Karnataka Rains: ಕರ್ನಾಟಕದ 14 ಜಿಲ್ಲೆಗಳಲ್ಲಿ ಮುಂದಿನ 2 ದಿನ ಭಾರಿ ಮಳೆ

ಕರ್ನಾಟಕದ 14 ಜಿಲ್ಲೆಗಳಲ್ಲಿ ಮುಂದಿನ 2 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ.

Karnataka Rains: ಕರ್ನಾಟಕದ 14 ಜಿಲ್ಲೆಗಳಲ್ಲಿ ಮುಂದಿನ 2 ದಿನ ಭಾರಿ ಮಳೆ
ಮಳೆ
Image Credit source: Mint

Updated on: Jul 28, 2023 | 7:40 AM

ಕರ್ನಾಟಕದ 14 ಜಿಲ್ಲೆಗಳಲ್ಲಿ ಮುಂದಿನ 2 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ.

ಕ್ಯಾಸಲ್​ ರಾಕ್, ಕದ್ರಾ, ಮುಲ್ಕಿ, ಸಿದ್ದಾಪುರ, ಗೋಕರ್ಣ, ಕುಮಟಾ, ಕುಂದಾಪುರ, ಜೋಯ್ಡಾ, ಕಾರವಾರ, ಮಂಚಿಕೇರಿ, ಯಲ್ಲಾಪುರ, ಅಂಕೋಲಾ, ಲೋಂಡಾ, ಗೇರುಸೊಪ್ಪ, ಉಪ್ಪಿನಂಗಡಿ, ನಾಪೊಕ್ಲು, ಜಯಪುರ, ಶೃಂಗೇರಿ, ಲಿಂಗನಮಕ್ಕಿ, ಮಾಣಿ, ಕಾರ್ಕಳ, ಪಣಂಬೂರು, ಬೆಳ್ತಂಗಡಿ, ಕುರ್ಡಿ, ರಾಯಚೂರು, ಬಾಳೆಹೊನ್ನೂರು, ಕಿರವತ್ತಿ, ಹಳಿಯಾಳ, ಕೊಪ್ಪ, ಕಮ್ಮರಡಿ, ಮಂಗಳೂರು, ಕೋಟ, ಹಾಸನ, ಸೈದಾಪುರ, ಪುತ್ತೂರು, ಮುನಿರಾಬಾದ್, ಗುತ್ತಲ್, ಸೋಮವಾರಪೇಟೆ, ಶನಿವಾರಸಂತೆ, ಕೂಡ್ಲಿಗಿ, ಬಳ್ಳಾರಿ, ಮುಂಡಗೋಡ, ಬನವಾಸಿ, ಮಾನ್ವಿ, ಸಿಂಧನೂರು, ಜಾಲಹಳ್ಳಿ, ದೇವದುರ್ಗ, ಸಿಂದಗಿ, ತಾಳಿಕೋಟೆ, ದೇವರಹಿಪ್ಪರಗಿ, ಕೆಂಭಾವಿ, ಶೋರಾಪುರ, ಕಕ್ಕೇರಿ, ಸೇಡಬಾಳ, ಅಥಣಿ, ಚಿಂಚೋಳಿ, ಯಲಬುರ್ಗಾ, ಸವಣೂರು, ಬಾದಾಮಿ, ಹಿರೆಕೆರೂರು, ಪೊನ್ನಂಪೇಟೆ, ಹಾರಂಗಿ, ಚಿಕ್ಕೋಡಿ, ಹುಕ್ಕೇರಿ, ಬೈಲಹೊಂಗಲ, ಆಲಮಟ್ಟಿ, ಕುಷ್ಟಗಿ, ನಾರಾಯಣಪುರ, ಬೇಲೂರು, ಚಿಕ್ಕಮಗಳೂರು, ಸಕಲೇಶಪುರ, ಪರಶುರಾಂಪುರ, ಚಿಕ್ಕಬಳ್ಳಾಪುರ, ಚಿಂತಾಮಣಿ, ಬುಕ್ಕಪಟ್ಟಣ, ಗುಬ್ಬಿ, ಅಜ್ಜಂಪುರ, ಯುಗಟಿ, ಭದ್ರಾವತಿ, ಸಂತೆಬೆನ್ನೂರು, ಕೃಷ್ಣರಾಜಪೇಟೆ, ಜಿಕೆವಿಕೆಯಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 2 ದಿನ ಧಾರಾಕಾರ ಮಳೆ, ರೆಡ್ ಅಲರ್ಟ್​ ಘೋಷಣೆ

ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಉತ್ತರ ಒಳನಾಡಿನ ಕಲಬುರಗಿ, ಬೀದರ್ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಮರೆಯಾಗಿದ್ದು ಬೆಳಗ್ಗೆಯಿಂದಲೇ ಬಿಸಿಲು ಬಿಟ್ಟಿದೆ, ಮಧ್ಯಾಹ್ನದ ವೇಳೆ ಮತ್ತೆ ಮೋಡಕವಿದ ವಾತಾವರಣ ನಿರ್ಮಾಣವಾಗಲಿದ್ದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಎಚ್​ಎಎಲ್​ನಲ್ಲಿ 24.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 24.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ, ಕೆಐಎಎಲ್​ನಲ್ಲಿ 24.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:40 am, Fri, 28 July 23

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us