ಕುದುರೆಮುಖ ಘಟ್ಟ ಪ್ರದೇಶದಲ್ಲೂ ಭಾರಿ ಮಳೆ, ಸಂಪೂರ್ಣವಾಗಿ ಮುಳುಗಿದ ಹೆಬ್ಬಾರೆ ಸೇತುವೆ
ಕರಾವಳಿ ಪ್ರಾಂತ್ಯ ಮತ್ತು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಉತ್ತರ ಕನ್ನಡ ಮೊದಲಾದ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಕಡಿಮೆಯಾಗುತ್ತಿಲ್ಲ ಮತ್ತು ಮುನ್ನೆಚ್ಚರಿಕೆಯ ಕ್ರಮವಾಗಿ ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕೆಲವೆಡೆ ನದಿಪಾತ್ರಗಳಲ್ಲಿ ವಾಸವಾಗಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸಾಗಿಸುವ ಕೆಲಸ ನಡೆಯುತ್ತಿದೆ.
ಚಿಕ್ಕಮಗಳೂರು: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆ ಧಾರಾಕಾರವಾಗಿ ಸುರಿಯುತ್ತಿರುವಂತೆಯೇ ಕುದುರೆಮುಖ ಘಟ್ಟ ಪ್ರದೇಶಗಳಲ್ಲೂ ಎಡೆಬಿಡದೆ ಮಳೆಯಾಗುತ್ತಿದೆ. ಪರಿಣಾಮವಾಗಿ ಭದ್ರಾ ನದಿ ಉಕ್ಕಿದೆ ಮತ್ತು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಎರಡು ದಿನಗಳ ಹಿಂದೆ ಹೆಬ್ಬಾಳೆ ಸೇತುವೆ ಮೇಲೆ ನೀರು ಹರಿಯುತ್ತಿದ್ದ ದೃಶ್ಯದ ವಿಡಿಯೋ ಬಿತ್ತರಿಸಿದ್ದೆವು. ಅದರೆ ಈಗ ಅದು ಸಂಪೂರ್ಣವಾಗಿ ಮುಳುಗಡೆಯಾಗಿದೆ. ಈ ಸೇತುವೆಯು ಹೊರನಾಡು ಮತ್ತು ಕಳ ಕಳಸ ನಡುವೆ ಸಂಪರ್ಕ ಕಲ್ಪಿಸುತ್ತದೆ. ಸೇತುವೆಯ ಎರಡೂ ಕಡೆ ಪೊಲೀಸರು ಬ್ಯಾರಿಕೇಡ್ ಗಳನ್ನು ಅಳವಡಿಸಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಿದ್ದಾರೆ. ಭದ್ರಾನದಿ ರೌದ್ರ ರೂಪ ತಳೆದಿರುವುದನ್ನು ಇಲ್ಲಿ ನೋಡಬಹುದು. ಇಲ್ಲಿ ಕಾಣುವ ಎರಡು ಸೇತುವೆಗಳ ಮೇಲೂ ನೀರು ಹರಿಯಲಿರುವ ಸೂಚನೆ ಸ್ಪಷ್ಟವಾಗಿದೆ. ಸದ್ಯಕ್ಕೆ ವಾಹನಗಳು ಓಡಾಡುತ್ತಿವೆ ಮಳೆ ಮುಂದುವರಿದರೆ ಸಾಯಂಕಾಲದ ಹೊತ್ತಿಗೆ ಸೇತುವೆ ಮೇಲೆ ನೀರು ಬರಬಹುದು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಕರ್ನಾಟಕದಲ್ಲಿ ಮುಂದುವರೆದ ಮಳೆ ಆರ್ಭಟ: ಮುಂಜಾಗ್ರತವಾಗಿ ಈ ಜಿಲ್ಲೆಗಳಲ್ಲಿ ನಾಳೆ ಶಾಲಾ, ಕಾಲೇಜಿಗೆ ರಜೆ