AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ 4 ದಿನಗಳ ಕಾಲ ಭಾರಿ ಮಳೆಯ ಎಚ್ಚರಿಕೆ, ರೆಡ್ ಅಲರ್ಟ್​ ಘೋಷಣೆ

ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ವರುಣನ ಆರ್ಭಟ ತೀವ್ರವಾಗಲಿದ್ದು, ರೆಡ್ ಅಲರ್ಟ್​ ಘೋಷಿಸಲಾಗಿದೆ.

Karnataka Rains: ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ 4 ದಿನಗಳ ಕಾಲ ಭಾರಿ ಮಳೆಯ ಎಚ್ಚರಿಕೆ, ರೆಡ್ ಅಲರ್ಟ್​ ಘೋಷಣೆ
ಮಳೆ
ನಯನಾ ರಾಜೀವ್
|

Updated on: Jul 25, 2023 | 7:34 AM

Share

ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ವರುಣನ ಆರ್ಭಟ ತೀವ್ರವಾಗಲಿದ್ದು, ರೆಡ್ ಅಲರ್ಟ್​ ಘೋಷಿಸಲಾಗಿದೆ. ಜುಲೈ 29ರವರೆಗೂ ಭಾರಿ ಮಳೆ ಸುರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಇನ್ನುಳಿದಂತೆ ಬೆಳಗಾವಿ, ಬೀದರ್, ಹಾವೇರಿ, ಕಲಬುರಗಿ, ವಿಜಯಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಅತಿಯಾದ ಮಳೆಯಾಗಲಿದೆ ಎಂದು ಹೇಳಲಾಗಿದೆ.

ಸಿದ್ದಾಪುರ, ಭಾಗಮಂಡಲ, ಕ್ಯಾಸಲ್​ರಾಕ್, ಗೇರುಸೊಪ್ಪ, ಯಲ್ಲಾಪುರ, ಸುಬ್ರಹ್ಮಣ್ಯ, ಕೊಟ್ಟಿಗೆಹಾರ, ನಾಪೋಕ್ಲು, ಕದ್ರಾ, ಕುಮಟಾ, ಮಂಕಿ, ಹುಂಚದಕಟ್ಟೆ, ಮೂರ್ನಾಡು, ಶಿರಾಲಿ, ಹೊನ್ನಾವರ, ಕೊಲ್ಲೂರು, ತಾಳಗುಪ್ಪ, ಸೋಮವಾರಪೇಟೆ, ಕಮ್ಮರಡಿ, ಕೊಪ್ಪ, ಉಪ್ಪಿನಂಗಡಿ, ಲಿಂಗನಮಕ್ಕಿಯಲ್ಲಿ ಅತಿಯಾದ ಮಳೆಯಾಗಿದೆ.

ಗೋಕರ್ಣ, ಮಂಚಿಕೆರೆ, ಪುತ್ತೂರು, ಬೆಳ್ತಂಗಡಿ, ಧರ್ಮಸ್ಥಳ, ಮಂಗಳೂರು ವಿಮಾನ ನಿಲ್ದಾಣ, ಕಳಸ, ಜಯಪುರ, ಕಾರ್ಕಳ, ಕುಂದಾಪುರ, ಕಿರವತ್ತಿ, ಬನವಾಸಿ, ಅಂಕೋಲಾ, ತ್ಯಾಗರ್ತಿ, ಹುಡುಕೆರೆ, ಬೆಳಗಾವಿ, ಶೃಂಗೇರಿ, ಮೂಡಿಗೆರೆ, ಪಣಂಬೂರು, ಕೋಟ, ಬಾಳೆಹೊನ್ನೂರು, ಸಕಲೇಶಪುರ, ವಿರಾಜಪೇಟೆ, ಆನವಟ್ಟಿಯಲ್ಲಿ ಭಾರಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ರಾಜ್ಯದ ಕರಾವಳಿ, ದಕ್ಷಿಣ ಹಾಗೂ ಉತ್ತರ ಒಳನಾಡಿನ ಈ ಜಿಲ್ಲೆಗಳಲ್ಲಿ ಜುಲೈ 28ರವರೆಗೂ ಭಾರಿ ಮಳೆ ಸಾಧ್ಯತೆ

ಸುಳ್ಯ, ಜೋಯಿಡಾ, ಹಳಿಯಾಳ, ಹಾನಗಲ್, ಹಾರಂಗಿ, ಭದ್ರಾವತಿ, ಹಾವೇರಿ, ಅಕ್ಕಿಆಲೂರು, ಹಾವೇರಿ, ಶಿವಮೊಗ್ಗ, ಸವಣೂರು, ಹಿರೆಕೆರೂರು, ಹೊನ್ನಾಳಿ, ಕುಂದಗೋಳ, ಕಲಘಟಗಿ, ಬೈಲಹೊಂಗಲ, ಸಂಕೇಶ್ವರ, ಚಿಂಚೋಳಿ, ಬೇಲೂರು, ಶಿರಹಟ್ಟಿ, ಲಕ್ಷ್ಮೇಶ್ವರ, ಹರಪನಹಳ್ಳಿ, ಸದಲಗಾ, ಬಾಗಲಕೋಟೆ, ದಾವಣಗೆರೆ, ಹೊಸದುರ್ಗ, ನಿಪ್ಪಾಣಿ, ಚಿಕ್ಕೋಡಿ, ಹುಕ್ಕೇರಿ, ನರಗುಂದ, ಬೆಳ್ಳೂರು, ಸಾಲಿಗ್ರಾಮ, ಕೋಲಾರ, ಬೆಂಗಳೂರು, ಗುಬ್ಬಿ, ತಿಪಟೂರು, ಕೊಟ್ಟೂರಿನಲ್ಲಿ ಮಳೆಯಾಗಿದೆ.

ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲೂ ಭಾರಿ ಮಳೆ ಸುರಿಯಲಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಎಚ್​ಎಎಲ್​ನಲ್ಲಿ 27.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 25.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್