Sign In

By signing in or creating an account, you agree with Associated Broadcasting Company's Terms & Conditions and Privacy Policy.

Shakti Yojana: ಮೊದಲ ದಿನ ಬಸ್​ನಲ್ಲಿ ಉಚಿತವಾಗಿ ಪ್ರಯಾಣಿಸಿದ ಮಹಿಳೆಯರ ಸಂಖ್ಯೆ ಎಷ್ಟು? ಇಲ್ಲಿದೆ ವಿವರ

ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜಾರಿಗೆ ತಂದಿರುವ ಶಕ್ತಿ ಯೊಜನೆ ಅಡಿಯಲ್ಲಿ ಮೊದಲ ದಿನ ಎಷ್ಟು ಮಹಿಳೆಯರು ಬಸ್​ನಲ್ಲಿ ಪ್ರಯಾಣಿಸಿದ್ದಾರೆ? ಅದರ ಮೌಲ್ಯ ಎಷ್ಟು? ಎನ್ನುವ ಸಂಪೂರಣ ವಿವರ ಇಲ್ಲಿದೆ ನೋಡಿ.

Shakti Yojana: ಮೊದಲ ದಿನ ಬಸ್​ನಲ್ಲಿ ಉಚಿತವಾಗಿ ಪ್ರಯಾಣಿಸಿದ ಮಹಿಳೆಯರ ಸಂಖ್ಯೆ ಎಷ್ಟು? ಇಲ್ಲಿದೆ ವಿವರ
Follow us
ರಮೇಶ್ ಬಿ. ಜವಳಗೇರಾ
|

Updated on:Jun 12, 2023 | 5:44 PM

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳ ಪೈಕಿ ಮಹಿಳೆಯರಿಗೆ ಸರ್ಕಾರಿ ಬಸ್​ನಲ್ಲಿ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆ(Shakti Yojana) ಜಾರಿಯಾಗಿದೆ. ನಿನ್ನೆ (ಜೂನ್ 11) ಅಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಶಕ್ತಿಯೋಜನೆ ಅಧಿಕೃತವಾಗಿ ಚಾಲನೆ ನೀಡಿದ್ದು, ಮಹಿಳೆಯರು ಫುಲ್ ಖುಷ್ ಆಗಿದ್ದಾರೆ. ನಿನ್ನೆ(ಭಾನುವಾರ) ಮಧ್ಯಾಹ್ನ 1 ಗಂಟೆಯಿಂದ ರಾತ್ರಿ 12 ವರೆಗೆ ರಾಜ್ಯಾದ್ಯಂತ ಬರೋಬ್ಬರಿ 5.71 ಲಕ್ಷ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಿದ್ದಾರೆ. ಹಾಗಾದ್ರೆ, ಬಿಎಂಟಿಸಿ, ವಾಯುವ್ಯ ಸಾರಿಗೆ, ಕಲ್ಯಾಣ ಕರ್ನಾಟಕ ಸಾರಿಗೆ ಬಸ್​ಗಳಲ್ಲಿ ಎಷ್ಟು ಮಹಿಳೆಯರು ಪ್ರಯಾಣಿಸಿದ್ದಾರೆ? ಅದರ ಮೌಲ್ಯ ಎಷ್ಟು? ಎನ್ನುವ ವಿವರ ಈ ಕೆಳಗಿನಂತಿದೆ.

ಇದನ್ನೂ ಓದಿ: Free bus travel: ಉಚಿತ ಬಸ್ ಪ್ರಯಾಣ ಯೋಜನೆ ಜಾರಿ, ಎಲ್ಲ ಬಸ್ ನಿಲ್ದಾಣಗಳಲ್ಲಿ ಮಹಿಳೆಯರ ಸಂಖ್ಯೆಯೇ ದೊಡ್ಡದು!

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನಿಗಮದ ಬಸ್ ಗಳಲ್ಲಿ 1,93,831 ಮಹಿಳಾ ಪ್ರಯಾಣಿಕರು ಸಂಚಾರ ನಡೆಸಿದ್ದು ಇವರ ಪ್ರಯಾಣದ ಮೌಲ್ಯ 58,16,178 ರೂಪಾಯಿ.  ಬಿಎಂಟಿಸಿ ಬಸ್​ನಲ್ಲಿ ಒಟ್ಟು 2,01,215 ಮಹಿಳೆಯರು ಪ್ರಯಾಣ ಮಾಡಿದ್ದರೆ(ಪ್ರಯಾಣಿಕರ ಮೌಲ್ಯ 26,19604.00), ವಾಯವ್ಯ ಸಾರಿಗೆ ಬಸ್​ನಲ್ಲಿ 1,22,354 ಮಹಿಳೆಯರು ಓಡಾಡಿದ್ದಾರೆ(ಪ್ರಯಾಣದ ಮೌಲ್ಯ ( 36,17,096.00). ಕಲ್ಯಾಣ ಕರ್ನಾಟಕ ಸಾರಿಗೆಯಲ್ಲಿ 53,623 ಮಹಿಳೆಯರು ಪ್ರಯಾಣ ಮಾಡಿದ್ದಾರೆ(ಪ್ರಯಾಣದ ಮೌಲ್ಯ-19.70.0000.00). ಹೀಗೆ ನಿನ್ನೆ ಸಾರಿಗೆ ಬಸ್​ಗಳಲ್ಲಿ ಒಟ್ಟು 5,71,023 ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ಇವರ ಟಿಕೆಟ್​​ ವೆಚ್ಚ 1,40,22,878 ರೂ. ಆಗಿದ್ದು, ಈ ಹಣವನ್ನು ಸರ್ಕಾರವೇ ಸಾರಿಗೆ ಸಂಸ್ಥೆಗಳಿಗೆ ನೀಡಲಿದೆ.

ಇದು 11 ಗಂಟೆಗಳ ಅಂಕಿ ಅಂಶಗಳು ಮಾತ್ರ. ಇನ್ನು ನಿನ್ನೆ ಭಾನುವಾರವಾಗಿದ್ದರಿಂದ ಶಾಲಾ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿನಿಯರು, ಖಾಸಗಿ ಸರಕಾರಿ ಕಚೇರಿಗಳಿಗೆ ತೆರಳುವ ನೌಕರರು ಪ್ರಯಾಣ ಮಾಡಿಲ್ಲ. ಆದ್ದರಿಂದ ಇಂದು ಪ್ರಯಾಣಿಕರ ಸಂಖ್ಯೆ ದುಪ್ಪಟ್ಟಾಗಬಹುದು.

ರಾಜ್ಯದಲ್ಲಿ ಎಲ್ಲ ಮಹಿಳೆಯರು ಎಲ್ಲ ವೇಗದೂತ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದು. ಮೂರು ತಿಂಗಳಲ್ಲಿ ಎಲ್ಲ ಅರ್ಹ ಫಲಾನುಭವಿ ಮಹಿಳೆಯರು ಮುಂದಿನ ಮೂರು ತಿಂಗಳಲ್ಲಿ ಸ್ಮಾರ್ಟ್‌ ಕಾರ್ಡ್‌ ಪಡೆದುಕೊಳ್ಳಬೇಕು. ಅಲ್ಲಿಯವರೆಗೂ ಆಧಾರ್ ಕಾರ್ಡ್ ಅಥವಾ ವೋಟರ್ ಐಡಿ ಕಾರ್ಡ್ ತೋರಿಸಿ ಉಚಿತ ಟಿಕೆಟ್ ಪಡೆದುಕೊಂಡು ಪ್ರಯಾಣಿಸಬಹುದು.

Published On - 4:45 pm, Mon, 12 June 23