ಹೇಮಂತ್ ನಿಂಬಾಳ್ಕರ್ ಸರ್ಕಾರದ ದಾರಿ ತಪ್ಪಿಸುತ್ತಿದ್ದಾರೆ; ಗೃಹ ಕಾರ್ಯದರ್ಶಿ ಡಿ.ರೂಪಾ ಗಂಭೀರ ಆರೋಪ
ಈ ಟೆಂಡರ್ ಪ್ರಕ್ರಿಯೆಯಲ್ಲಿಯೇ ಸಾಕಷ್ಟು ಅಕ್ರಮಗಳು ನಡೆದಿದೆ. ಸರ್ಕಾರಕ್ಕೆ ಈ ಬಗ್ಗೆ ತಪ್ಪು ಮಾಹಿತಿ ಸಲ್ಲಿಕೆಯಾಗಿದೆ. ಹೇಮಂತ್ ನಿಂಬಾಳ್ಕರ್ ಸರ್ಕಾರದ ದಾರಿ ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಬೆಂಗಳೂರು: ‘ಹೇಮಂತ್ ನಿಂಬಾಳ್ಕರ್ ಸರ್ಕಾರದ ದಾರಿ ತಪ್ಪಿಸುತ್ತಿದ್ದಾರೆ’ ಎಂದು ಗೃಹ ಕಾರ್ಯದರ್ಶಿ ಡಿ.ರೂಪಾ ಆರೋಪಿಸಿದ್ದಾರೆ. ನಿರ್ಭಯಾ ಟೆಂಡರ್ನಲ್ಲಿ ಅವ್ಯವಹಾರ ನಡೆದಿದೆ ಎಂದು ರೂಪಾ ಅವರು ಬರೆದಿದ್ದ ಪತ್ರಕ್ಕೆ ಉತ್ತರಿಸಲೆಂದು ಹೇಮಂತ್ ನಿಂಬಾಳ್ಕರ್ ಇಂದು ಮುಂಜಾನೆ ಸುದ್ದಿಗೋಷ್ಠಿ ನಡೆಸಿದ್ದರು. ಹೇಮಂತ್ ನಿಂಬಾಳ್ಕರ್ ಈ ಸುದ್ದಿಗೋಷ್ಠಿಯಲ್ಲಿ ಪ್ರಸ್ತಾಪಿಸಿರುವ ವಿಚಾರಗಳನ್ನು ರೂಪಾ ಸಾರಾಸಗಟಾಗಿ ನಿರಾಕರಿಸಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಗೃಹ ಕಾರ್ಯದರ್ಶಿ ಡಿ.ರೂಪಾ, 2 ಬಾರಿ ಟೆಂಡರ್ ರದ್ದತಿಗೆ ಕಾರಣವಾದ ದೂರಿಗೆ ನಿಂಬಾಳ್ಕರ್ ಉತ್ತರಿಸಿಲ್ಲ. ಬೃಹತ್ ಮೊತ್ತದ ಟೆಂಡರ್ನಲ್ಲಿ ಭ್ರಷ್ಟಾಚಾರ ಮಾಡಿದ್ದಾರೆ. ಈ ಟೆಂಡರ್ ಪ್ರಕ್ರಿಯೆಯಲ್ಲಿಯೇ ಸಾಕಷ್ಟು ಅಕ್ರಮಗಳು ನಡೆದಿದೆ. ಸರ್ಕಾರಕ್ಕೆ ಈ ಬಗ್ಗೆ ತಪ್ಪು ಮಾಹಿತಿ ಸಲ್ಲಿಕೆಯಾಗಿದೆ. ಹೇಮಂತ್ ನಿಂಬಾಳ್ಕರ್ ಸರ್ಕಾರದ ದಾರಿ ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
₹ 4500 ಕೋಟಿ ಐಎಂಎ ಕಂಪನಿ ಹಗರಣದಲ್ಲಿ ಹೇಮಂತ್ ನಿಂಬಾಳ್ಕರ್ ಮೇಲೆ ಸಿಬಿಐ ಚಾರ್ಜ್‌ಶೀಟ್ ಸಲ್ಲಿಸಿದೆ ಎಂದು ರೂಪಾ ನೆನಪಿಸಿಕೊಂಡಿದ್ದಾರೆ. ನಿರ್ಭಯಾ ಸೇಫ್ ಸಿಟಿ ಯೋಜನೆಯ ಇಡೀ ಪ್ರಕ್ರಿಯೆಯಲ್ಲಿ ಹೇಮಂತ್ ನಿಂಬಾಳ್ಕರ್ ವಹಿಸಿದ ಪಾತ್ರದ ಬಗ್ಗೆ ತನಿಖೆ ನಡೆಸಬೇಕಾಗಿದೆ ಎಂದು ಆಗ್ರಹಿಸಿದ್ದಾರೆ.
ಇಂದು ಮುಂಜಾನೆ ಸುದ್ದಿಗೋಷ್ಠಿ ನಡೆಸಿದ್ದ ಹೇಮಂತ್ ನಿಂಬಾಳ್ಕರ್, ₹ 619 ಕೋಟಿ ಅಂದಾಜಿನ ನಿರ್ಭಯಾ ಸೇಫ್ ಸಿಟಿ ಟೆಂಡರ್ ಬಿಡ್ಡಿಂಗ್ ಶಿಸ್ತುಬದ್ಧವಾಗಿ, ಪಾರದರ್ಶಕವಾಗಿ ನಡೆಯುತ್ತಿದೆ. ಯಾವುದೇ ಕಾರಣಕ್ಕೂ ಇದರಲ್ಲಿ ಗೊಂದಲ ಇಲ್ಲ ಎಂದು ಹೇಳಿದ್ದರು.
ಹೇಮಂತ್ ನಿಂಬಾಳ್ಕರ್ ಹೇಳಿದ್ದೇನು?
ಮಹಿಳೆಯರ ಸುರಕ್ಷಿತೆಗಾಗಿ ಈ ಟೆಂಡರ್ ಕರೆಯಲಾಗಿತ್ತು. ನಾನು ಬರೆದ ಪತ್ರದ ಬಳೀಕ ಅನೇಕ ಊಹೆಗಳು ಉದ್ಭವಿಸಿವೆ. ಮೊದಲೆನೆಯದಾಗಿ BEL ಡಿಸ್ ಕ್ವಾಲಿಫೈ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಆದರೆ BEL ಬಿಡ್ಡಿಂಗ್‌ನಲ್ಲಿ ಭಾಗಿಯಾಗಿರಲಿಲ್ಲ. ಕಾಲ್ ಒನ್‌ನಲ್ಲಿ ಬಿಇಎಲ್ ಟೆಂಡರ್ ಹಾಕಿರಲಿಲ್ಲ. ಬಿಡ್ಡಿಂಗ್‌ನಲ್ಲಿ ಮೂರು ಕಂಪನಿಗಳು ಭಾಗಿಯಾಗಿದ್ದವು. ಆ ಕಂಪನಿಗಳು ಮೊದಲ ಹಂತದಲ್ಲಿ ಕ್ವಾಲಿಫೈ ಆಗಿರಲಿಲ್ಲ. ಬಳಿಕ ಜೂನ್ 20ರಂದು 3 ಕಂಪನಿಗಳು ಕ್ವಾಲಿಫೈ ಆಗಿದ್ದವು ಎಂದು ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಸ್ಪಷ್ಟನೆ ನೀಡಿದ್ದರು.
ನಿರ್ಭಯಾ ಸೇಫ್ ಸಿಟಿ ಟೆಂಡರ್ಗೆ ಬಿಇಎಲ್ ಬಿಡ್ ಮಾಡಿರಲಿಲ್ಲ: ಹೇಮಂತ್ ನಿಂಬಾಳ್ಕರ್