Karnataka Rains: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಕೆಲವೇ ಗಂಟೆಗಳಲ್ಲಿ ಸುರಿಯಲಿದೆ ಭಾರಿ ಮಳೆ: ರೆಡ್ ಅಲರ್ಟ್​ ಘೋಷಣೆ

ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮುಂದಿನ ಕೆಲವೇ ಗಂಟೆಗಳಲ್ಲಿ ಧಾರಾಕಾರ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರೆಡ್ ಅಲರ್ಟ್​ ಘೋಷಿಸಲಾಗಿದೆ. ಜುಲೈ 9ರವರೆಗೂ ಭಾರಿ ಮಳೆಯಾಗುವ ನಿರೀಕ್ಷೆ ಇದೆ.

Karnataka Rains: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಕೆಲವೇ ಗಂಟೆಗಳಲ್ಲಿ ಸುರಿಯಲಿದೆ ಭಾರಿ ಮಳೆ: ರೆಡ್ ಅಲರ್ಟ್​ ಘೋಷಣೆ
ಮಳೆImage Credit source: Healthline
Follow us
ನಯನಾ ರಾಜೀವ್
|

Updated on: Jul 05, 2023 | 7:29 AM

ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮುಂದಿನ ಕೆಲವೇ ಗಂಟೆಗಳಲ್ಲಿ ಧಾರಾಕಾರ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರೆಡ್ ಅಲರ್ಟ್​ ಘೋಷಿಸಲಾಗಿದೆ. ಜುಲೈ 9ರವರೆಗೂ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಜುಲೈ 6 ರಂದು ಆರೆಂಜ್ ಅಲರ್ಟ್​ ಜುಲೈ 8 ಹಾಗೂ 9 ರಂದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಇನ್ನು ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಕಲಬುರಗಿ, ರಾಯಚೂರಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬೆಂಗಳೂರು ಗ್ರಾಮಾಂತರದಲ್ಲಿ ಭಾರಿ ಮಳೆಯಾಗಲಿದೆ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗುಮ ಮೈಸೂರು, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮುಲ್ಕಿ, ಪಣಂಬೂರು, ಮಂಗಳೂರು, ಕುಮಟಾ, ಅಂಕೋಲಾ, ಶಿರಾಲಿ, ಹೊನ್ನಾವರ, ಮಂಕಿ, ಗೋಕರ್ಣ, ಕುಂದಾಪುರ, ಗೇರುಸೊಪ್ಪ, ಕಾರವಾರ, ಕೋಟದಲ್ಲಿ ಭಾರಿ ಮಳೆಯಾಗಿದೆ.

ಸುಬ್ರಹ್ಮಣ್ಯ, ಮುನಿರಾಬಾದ್, ಕುಕನೂರು, ಹೊಸಪೇಟೆ, ಕೊಟ್ಟೂರು, ಪುತ್ತೂರು, ಸುಳ್ಯ, ಕಾರ್ಕಳ, ಸಿದ್ದಾಪುರ, ಮಂಚಿಕೆರೆ, ದೇವದುರ್ಗ, ಮಹಾಲಿಂಗಪುರ, ಬರಗೂರು, ಕೊಲ್ಲೂರು, ಜಾನ್ಮನೆ, ಮಾಣಿ, ರೋಣ, ಕೊಟ್ಟಿಗೆಹಾರ, ಕುಣಿಗಲ್, ಕ್ಯಾಸಲ್​ರಾಕ್, ಬೆಳ್ತಂಗಡಿ, ಉಪ್ಪಿನಂಗಡಿ,ಫರ್​ಹತಾಬಾದ್, ಭಾಗಮಂಡಲ, ಕೂಡ್ಲಿಗಿ, ಹೆಬ್ಬೂರು, ಕದ್ರಾ, ಮುಂಡಗೋಡ, ಯಲ್ಲಾಪುರ, ಬನವಾಸಿ, ಧರ್ಮಸ್ಥಳ, ಯಲಬುರ್ಗಾ, ಗಬ್ಬೂರು, ಶೋರಾಪುರ, ಆಲಮಟ್ಟಿ, ಮೂರ್ನಾಡು, ತಾಳಗುಪ್ಪ, ಮಾಗಡಿ, ಚಿಕ್ಕಬಳ್ಳಾಪುರ, ಹೆಸರಘಟ್ಟ, ಕಿರವತ್ತಿ, ಹುಣಸಗಿ, ಕೆಂಭಾವಿ, ಯಡವಾಡ, ಲೋಕಾಪುರ, ಮುಧೋಳ, ಕಂಪ್ಲಿ, ರಾಮನಗರ, ಸುಂಟಿಕೊಪ್ಪ, ಸೋಮವಾರಪೇಟೆ, ಜಯಪುರ, ಮಂಡಗದ್ದೆ, ಉಚ್ಚಂಗಿದುರ್ಗ, ದಾವಣಗೆರೆ, ಯಲಹಂಕದಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rain: ಕರ್ನಾಟಕದಲ್ಲಿ ಭಾರೀ ಮಳೆ, ದಕ್ಷಿಣ ಕನ್ನಡ ಸೇರಿ ಮೂರು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದ್ದು, ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಎಚ್​ಎಎಲ್​ನಲ್ಲಿ 30.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ