ರಾಜ್ಯದಾದ್ಯಂತ ಐದು ದಿನ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಅರಬ್ಬಿ ಸಮುದ್ರದಲ್ಲಿಯೂ ವಾಯುಭಾರ ಕುಸಿತವಾಗಿದ್ದು, ಚಂಡಮಾರುತ ಏಳುತ್ತದೆ ಎಂದು ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ಡಿ.1 ರಿಂದ 4ರವರೆಗೆ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭವಿಷ್ಯ ನೀಡಿದೆ.

ರಾಜ್ಯದಾದ್ಯಂತ ಐದು ದಿನ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ
ಚಂಡಮಾರುತ (ಸಂಗ್ರಹ ಚಿತ್ರ)
Edited By:

Updated on: Nov 30, 2020 | 11:11 AM

ಬೆಂಗಳೂರು: ನಿವಾರ್ ಚಂಡಮಾರುತದ ಸಂಕಷ್ಟದಿಂದ ಪುದುಚೇರಿ ಮತ್ತು ತಮಿಳುನಾಡು ಇನ್ನೂ ಚೇತರಿಸಿಕೊಂಡಿಲ್ಲ. ಪರಿಹಾರ ಕಾರ್ಯಗಳು ಭರದಿಂದ ಸಾಗುತ್ತಿವೆ. ಆದರೆ ಈ ನಡುವೆಯೇ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಮತ್ತೂ ಎರಡು ಚಂಡಮಾರುತಗಳು ರೂಪುಗೊಂಡಿವೆ.

ಚಂಡಮಾರುತಗಳ ಪ್ರಭಾವದಿಂದ ಮುಂದಿನ 36 ಗಂಟೆಗಳಲ್ಲಿ ಕರ್ನಾಟಕದ ವಿವಿಧೆಡೆಯೂ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಮಿಳುನಾಡಿನ ಕರಾವಳಿ ಭಾಗಕ್ಕೆ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಹೆಚ್ಚಿದ್ದು, ಇದರಿಂದ ಪುದುಚೇರಿ, ಕಾರೈಕಲ್, ಕೇರಳ, ಆಂಧ್ರ ಪ್ರದೇಶ ಸೇರಿದಂತೆ ಹಲವು ಕಡೆಗಳಲ್ಲಿಯೂ ಭಾರಿ ಮಳೆಯಾಗುವ ನಿರೀಕ್ಷೆಯಿದೆ.

ಅರಬ್ಬಿ ಸಮುದ್ರದಲ್ಲಿಯೂ ವಾಯುಭಾರ ಕುಸಿತವಾಗಿದ್ದು, ಚಂಡಮಾರುತ ಏಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಡಿ.1 ರಿಂದ 4ರವರೆಗೆ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಇದನ್ನೂ ಓದಿ: ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ, ವಾಹನ ಸವಾರರ ಪರದಾಟ

Published On - 11:09 am, Mon, 30 November 20