ರಾಜ್ಯಾದ್ಯಂತ ಎಲ್ಲ ಪೊಲೀಸ್ ಸಿಬ್ಬಂದಿಗೆ ಹೆಲ್ಮೆಟ್ ಕಡ್ಡಾಯ: ಅಲೋಕ್ ಕುಮಾರ್ ಆದೇಶ
ಮೋಟಾರು ವಾಹನ ಕಾಯ್ದೆ ಕಲಂ 129(ಎ) ಮತ್ತು (ಬಿ) ಅಡಿ ಬೈಕ್ ಚಾಲನೆ ವೇಳೆ ಪೊಲೀಸ್ ಸಿಬ್ಬಂದಿ ಕಡ್ಡಾಯವಾಗಿ ಹೆಲ್ಮೆಟ್ ಧರಿಸುವಂತೆ ಬುಧವಾರ ಸಂಚಾರ ಮತ್ತು ರಸ್ತೆ ಸುರಕ್ಷತಾ ಎಡಿಜಿಪಿ ಅಲೋಕ್ ಕುಮಾರ್ ಸುತ್ತೋಲೆ ಹೊರಡಿಸಿದ್ದಾರೆ. ರಾಜ್ಯಾದ್ಯಂತ ಎಲ್ಲ ಪೊಲೀಸ್ ಸಿಬ್ಬಂದಿಗೆ ಕಡ್ಡಾಯ ಹೆಲ್ಮೆಟ್ ಆದೇಶ ಹೊರಡಿಸಲಾಗಿದೆ.
ಬೆಂಗಳೂರು, ಮಾರ್ಚ್ 20: ಬೈಕ್ ಚಾಲನೆ ವೇಳೆ ಪೊಲೀಸ್ ಸಿಬ್ಬಂದಿ ಕಡ್ಡಾಯವಾಗಿ ಹೆಲ್ಮೆಟ್ (Helmet) ಧರಿಸುವಂತೆ ಬುಧವಾರ ಸಂಚಾರ ಮತ್ತು ರಸ್ತೆ ಸುರಕ್ಷತಾ ಎಡಿಜಿಪಿ ಅಲೋಕ್ ಕುಮಾರ್ ಸುತ್ತೋಲೆ ಹೊರಡಿಸಿದ್ದಾರೆ. ರಾಜ್ಯದ ವಿವಿಧ ಘಟಕಗಳಲ್ಲಿ ಅಪಘಾತ ಘಟನೆಗಳು ವರದಿಯಾಗುತ್ತಿವೆ. ಅದರಲ್ಲಿಯೂ ಹೆಲ್ಮೆಟ್ ಇಲ್ಲದೇ ಅಧಿಕಾರಿ ಮತ್ತು ಸಿಬ್ಬಂದಿ ರಸ್ತೆ ಅಪಘಾತದಲ್ಲಿ ಕೆಲವರಿಗೆ ಗಾಯಗಳಾದರೆ ಇನ್ನೂ ಕೆಲವರು ಮೃತಪಟ್ಟಿದ್ದಾರೆ. ಹೀಗಾಗಿ ಮತ್ತೆ ಈ ರೀತಿಯ ಅಪಘಾತಗಳು ಮರು ಕಳುಹಿಸದಂತೆ ಕ್ರಮಕೈಗೊಂಡಿದ್ದು, ರಾಜ್ಯಾದ್ಯಂತ ಎಲ್ಲ ಪೊಲೀಸ್ ಸಿಬ್ಬಂದಿಗೆ ಕಡ್ಡಾಯ ಹೆಲ್ಮೆಟ್ ಆದೇಶ ಹೊರಡಿಸಲಾಗಿದೆ.
ಮೋಟಾರು ವಾಹನ ಕಾಯ್ದೆ ಕಲಂ 129(ಎ) ಮತ್ತು (ಬಿ) ಅಡಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ದ್ವಿಚಕ್ರವಾಹನ ಸಂಚಾರದ ವೇಳೆ ಹೆಲ್ಮೆಟ್ ನಿರ್ದಿಷ್ಟತೆಯ ಪಾಲನೆ ಮಾಡುವಂತೆ ಅಲೋಕ್ ಕುಮಾರ್ ಸೂಚನೆ ನೀಡಿದ್ದಾರೆ.
ಸುತ್ತೋಲೆಯಲ್ಲಿ ಏನಿದೆ?
ರಾಜ್ಯದ ವಿವಿಧ ಘಟಕಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ತಮ್ಮ ತಮ್ಮ ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವಾಗ ಹೆಲ್ಮಟ್ ಧರಿಸದೇ, ರಸ್ತೆ ಅವಘಾತಗಳು ಉಂಟಾಗಿ, ಕೆಲವು ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ಗಂಭೀರವಾಗಿ ಗಾಯಗೊಂಡಿದ್ದು ಮತ್ತು ಕೆಲವರು ಮೃತಪಟ್ಟಿರುವ ಘಟನೆಗಳು ಸಂಭವಿಸಿರುವುದು ಕಂಡು ಬಂದಿದೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ 6 ವರ್ಷದ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯ, ದಂಡ ವಸೂಲಿಗೆ ಮನೆಗೇ ಬರ್ತಾರೆ ಪೊಲೀಸರು
ಆದ್ದರಿಂದ ಇನ್ನು ಮುಂದೆ ಇಂತಹ ಘಟನೆಗಳನ್ನು ತಪ್ಪಿಸುವ ಸಲುವಾಗಿ ರಾಜ್ಯಾದ್ಯಂತ ಎಲ್ಲಾ ಘಟಕಗಳಲ್ಲಿ (ಬೆಂಗಳೂರು ನಗರ ಒಳಗೊಂಡಂತೆ) ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ತಮ್ಮ ತಮ್ಮ ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವಾಗ ಮೋಟರು ವಾಹನ ಕಾಯ್ದೆಯಡಿಯಲ್ಲಿ ಕಲಂ 129(ಎ) & (ಬಿ) ರಲ್ಲಿ ನಮೂದಿಸಿರುವಂತೆ ಹಾಗೂ ಸೂಚಿಸಿರುವಂತೆ ಕಡ್ಡಾಯವಾಗಿ ಸುರಕ್ಷಿತ ಹೆಲ್ಮಟ್ನ್ನು ಧರಿಸುವುದು ಅಗತ್ಯವಾಗಿದೆ.
ಇದನ್ನೂ ಓದಿ: ಹೆಲ್ಮೆಟ್ ಕಡ್ಡಾಯಕ್ಕಾಗಿ ಹಾವೇರಿ ಜಿಲ್ಲೆಯಲ್ಲಿ ವಿಶೇಷ ಜಾಗೃತಿ ಅಭಿಯಾನ
ಮೋಟಾರು ವಾಹನ ಕಾಯ್ದೆಯ ಕಲಂ 129 (ಎ) & (ಬಿ) ರಡಿಯಲ್ಲಿ ಹೆಲ್ಮಟ್ನ ನಿರ್ದಿಷ್ಟತೆಯೆ ಬಗ್ಗೆ ವಿವರಿಸಿದ್ದು ಆ ಪ್ರಕಾರ ಎಲ್ಲಾ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ತಮ್ಮ ತಮ್ಮ ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವಾಗ ಕಡ್ಡಾಯವಾಗಿ ಸುರಕ್ಷಿತ ಹೆಲೈಟ್ನ್ನು ಧರಿಸುವಂತೆ ನಿರ್ದೇಶನಗಳನ್ನು ನೀಡಿ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 6:46 am, Wed, 20 March 24