ರಾಮನಗರ-ಗೋವಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ಅನುಮತಿ

ಭಾರಿ ಮಳೆ ಹಿನ್ನೆಲೆಯಲ್ಲಿ ಭಾರಿ ವಾಹನಗಳ ಸಂಚಾರ ಬಂದ್ ಮಾಡಲಾಗಿದ್ದ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ರಾಮನಗರ ಅನಮೋಡ ರಾಷ್ಟ್ರೀಯ ಹೆದ್ದಾರಿ 4Aರಲ್ಲಿ ಇದೀಗ ಅನುಮತಿ ನೀಡಲಾಗಿದೆ. ಈ ಕುರಿತಾಗಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ.ಕೆ ಆದೇಶ ಹೊರಡಿಸಿದ್ದಾರೆ.

ರಾಮನಗರ-ಗೋವಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ಅನುಮತಿ
ರಾಮನಗರ-ಗೋವಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ಅನುಮತಿ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Sep 17, 2024 | 11:02 PM

ಕಾರವಾರ, ಸೆಪ್ಟೆಂಬರ್​ 17: ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ರಾಮನಗರ ಅನಮೋಡ ರಾಷ್ಟ್ರೀಯ ಹೆದ್ದಾರಿ 4Aರಲ್ಲಿ (Ramanagara – Goa National Highway) ಭಾರಿ ವಾಹನಗಳ ಸಂಚಾರಕ್ಕೆ ಅನುಮತಿ ನೀಡಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ.ಕೆ ಆದೇಶ ಹೊರಡಿಸಿದ್ದಾರೆ. ಭಾರಿ ಮಳೆ ಹಿನ್ನೆಲೆಯಲ್ಲಿ ವಾಹನ ಸಂಚಾರ ಬಂದ್ ಮಾಡಲಾಗಿತ್ತು.

ಇದೀಗ 40 ಕಿಲೋ ಮೀಟರ್ ವೇಗದಲ್ಲಿ ಭಾರಿ ವಾಹನ ಸಂಚಾರಕ್ಕೆ ಅನುಮತಿ ನೀಡಲಾಗಿದ್ದು, ಹೈವೇನಲ್ಲಿ ವಾಹನಗಳ ವೇಗಮಿತಿ ಸೂಚನಾ ಫಲಕ ಅಳವಡಿಕೆಗೆ ಸೂಚನೆ ನೀಡಲಾಗಿದ್ದು, 24 ಗಂಟೆ ಪೊಲೀಸರ ನಿಯೋಜಿಸಿ ಸಂಚಾರ ಸುಗಮಗೊಳಿಸಲು ಆದೇಶ ಹೊರಡಿಸಲಾಗಿದೆ.

ಇದನ್ನೂ ಓದಿ: ರಾಮನಗರ – ಗೋವಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ವಾಹನ ಸಂಚಾರ ನಿಷೇಧ

ಹೆದ್ದಾರಿಯಲ್ಲಿನ ಹೊಂಡ ಸೆಪ್ಟೆಂಬರ್ 20ರೊಳಗೆ ಸರಿಪಡಿಸಲು ಸೂಚನೆ ನೀಡಲಾಗಿದ್ದು, ಆನೆ ಸಂಚಾರದ ಅಂಡರ್‌ಪಾಸ್ ಸೇರಿ ಬಾಕಿ ಕಾಮಗಾರಿ ವೇಳೆ ರಾಷ್ಟ್ರೀಯ ಹೆದ್ದಾರಿ 4Aರಲ್ಲಿ ವಾಹನಗಳ ಸಂಚಾರ ನಿರ್ಬಂಧಕ್ಕೆ ಎನ್​​ಹೆಚ್​​ಎಐ (NHAI) ಧಾರವಾಡ ಯೋಜನಾ ನಿರ್ದೇಶಕರಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.

ನಿರಂತರ ಮಳೆ ಹಾಗೂ ರಸ್ತೆ ಹದಗೆಟ್ಟಿದ್ದರಿಂದಾಗಿ ರಸ್ತೆಯಲ್ಲಿ ನೀರು ನಿಂತುಕೊಂಡಿತ್ತು. ಹಾಗಾಗಿ ಅನಾಹುತಕ್ಕೂ ಮುಂಚೆಯೇ ಎಚ್ಚೆತ್ತುಕೊಂಡಿದ್ದ ಜಿಲ್ಲಾಡಳಿತ  ಜುಲೈ 11 ರಿಂದ ಸೆಪ್ಟೆಂಬರ್ 30ರ ವರೆಗೆ ರಾಮನಗರ – ಗೋವಾ ರಾಷ್ಟ್ರೀಯ ಹೆದ್ದಾರಿNH 4A ನಲ್ಲಿ ಭಾರಿ ವಾಹನ ಸಂಚಾರಕ್ಕೆ ನಿಷೇಧ ಹೇರಿ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಅವರು ಆದೇಶ ಹೊರಡಿಸಿದ್ದರು.

ಇದನ್ನೂ ಓದಿ: ಶಿರೂರು ಗುಡ್ಡ ಕುಸಿತದಲ್ಲಿ ಕಾಣೆಯಾಗಿರುವ ಜಗನಾಥ್​ ಪುತ್ರಿಗೆ ನೌಕರಿ ಕೊಡಿಸಿದ ಹೆಚ್​ಡಿ ಕುಮಾರಸ್ವಾಮಿ

ಅಷ್ಟೇ ಅಲ್ಲದೇ ಬದಲಿ ಮಾರ್ಗಗಳನ್ನು ಸೂಚಿಸಲಾಗಿತ್ತು. ಧಾರವಾಡದಿಂದ ಸಂಚರಿಸುವ ವಾಹನಗಳಿಗೆ ಅಳ್ನಾವರ- ಹಳಿಯಾಳ- ಯಲ್ಲಾಪುರ ಕಾರವಾರದಿಂದ ಗೋವಾಕ್ಕೆ ಹಾಗೂ ಬೆಳಗಾವಿಯಿಂದ ಸಂಚರಿಸುವ ವಾಹನಗಳಿಗೆ ಚೋರ್ಲಾ ಘಾಟ್ ಮಾರ್ಗವಾಗಿ ಗೋವಾಕ್ಕೆ ತೆರಳಬಹುದಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.