸಿಬ್ಬಂದಿ ಗಸ್ತು ಕಾರ್ಯ ನಿರ್ವಹಿಸುತ್ತಿದ್ದಾರೆ. ಫಾಲ್ಸ್ ಮುಖ್ಯ ರಸ್ತೆಗೆ ಮೂವರು ಫಾರೆಸ್ಟ್ ಗಾರ್ಡ್​ಗಳು ಕಾವಲು ಕಾಯುತ್ತಿದ್ದಾರೆ. ವೀಕೆಂಡ್​ನಲ್ಲಿ ಫಾಲ್ಸ್ ನೋಡಲು ಕರ್ನಾಟಕ, ಗೋವಾ, ಮಹಾರಾಷ್ಟ್ರ ರಾಜ್ಯದಿಂದ ಬರುವ ಪ್ರವಾಸಿಗರಿಗೆ ನಿರಾಸೆಯಾಗಿದೆ.

ಕೆರೆಯಂತಾದ 500 ಎಕರೆ ಅಡಿಕೆ ತೋಟ!

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ರೌದ್ರಾವತಾರಕ್ಕೆ 500 ಎಕರೆ ಅಡಿಕೆ ತೋಟಕ್ಕೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಭಾಸ್ಕೆರೆ ಗ್ರಾಮದಲ್ಲಿ ಘಟನೆ ನಡೆದಿದ್ದು, ಅಡಕೆ ತೋಟದಲ್ಲಿ ನೀರು ನಿಂತುಕೊಂಡ್ರೆ ಕೊಳೆ ರೋಗ ಉಂಟಾಗುವ ಭೀತಿ ಎದುರಾಗಿದೆ. ಇನ್ನು 500 ಎಕರೆ ಅಡಿಕೆ ತೋಟದಲ್ಲಿರುವ 200 ಮನೆಗಳು ಕೂಡ ಜಲದಿಗ್ಬಂಧನದ ಭೀತಿ ಎದುರಿಸುತ್ತಿವೆ. ಬೆಟ್ಟದ ಮೇಲೆ ನಿರಂತರ ಮಳೆ ಸುರಿದ್ರೆ ಮನೆಗಳಿಗೆ ನೀರು ನುಗ್ಗುವ ಆತಂಕ ಎದುರಾಗಿದೆ.

ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಅಹಿಂದ ಸಮಾವೇಶ ಏಕೆ? ಸಿದ್ದರಾಮಯ್ಯ ರಾಜಕೀಯ ತಂತ್ರವೇನು?

ಕಡಲಾರ್ಭಟಕ್ಕೆ ಮೀನುಗಾರಿಕಾ ಜೆಟ್ಟಿ ಧ್ವಂಸ

ಮಂಗಳೂರಿನಲ್ಲಿ ಭಾರಿ ಮಳೆಯ ನಡುವೆ ಕಡಲು ಪ್ರಕ್ಷುಬ್ಧಗೊಂಡಿದೆ. ದೈತ್ಯ ಅಲೆಗಳು ತೀರಕ್ಕೆ ಅಪ್ಪಳಿಸುತ್ತಿವೆ. ಕಡಲ ಅಬ್ಬರಕ್ಕೆ ನಿರ್ಮಾಣ ಹಂತದಲ್ಲೇ ಮೀನುಗಾರಿಕಾ ಜೆಟ್ಟಿ ಧ್ವಂಸಗೊಂಡಿದೆ. ಕುಳಾಯಿ ಸಮುದ್ರ ತೀರದಲ್ಲಿ ಜೆಟ್ಟಿಯ ಕಲ್ಲುಗಳು ಸಮುದ್ರದ ಒಡಲು ಸೇರಿವೆ. 196 ಕೋಟಿ ರೂಪಾಯಿ ಅನುದಾನದಲ್ಲಿ ನಿರ್ಮಿಸಿದ್ದ ಜೆಟ್ಟಿ ಹಾಳಾಗಿದೆ.

ALEಬೋಜ್-ಕಾರದಗಾ ಸೇತುವೆ ಮುಳುಗಡೆ

ಮಹಾರಾಷ್ಟ್ರ, ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರಿ ಮಳೆ ಹಿನ್ನೆಲೆ ದೂದಗಂಗಾ ನದಿ ಮೈದುಂಬಿ ಹರಿಯುತ್ತಿದೆ. ಇದ್ರಿಂದ ಬೋಜ್-ಕಾರದಗಾ ಸಂಪರ್ಕಿಸುವ ಸೇತುವೆ ಮುಳುಗಡೆಯಾಗಿದೆ. ಇನ್ನು ಅಪಾಯದ ಮಟ್ಟ ಮೀರಿ ನದಿ ಹರಿಯುತ್ತಿದ್ರೂ ಯುವಕರ ಹುಚ್ಚಾಟ ಮುಂದುವರೆದಿದೆ. ನದಿಗೆ ಇಳಿಯದಂತೆ ಸೂಚನೆ ನೀಡಿದ್ರೂ ಗುಂಪು ಗುಂಪಾಗಿ ಯುವಕರು ಮೀನು ಹಿಡಿಯುತ್ತಿದ್ದು, ಪೊಲೀಸರನ್ನ ಕಾವಲಿಗೆ ಹಾಕಲು ಆಗ್ರಹಿಸಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್