Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನ ಕೋಳಿಗೆ ಮಲ ಬದ್ಧತೆ ಸಮಸ್ಯೆ’ ಚಿಕಿತ್ಸೆಗೆಂದು ಹೊರಬಂದೆ, ಲಾಕ್​ಡೌನ್​ ಉಲ್ಲಂಘಿಸಿದ್ದಕ್ಕೆ ಕಾರಣ ಹೇಳಿದ ಗದಗ ವ್ಯಕ್ತಿ; ವಿಡಿಯೋ ವೈರಲ್

ಲಾಕ್​ಡೌನ್​ ಸಮಯದಲ್ಲಿ ಮನೆಯಿಂದ ಹೊರಟಿದ್ದ ಗದಗ ಜಿಲ್ಲೆ ವ್ಯಕ್ತಿಯೊಬ್ಬರು, ನನ್ನ ಕೋಳಿ ಮಲಬದ್ಧತೆ ಸಮಸ್ಯೆ ಕಾಡುತ್ತಿದ್ದೆ. ಹಾಗಾಗಿ ಚಿಕಿತ್ಸೆ ಕೊಡಲು ಪಶುವೈದ್ಯರ ಬಳಿ ಹೋಗುತ್ತಿದ್ದೇನೆ ಎಂದು ಹೇಳಿದ್ದಾರೆ.

‘ನನ್ನ ಕೋಳಿಗೆ ಮಲ ಬದ್ಧತೆ ಸಮಸ್ಯೆ’ ಚಿಕಿತ್ಸೆಗೆಂದು ಹೊರಬಂದೆ, ಲಾಕ್​ಡೌನ್​ ಉಲ್ಲಂಘಿಸಿದ್ದಕ್ಕೆ ಕಾರಣ ಹೇಳಿದ ಗದಗ ವ್ಯಕ್ತಿ; ವಿಡಿಯೋ ವೈರಲ್
‘ನನ್ನ ಕೋಳಿಗೆ ಮಲ ಬದ್ಧತೆ ಸಮಸ್ಯೆ’ ಚಿಕಿತ್ಸೆಗೆಂದು ಹೊರಬಂದೆ!
Follow us
TV9 Web
| Updated By: shruti hegde

Updated on: Jun 04, 2021 | 10:27 AM

ಗದಗ: ರಾಜ್ಯದಲ್ಲಿ ಕೊರೊನಾ ಹಾವಳಿಯಿಂದ ಲಾಕ್​ಡೌನ್​ ಜಾರಿಯಲ್ಲಿದ್ದು ಸಾಂಕ್ರಾಮಿಕ ಹರಡುವಿಕೆಯ ನಿಯಂತ್ರಣಕ್ಕಾಗಿ ಹೋರಾಟವೇ ನಡೆಯುತ್ತಿದೆ. ಹೀಗಾಗಿ ಅನಗತ್ಯವಾಗಿ ಜನರು ಹೊರಬಾರದಂತೆ ಪೊಲೀಸರು ಕಟ್ಟೆಚ್ಚರದಿಂದ ಕಾಯುತ್ತಿದ್ದಾರೆ. ಹೀಗಿದ್ದರೂ ಸಹ ಜನರು ಕೆಲವು ಕಾರಣಗಳನ್ನು ಒಡ್ಡುತ್ತಾ ಹೊರಗಡೆ ಓಡಾಡುತ್ತಿರುವ ಘಟನೆಗಳು ಕಿವಿಗೆ ಬೀಳುತ್ತಲೇ ಇದೆ. ಇಲ್ಲೋರ್ವ ವ್ಯಕ್ತಿ ಮನೆಯಿಂದ ಹೊರಬರಲು ಪೊಲೀಸರಿಗೆ ಹೇಳಿದ ಕಾರಣ ಕೇಳಿ ಪೊಲೀಸರು ಮುಸಿ-ಮುಸಿ ನಕ್ಕಿದ್ದಾರೆ. ಈತನು ಹೇಳಿದ ಕಾರಣ ಇದೀಗ ಸಾಮಾಜಿಕ ಜಾಲತಾಣದಲ್ಲಿ ಬಾರೀ ಸುದ್ದಿಯಲ್ಲಿದೆ.

ಲಾಕ್​ಡೌನ್​ ಸಮಯದಲ್ಲಿ ಮನೆಯಿಂದ ಹೊರಟಿದ್ದ ಗದಗ ಜಿಲ್ಲೆ ವ್ಯಕ್ತಿಯೊಬ್ಬರು, ನನ್ನ ಕೋಳಿಗೆ ಮಲಬದ್ಧತೆ ಸಮಸ್ಯೆ ಕಾಡುತ್ತಿದ್ದೆ. ಹಾಗಾಗಿ ಚಿಕಿತ್ಸೆ ಕೊಡಲು ಪಶುವೈದ್ಯರ ಬಳಿ ಹೋಗುತ್ತಿದ್ದೇನೆ ಎಂದು ಹೇಳಿದ್ದಾರೆ. ಹಾಗೆಯೇ ಬುಟ್ಟಿಯಲ್ಲಿದ್ದ ಕೋಳಿಯನ್ನು ಹೊರ ತೆಗೆದು ನೋಡಿ ಎಂದು ತೋರಿಸಿದ್ದಾರೆ. ಕಾರಣ ಕೇಳಿ ನಕ್ಕ ಪೊಲೀಸರು, ಆತನಿಗೆ ಬುದ್ಧಿವಾದ ಹೇಳಿ ಹಿಂತಿರುಗಿ ಮನೆಗೆ ಕಳುಹಿಸಿದ್ದಾರೆ.

30 ಸೆಕೆಂಡುಗಳ ವಿಡಿಯೋ ಕ್ಲಿಪ್​ಅನ್ನು ಮೇ 29ನೇ ತಾರೀಕಿನಂದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ. ವಿಡಿಯೋ ವೈರಲ್​ ಆಗುತ್ತಿದ್ದಂತೆಯೇ ಪರ ವಿರೋಧ ಚರ್ಚೆಗಳು ನಡೆಯುತ್ತಿದೆ. ಕೆಲವರು ವ್ಯಕ್ತಿಯ ಕಾರಣ ಕೇಳಿ ಮೆಚ್ಚುಗೆ ವ್ಯಕ್ತಿಪಡಿಸಿದ್ದಾರೆ, ಪ್ರಾಣಿ ಪ್ರಿಯರಾದ ಇನ್ನಿತರರು ನಿಜವಾಗಿಯೂ ಆತ ಸಾಕಿದ ಕೋಳಿಗೆ ಮಲಬದ್ಧತೆ ಸಮಸ್ಯೆ ಕಾಡಿರಬಹುದು ಎಂದು ವ್ಯಕ್ತಿಯ ಪರ ನಿಂತಿದ್ದಾರೆ. ಒಟ್ಟಿನಲ್ಲಿ ಲಾಕ್​ಡೌನ್​ ಸಮಯದಲ್ಲಿ ವಿಚಿತ್ರ ಕಾರಣಗಳನ್ನು ಕೊಟ್ಟು ಜನರು ಹೊರಬರುವ ಪ್ರಸಂಗಗಳು ಇತ್ತೀಚೆಗೆ ಬಾರೀ ಸದ್ದು ಮಾಡುತ್ತಿದೆ.

ಇದನ್ನೂ ಓದಿ: 

ಗದಗದ ಹೂವು ಬೆಳೆಗಾರರಲ್ಲಿ ಹೆಚ್ಚಿದ ಆತಂಕ; ವ್ಯಾಪಾರವಿಲ್ಲದೆ ಹುಬ್ಬಳ್ಳಿ ಮಾರುಕಟ್ಟೆಯ ಕಸದ ತೊಟ್ಟಿಗೆ ಸೇವಂತಿ ಎಸೆದ ರೈತರು

ವೃದ್ಧಾಪ್ಯ ವೇತನ ಪಡೆಯುವುದಕ್ಕೆ ಗದಗದಲ್ಲಿ ಅಜ್ಜಿ ಪರದಾಟ; ವಾಪಸ್ ಊರಿಗೆ ಕಳುಹಿಸಿದ ಪೊಲೀಸರು

ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ರಿಷಬ್ ಶೆಟ್ಟಿ ಭೇಟಿ ನೀಡಿದ ವಾರಾಹಿ ಪಂಜುರ್ಲಿ ಕ್ಷೇತ್ರ ಹೇಗಿದೆ ನೋಡಿ..
ರಿಷಬ್ ಶೆಟ್ಟಿ ಭೇಟಿ ನೀಡಿದ ವಾರಾಹಿ ಪಂಜುರ್ಲಿ ಕ್ಷೇತ್ರ ಹೇಗಿದೆ ನೋಡಿ..
ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ನಡುವೆ ಅಸಮಾಧಾನಗಳಿವೆಯಾ?
ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ನಡುವೆ ಅಸಮಾಧಾನಗಳಿವೆಯಾ?
ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಕೆಟ್ಟ ಐಸಿಯು ಎಸಿ: ರೋಗಿಗಳು ಬೇರೆಡೆ ಶಿಫ್ಟ್
ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಕೆಟ್ಟ ಐಸಿಯು ಎಸಿ: ರೋಗಿಗಳು ಬೇರೆಡೆ ಶಿಫ್ಟ್
ಬ್ಯಾಗ್ ಕದಿಯಲು ಬಂದವಗೆ ಒಳ್ಳೆ ರಿಪ್ಲೇ ಕೊಟ್ಟ ಯುವತಿ
ಬ್ಯಾಗ್ ಕದಿಯಲು ಬಂದವಗೆ ಒಳ್ಳೆ ರಿಪ್ಲೇ ಕೊಟ್ಟ ಯುವತಿ
ರಾಣಿ ಚೆನ್ನಮ್ಮ ಹೆಸರಲ್ಲೂ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಲಿ: ಸ್ವಾಮೀಜಿ
ರಾಣಿ ಚೆನ್ನಮ್ಮ ಹೆಸರಲ್ಲೂ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಲಿ: ಸ್ವಾಮೀಜಿ
ಚ್ಯಾನೆಲ್​ಗಳಲ್ಲಿ ವರದಿ ಬಿತ್ತರವಾದಾಗ ಮಾತ್ರ ಅಧಿಕಾರಿಗಳು ಬಂದು ಹೋಗುತ್ತಾರೆ
ಚ್ಯಾನೆಲ್​ಗಳಲ್ಲಿ ವರದಿ ಬಿತ್ತರವಾದಾಗ ಮಾತ್ರ ಅಧಿಕಾರಿಗಳು ಬಂದು ಹೋಗುತ್ತಾರೆ
ಬೋರ್​ ವೆಲ್ ಇದ್ದರೂ ದುಬಾರಿ ಟ್ಯಾಂಕರ್ ನೀರು ಬಳಸುವ ಅನಿವಾರ್ಯತೆ
ಬೋರ್​ ವೆಲ್ ಇದ್ದರೂ ದುಬಾರಿ ಟ್ಯಾಂಕರ್ ನೀರು ಬಳಸುವ ಅನಿವಾರ್ಯತೆ
ಮುಂದಿನ ಸಿಎಂ ಬಗ್ಗೆ ಕೋಡಿಮಠ ಶ್ರೀ ಮಹತ್ವದ ಮಾತು
ಮುಂದಿನ ಸಿಎಂ ಬಗ್ಗೆ ಕೋಡಿಮಠ ಶ್ರೀ ಮಹತ್ವದ ಮಾತು
ನಿನ್ನ ಕೆಲಸ ಹಾಳು ಮಾಡಲು ಸಂಚು ನಡೆದಿದೆ; ರಿಷಬ್ ಶೆಟ್ಟಿ​ಗೆ ದೈವದ ಎಚ್ಚರಿಕೆ
ನಿನ್ನ ಕೆಲಸ ಹಾಳು ಮಾಡಲು ಸಂಚು ನಡೆದಿದೆ; ರಿಷಬ್ ಶೆಟ್ಟಿ​ಗೆ ದೈವದ ಎಚ್ಚರಿಕೆ