ಚಾಮರಾಜನಗರ, ಮೇ 20: ಹೆಜ್ಜೇನು ದಾಳಿಯಿಂದ (Hejjenu attack) ಪತ್ನಿಗೆ ಗಂಭೀರ ಗಾಯಗಳಾಗಿದ್ದರೆ, ಪತಿ ಸಾವನ್ನಪ್ಪಿರುವಂಹ ಘಟನೆ ಜಿಲ್ಲೆಯ ಹನೂರು ತಾಲೂಕಿನ ಬೆಳತ್ತೂರು ಗ್ರಾಮದಲ್ಲಿ ನಡೆದಿದೆ. ಬಾಳೆ ಬೆಳೆಗೆ ಕೀಟನಾಶಕ ಸಿಂಪಡಿಸುತ್ತಿದ್ದಾಗ ಹೆಜ್ಜೇನು ದಾಳಿ ಮಾಡಿದ್ದು ದುರಂತ ಸಂಭವಿಸಿದೆ. ತುಳಸಿದಾಸ್(45) ಮೃತ ಪತಿ. ಪತ್ನಿ ಆಶಾಗೆ ಗಂಭೀರ ಗಾಯಗಳಾಗಿದ್ದು, ಹನೂರು ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಬಳ್ಳಾರಿ: ಹಾವು ಕಚ್ಚಿ ಮಹಿಳೆ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಬಿಎಂ ಸೂಗೂರು ಗ್ರಾಮದಲ್ಲಿ ನಡೆದಿದೆ. ಬಿ. ಸಾವಿತ್ರಮ್ಮ (70) ಮೃತ ಮಹಿಳೆ. ಮನೆಯಲ್ಲಿ ಮೊಬೈಲ್ ತೆಗೆದುಕೊಳ್ಳುವ ವೇಳೆ ಹಾವು ಕಚ್ಚಿದ್ದು, ಆದರೆ ಹಾವು ಕಚ್ಚಿದಿದೆ ಅಂತಾ ಗಮನಿಸಿಲ್ಲ.
ಇದನ್ನೂ ಓದಿ: ಚಿಕ್ಕಬಳ್ಳಾಪುರ: ಡ್ರಾಪ್ ಕೊಡುವ ನೆಪದಲ್ಲಿ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನ: ಓರ್ವನ ಬಂಧನ
ಬಾಯಲ್ಲಿ ನೊರೆ ಬರುತ್ತಿದ್ದಂತೆ ಕುಟುಂಬಸ್ಥರು ಗಮಸಿದ್ದು, ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಸಿರುಗುಪ್ಪ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿದೆ.
ಯಾದಗಿರಿ: ಕುರಿ ಮೇಯಿಸಲು ತೆರಳಿದ್ದಾಗ ಸಿಡಿಲು ಬಡಿದು ಕುರಿಗಾಯಿ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಗುರುಮಠಕಲ್ ತಾಲೂಕಿನ ರಾಂಪುರ ಗ್ರಾಮದಲ್ಲಿ ನಡೆದಿದೆ. ಚಂದಪ್ಪ(55) ಮೃತ ಕುರಿಗಾಯಿ. ಗುರುಮಠಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಇದನ್ನೂ ಓದಿ: ಬೆಳಗಾವಿ: ಮಲತಾಯಿಯ ಕ್ರೌರ್ಯಕ್ಕೆ ಬಲಿಯಾಯ್ತಾ 3 ವರ್ಷದ ಕಂದಮ್ಮ? ಆಗಿದ್ದೇನು?
ಮತ್ತೊಂದು ಪ್ರಕರಣದಲ್ಲಿ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಟಿ.ಕಲ್ಲಹಳ್ಳಿಯ ಗೊಲ್ಲರಹಟ್ಟಿ ಗ್ರಾಮದಲ್ಲಿ ಗಾಳಿ ಸಹಿತ ಮಳೆಗೆ ಕೊಟ್ಟಿಗೆ ಮುರಿದು ಬಿದ್ದ ಪರಿಣಾಮ 8ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿವೆ. ರೈತ ನಾಗಣ್ಣ ಪೂಜಾರಿ ಎಂಬುವರಿಗೆ ಸೇರಿದ 8 ಕುರಿಗಳು ಮೃತಪಟ್ಟಿವೆ. ಘಟನಾ ಸ್ಥಳಕ್ಕೆ ಕಂದಾಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.