AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಕರ್ನಾಟಕದಲ್ಲಿ ಇಂದು ಸಂಜೆ ಸುರಿದ ಧಾರಾಕಾರ ಮಳೆಗೆ ತತ್ತರಿಸಿದ ಜನ

ಕರ್ನಾಟಕದಲ್ಲಿ ಇಂದು ಸಂಜೆ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ಮುಂದಿನ ಎರಡು ಮೂರು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Rain: ಕರ್ನಾಟಕದಲ್ಲಿ ಇಂದು ಸಂಜೆ ಸುರಿದ ಧಾರಾಕಾರ ಮಳೆಗೆ ತತ್ತರಿಸಿದ ಜನ
ಕರ್ನಾಟಕದ ಹಲವೆಡೆ ಸುರಿದ ಮಳೆ (ಸಾಂದರ್ಭಿಕ ಚಿತ್ರ)Image Credit source: FILE
Rakesh Nayak Manchi
|

Updated on: May 08, 2023 | 9:50 PM

Share

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು (Bangalore Rain) ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಇಂದು ಸಂಜೆ ಧಾರಾಕಾರವಾಗಿ ಮಳೆ (Karnataka Rain) ಸುರಿದಿದೆ. ಬಾಗಲಕೋಟೆಯ ಜಮಖಂಡಿಯಲ್ಲಿ ಒಂದು ಗಂಟೆಗೂ ಅಧಿಕ ಕಾಲ ಮಳೆಯಾಗಿದ್ದು, ಚರಂಡಿಗಳು ತುಂಬಿ ರಸ್ತೆಯ ಮೇಲೆ ಕೊಳಚೆ ನೀರು ಹರಿದು ಹೋಗಿದೆ. ಜಮಖಂಡಿಯ ಕೆಲವೆಡೆ ಗುಡುಗು ಸಹಿತ ಮಳೆಯಾಗಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲೂ ಸಂಜೆ ವೇಳೆ ಮಳೆಯಾಗಿದೆ. ಜಿಲ್ಲೆಯ ಯಲ್ಲಾಪುರ ತಾಲೂಕಿನಲ್ಲಿ ಧಾರಾಕಾರ ಮಳೆಯಾಗಿದ್ದು, ಸುಮಾರು ಒಂದು ಗಂಟೆಗಳ ಕಾಲ ಸಿಡಿಲು, ಗುಡುಗು ಸಮೇತ ಭಾರೀ ಮಳೆಯಾಗಿದೆ. ಕೆಲವೆಡೆ ಬಿರುಗಾಳಿ ಮಾದರಿಯಲ್ಲಿ ಬೀಸಿದ ಗಾಳಿ ಮಳೆಗೆ ಜನರು ತತ್ತರಿಸಿದರು. ತಾಲೂಕಿನ ಸುತ್ತಮುತ್ತಲಿನ ಹಳ್ಳಿಗಳಲ್ಲೂ ಮಳೆಯಾಗಿದೆ.

ಇದನ್ನೂ ಓದಿ: Bangalore Rain: ರಾಜಧಾನಿ ಬೆಂಗಳೂರಿನಲ್ಲಿ ಇಂದಿನಿಂದ ನಾಲ್ಕು ದಿನ ಗುಡುಗು ಸಹಿತ ಭಾರಿ ಮಳೆ: ಹವಾಮಾನ ಇಲಾಖೆಯಿಂದ ಎಚ್ಚರಿಕೆ

ಚಿಕ್ಕಮಗಳೂರು ಜಿಲ್ಲೆಯಲ್ಲೂ ಮುಸ್ಸಂಜೆ ವೇಳೆ ಧಾರಾಕಾರ ಮಳೆಯಾಗಿದ್ದು, ನಗರದಾದ್ಯಂತ ವರುಣನ ಆರ್ಭಟ ಜೋರಾಗಿತ್ತು. ಪರಿಣಾಮ ವಾಹನ ಸವಾರರು ಸಂಚಾರದ ವೇಳೆ ಪರದಾಟ ನಡೆಸಬೇಕಾಯಿತು. ಕಳೆದ 30 ನಿಮಿಷಗಳಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ನಗರದ ಸುತ್ತಮುತ್ತಲಿನ ಪ್ರದೇಶಗಳಲ್ಲಿಯೂ ಮಳೆಯಾಗುತ್ತಿದೆ.

ಯಾದಗಿರಿ ಜಿಲ್ಲೆಯಲ್ಲೂ ವರುಣನ ಆರ್ಭಟ ಜೋರಾಗಿದ್ದು, ಕಳೆದ ಒಂದು ಗಂಟೆಯಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಧಾರಾಕಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ವಾಹನ ಸವಾರರು ಸಂಚಾರಕ್ಕೆ ಪರದಾಟ ನಡೆಸಿದರು. ಜಿಲ್ಲೆಯಲ್ಲಿ ಕಳೆದ ವಾರದಿಂದ‌ ಆಗಾಗ ಮಳೆ ಸುರಿಯುತ್ತಲೇ ಇದ್ದು, ಇಂದು ಕೂಡ ಮುಂದುವರಿದಿದೆ.

ಬೆಂಗಳೂರಿನಲ್ಲಿ ಭಾರೀ ಮಳೆ

ಬೆಂಗಳೂರು ನಗರದಲ್ಲಿ ಕಳೆದ ಕೆಲ ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಇಂದು ಸಂಜೆ ಕೆಲವೆಡೆ ಭಾರೀ ಮಳೆಯಾಗಿದೆ. ಮಳೆಯ ಆರ್ಭಟಕ್ಕೆ ರಿಂಗ್​​ ರೋಡ್​ನ ವೀರಭದ್ರೇಶ್ವರ ನಗರದಲ್ಲಿ ಮನೆಯೊಂದು ಕುಸಿದುಬಿದ್ದಿದ್ದು, ತಡೆಗೋಡೆ ಪಕ್ಕದಲ್ಲಿ ನಿಲ್ಲಿಸಿದ್ದ ಎರಡು ಕಾರುಗಳು ಜಖಂಗೊಂಡಿವೆ. ಶಾಂತಿನಗರ ಸೇರಿದಂತೆ ವಿವಿಧ ಕಡೆಗಳಲ್ಲಿ ಮಳೆಯಾಗಿದ್ದು, ಕೆಲವೆಡೆ ತುಂತುರು ಮಳೆಯಾಗುತ್ತಿದೆ.

ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಉಂಟಾಗಿ ವಾಯುಭಾರ ಕುಸಿತಗೊಂಡಿದ್ದು, ಇದರ ಪರಿಣಾಮ ಕರ್ನಾಟಕ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆಯಾಗುತ್ತಿದೆ. ಇಂದಿನಿಂದ ನಾಲ್ಕು ದಿನಗಳ ಕಾಲ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತವು ನಾಳೆ ಮತ್ತು ನಾಡಿದ್ದು ತೀವ್ರವಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ