‘ಅಂಬಲಿ ಹಳಸಿತು ಕಂಬಳಿ ಬೀಸಿತಲೇ ಪರಾಕ್’; ಗೊರವಯ್ಯ ನುಡಿದ ಮೈಲಾರಲಿಂಗೇಶ್ವರನ ಕಾರ್ಣಿಕ ವಾಣಿ ಅರ್ಥವೇನು? ಇಲ್ಲಿದೆ ವಿಶ್ಲೇಷಣೆ

ಮೈಲಾರಲಿಂಗೇಶ್ವರನ ಕಾರ್ಣಿಕೋತ್ಸವದಲ್ಲಿ ‘ಅಂಬಲಿ ಹಳಸಿತು ಕಂಬಳಿ ಬಿಸಿತಲೆ ಪರಾಕ್’ಎಂದು ಗೊರವಯ್ಯ ಭವಿಷ್ಯ ನುಡಿದಿದ್ದು, ಇದು ರಾಜಕೀಯ ಪಕ್ಷಗಳಲ್ಲಿ ತೀವ್ರ ಕುತೂಹಲ ಹಾಗೂ ಚರ್ಚೆ ಹುಟ್ಟು ಹಾಕಿದೆ.

'ಅಂಬಲಿ ಹಳಸಿತು ಕಂಬಳಿ ಬೀಸಿತಲೇ ಪರಾಕ್'; ಗೊರವಯ್ಯ ನುಡಿದ ಮೈಲಾರಲಿಂಗೇಶ್ವರನ ಕಾರ್ಣಿಕ ವಾಣಿ ಅರ್ಥವೇನು? ಇಲ್ಲಿದೆ ವಿಶ್ಲೇಷಣೆ
ಮೈಲಾರಲಿಂಗೇಶ್ವರನ ಕಾರ್ಣಿಕೋತ್ಸವ
Follow us
ರಮೇಶ್ ಬಿ. ಜವಳಗೇರಾ
|

Updated on:Feb 07, 2023 | 8:04 PM

ವಿಜಯನಗರ: ‘ಭಾಗ್ಯದ ನಿಧಿ ತುಂಬಿ ತುಳಿಕತಲೇ ಪರಾಕ್​​​​​​’ ಎಂದು ವಿಜಯನಗರ ಜಿಲ್ಲೆಯ ಹರಪನಹಳ್ಳಿ ಪಟ್ಟಣದ ಹೊರವಲಯದಲ್ಲಿ ಇರುವ ಐತಿಹಾಸಿಕ ದೊಡ್ಡ ಮೈಲಾರಲಿಂಗೇಶ್ವರ ಕಾರ್ಣಿಕೋತ್ಸವದಲ್ಲಿ ಗೊರವಯ್ಯ ಕೋಟೆಪ್ಪ ದೈವವಾಣಿ ನುಡಿದಿದ್ದರು. ಇದೀಗ ಹೂವಿನಹಡಗಲಿ ತಾಲೂಕಿನ ಮೈಲಾರದ ಡಂಕನಮರಡಿ ಕಾರ್ಣಿಕೋತ್ಸವದಲ್ಲಿ (Mylara lingeshwara karnika 2023) ‘ಅಂಬಲಿ ಹಳಸಿತು ಕಂಬಳಿ ಬಿಸಿತಲೆ ಪರಾಕ್’ಎಂದು ಗೊರವಯ್ಯ ಭವಿಷ್ಯ ನುಡಿದಿದ್ದಾರೆ. ಇಂದು (ಫೆಬ್ರವರಿ 07) ಮೈಲಾರ ಗ್ರಾಮದಲ್ಲಿ ಲಕ್ಷಾಂತರ ಭಕ್ತಾದಿಗಳ ಸಮ್ಮುಖದಲ್ಲಿ ನಡೆದ ಕಾರ್ಣಿಕೋತ್ಸವದಲ್ಲಿ ಗೊರವಯ್ಯ ರಾಮಪ್ಪನವರು 14 ಅಡಿ ಎತ್ತರದ ಬಿಲ್ಲನ್ನೇರಿ ವರ್ಷದ ಕಾರ್ಣಿಕವನ್ನು ನುಡಿದರು. ಇನ್ನು ಈ ಕಾರ್ಣಿಕ ಭವಿಷ್ಯ ನುಡಿಯ ಅರ್ಥವನ್ನು ದೇಗುಲದ ಧರ್ಮದರ್ಶಿ ವೆಂಕಪ್ಪಯ್ಯ ಒಡೆಯರ್​ ವಿಶ್ಲೇಷಣೆ ಮಾಡಿದ್ದು, ಅದು ಈ ಕೆಳಗಿನಂತಿದೆ.

ಇದನ್ನೂ ಓದಿ: ದಾವಣಗೆರೆ: ‘ಭಾಗ್ಯದ ನಿಧಿ ತುಂಬಿ ತುಳಿಕತಲೇ ಪರಾಕ್​​​​​​’ ಪ್ರಸಕ್ತ ವರ್ಷ ಶುಭ ಸಂದೇಶ ನೀಡಿದ ಮೈಲಾರ ಲಿಂಗೇಶ್ವರ ಕಾರ್ಣಿಕ

ಈ ವರ್ಷದ ಗೊರವಯ್ಯ ನುಡಿದ ಭವಿಷ್ಯ ವಾಣಿಯನ್ನು ಜನರು ಶುಭದ ನುಡಿ ಎಂದು ಸಂತೋಷ ವ್ಯಕ್ತಪಡಿಸಿದ್ದು, ನಾನಾ ರೀತಿಯಲ್ಲಿ ಅರ್ಥೈಸಿಕೊಂಡಿದ್ದಾರೆ. ಕೆಲವರು ಮಳೆ, ಬೆಳೆ ಬಗ್ಗೆ ವಿಶ್ಲೇಷಣೆ ಮಾಡಿಕೊಂದಿದ್ದರೆ, ಇನ್ನೂ ಕೆಲವರು ರಾಜಕೀಯವಾಗಿ ತಮ್ಮದೇ ರೀತಿಯಲ್ಲಿ ವಿಶ್ಲೇಷಣೆ ಮಾಡುತ್ತಿದ್ದಾರೆ.

ಇನ್ನು ದೇಗುಲದ ಧರ್ಮದರ್ಶಿ ವೆಂಕಪ್ಪಯ್ಯ ಒಡೆಯರ್​ ಅವರು ಕಾರ್ಣಿಕ ವಿಶ್ಲೇಷಣೆ ಮಾಡಿ ಹೇಳಿದ್ದು,  ಪ್ರಾಮಾಣಿಕ, ನಿಷ್ಠೆಯಿಂದ ಇರುವ ವ್ಯಕ್ತಿ ರಾಜ್ಯ, ರಾಷ್ಟ್ರವನ್ನು ಆಳುತ್ತಾನೆ. ಮಳೆ, ಬೆಳೆ ಹೆಚ್ಚಾಗಿ ಸಮೃದ್ಧಿಯಾಗಲಿದೆ, ರೈತರಿಗೆ ಒಳ್ಳೆಯದಾಗುತ್ತದೆ. ಇದರ ಜೊತೆಗೆ ಮಳೆಯೂ ಜಾಸ್ತಿಯಾಗಿ ಬೆಳೆ ಹಾನಿಯಾಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ರಾಜಕೀಯವಾಗಿ ವಿಶ್ಲೇಷಣೆ

ಪ್ರಾಮಾಣಿಕವಾಗಿ,ನಿಷ್ಠಯಿಂದ ಇರುವ ವ್ಯಕ್ತಿಯು ರಾಜ್ಯ ಹಾಗೂ ರಾಷ್ಟ್ರವನ್ನಾಳುತ್ತಾನೆ ಎಂದು ವಿಶ್ಲೇಷಣೆ ಮಾಡಲಾಗಿದ್ದು, ಇದನ್ನು ನೋಡಿದರೆ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷದಲ್ಲಿ ನಿಷ್ಠೆಯಿಂದಿರುವ ನಾಯಕರಿಗೆ ರಾಜ್ಯದ ಸಿಎಂ ಪಟ್ಟ ಒಲಿಯಲಿದೆ ಎನ್ನಬಹುದು. ಹಾಗಾದ್ರೆ, ಈ ಮೂರು ಪಕ್ಷದಲ್ಲಿ ಪ್ರಾಮಾಣಿಕವಾಗಿ, ನಿಷ್ಠಯಿಂದ ಇರುವ ವ್ಯಕ್ತಿ ಯಾರು? ಎನ್ನುವುದೇ ಕುತೂಹಲ ಮೂಡಿಸಿದೆ. ಹೀಗೆ ರಾಜಕೀಯ ಪಕ್ಷಗಳಲ್ಲಿ ಮೈಲಾರಲಿಂಗನ ಕಾರ್ಣಿಕ ನುಡಿ ತೀವ್ರ ಕುತೂಹಲ ಹಾಗೂ ಚರ್ಚೆ ಹುಟ್ಟು ಹಾಕಿದೆ.

ರೈತಾಪಿ ವರ್ಗದ ಮೇಲೆ ವಿಶ್ಲೇಷಣೆ

ಮಳೆ ಬೆಳೆ ಜಾಸ್ತಿ ಆಗಲಿದ್ದು,ಸಮೃದ್ದಿಯಾಗಲಿದೆ. ರೈತರಿಗೆ ಒಳ್ಳೆಯದಾಗುತ್ತದೆ. ಇದರ ಜೊತೆಗೆ ಮಳೆ ಜಾಸ್ತಿಯಾಗಿ ಬೆಳೆ ಹಾನಿಯಾಗಲಿದೆ. ರೈತರಿಗೆ ಬೆಳೆದ ಬೆಳೆ ಸಿಗುತ್ತದೆ ಎಂದು ಗೊರವಯ್ಯ ರಾಮಪ್ಪ ನುಡಿದ ದೈವವಾಣಿಯಲ್ಲಿ ಸೂಚನೆ ಸಿಕ್ಕಿದೆ ಎಂದು ವಿಶ್ಲೇಷಣೆ ಮಾಡಲಾಗಿದೆ.

ಈ ಕಾರ್ಣಿಕಕ್ಕಾಗಿ ಜನರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ಹಾಗೆಯೇ ಜನರು ಮೈಲಾರಲಿಂಗೇಶ್ವರ ಕಾರ್ಣಿಕವನ್ನು ಹೆಚ್ಚಾಗಿ ನಂಬುತ್ತಾರೆ. ಅಲ್ಲದೇ ಅದು ಇಡೀ ವರ್ಷದ ಭವಿಷ್ಯವೆಂದು ಹೇಳಲಾಗುತ್ತದೆ. ಈ ಕಾರ್ಣಿಕದಲ್ಲಿ ಮಳೆ, ಬೆಳೆ ಹಾಗೂ ಮುಂದಿನ ದಿನಗಳಲ್ಲಿ ರಾಜಕೀಯ ಸ್ಥಿತಿ ಗತಿ ಏನಾಗಲಿದೆ ಎಂದು ಜನರು ಕಾರ್ಣಿಕ ಕೇಳಲು ಕಾತರದಿಂದ ಕಾಯುತ್ತಿರುತ್ತಾರೆ. ಇನ್ನು ಇದೀಗ ಗೊರವಯ್ಯ ರಾಮಪ್ಪ ನುಡಿದ ದೈವವಾಣಿಯಂತೆ ಮುಂದಿನ ದಿನಗಳಲ್ಲಿ ಸತ್ಯವಾಗಲಿದ್ಯಾ ಎನ್ನುವುದನ್ನ ಕಾದುನೋಡಬೇಕಿದೆ.

Published On - 7:42 pm, Tue, 7 February 23

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?