Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧದ ಪ್ರಕರಣ ರದ್ದುಗೊಳಿಸಿದ್ಯಾಕೆ? ಹೈಕೋರ್ಟ್ ತೀರ್ಪಿನಲ್ಲೇನಿದೆ?

ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್ ಡಿಎಲ್) ಟೆಂಡರ್​ಗಾಗಿ ಲಂಚ ಪಡೆದ ಆರೋಪ ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ(madal virupakshappa) ವಿರುದ್ಧದ ಪ್ರಕರಣ ರದ್ದುಗೊಳಿಸಿ ಹೈಕೋರ್ಟ್(Karnataka high court) ಆದೇಶ ಹೊರಡಿಸಿದೆ. ಇನ್ನು ಮಾಡಾಳ್ ಗೆ ರಿಲೀಫ್ ನೀಡಿದ ಹೈಕೋರ್ಟ್ ತೀರ್ಪಿನಲ್ಲೇನಿದೆ? ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ಕೊಟ್ಟ ಕಾರಣಗಳೇನು? ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧದ ಪ್ರಕರಣ ರದ್ದುಗೊಳಿಸಿದ್ಯಾಕೆ? ಹೈಕೋರ್ಟ್ ತೀರ್ಪಿನಲ್ಲೇನಿದೆ?
ಮಾಡಾಳ್​ ವಿರೂಪಾಕ್ಷಪ್ಪ
Follow us
Ramesha M
| Updated By: ರಮೇಶ್ ಬಿ. ಜವಳಗೇರಾ

Updated on:Dec 20, 2023 | 9:10 PM

ಬೆಂಗಳೂರು, (ಡಿಸೆಂಬರ್ 20): ರಾಜ್ಯದಲ್ಲಿ ಭಾರಿ ಸದ್ದು ಮಾಡಿದ್ದ ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ (madal virupakshappa) ವಿರುದ್ಧದ ಭ್ರಷ್ಟಾಚಾರದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್(Karnataka High Court) ಬುಧವಾರ ರದ್ದುಗೊಳಿಸಿದೆ. ಪ್ರಕರಣದ ರದ್ದು ಕೋರಿ ಮಾಡಾಳ್ ವಿರೂಪಾಕ್ಷಪ್ಪ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಅವರ ಏಕ ಸದಸ್ಯ ಪೀಠ, ಸ್ಪೀಕರ್ ಅವರ ಅನುಮತಿ ಪಡೆಯದೆ ಲೋಕಾಯುಕ್ತ ಪೊಲೀಸರಿಂದ ತನಿಖೆ ನಡೆಸಲಾಗಿದೆ ಎಂಬ ತಾಂತ್ರಿಕ ಕಾರಣದಿಂದ ಪ್ರಕರಣ ರದ್ದುಗೊಳಿಸಿ ಆದೇಶ ಹೊರಡಿಸಿದೆ. ಇನ್ನು ಮಾಡಾಳ್ ಗೆ ರಿಲೀಫ್ ನೀಡಿದ ಹೈಕೋರ್ಟ್ ತೀರ್ಪಿನ ಪ್ರತಿ ಟಿವಿ9ಗೆ ಲಭ್ಯವಾಗಿದ್ದು, ಅದು ಈ ಕೆಳಗಿನಂತಿದೆ.

ಇದನ್ನೂ ಓದಿ: ಲಂಚ ಕೇಸ್: ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧದ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

ಹೈಕೋರ್ಟ್ ತೀರ್ಪಿನಲ್ಲೇನಿದೆ?

ಮಗನನ್ನು ಹೋಗಿ ಭೇಟಿಯಾಗುವಂತೆ ಸೂಚಿಸಿದ್ದು ಬಿಟ್ಟರೆ ದೂರಿನಲ್ಲಿ ಆರೋಪವಿಲ್ಲ. ಮಾಡಾಳ್ ವಿರೂಪಾಕ್ಷಪ್ಪ ಲಂಚಕ್ಕೆ ಬೇಡಿಕೆ ಇಟ್ಟಿರುವ ಆರೋಪವಿಲ್ಲ. ಹಾಗೇ ಮಾಡಾಳ್ ವಿರೂಪಾಕ್ಷಪ್ಪ ಲಂಚ ಸ್ವೀಕರಿಸಿದ ಬಗ್ಗೆಯಾಗಲಿ ಉಲ್ಲೇಖವಿಲ್ಲ. ದೂರಿನಲ್ಲಿ 2ನೇ ಆರೋಪಿ ಮಾಡಾಳ್ ಪ್ರಶಾಂತ್ ವಿರುದ್ಧ ಲಂಚದ ಆರೋಪವಿದೆ. ಮಾಡಾಳ್ ಪ್ರಶಾಂತ್ ಮನೆಯಲ್ಲಿ 6.10 ಕೋಟಿ ರೂಪಾಯಿ ಹಣ ಪತ್ತೆಯಾಗಿದೆ. ಆದರೆ ಈ ಹಣಕ್ಕೂ ವಿರೂಪಾಕ್ಷಪ್ಪರಿಗೂ ಸಂಬಂಧ ಕಲ್ಪಿಸುವ ದಾಖಲೆ ಸಿಕ್ಕಿಲ್ಲ. ಹೀಗಾಗಿ ಮಗನ ಬಳಿ ಸಿಕ್ಕ ಹಣಕ್ಕೆ ಅಪ್ಪನನ್ನು ವಿಚಾರಣೆಗೆ ಒಳಪಡಿಸುವುದು ಸರಿಯಲ್ಲ. ಕ್ರಿಮಿನಲ್ ಪ್ರಕರಣವನ್ನು ಮುಂದುವರಿಸಲು ಸಾಕ್ಷ್ಯಾಧಾರ ಬೇಕು. ಕನಿಷ್ಠ ಪಕ್ಷ ಮೇಲ್ನೋಟದ ಸಾಕ್ಷ್ಯಾಧಾರಗಳ ಅವಶ್ಯಕತೆ ಇದೆ. ಆದರೆ ದೂರಿನಲ್ಲಿ ಗೊಂದಲಕಾರಿ ಹೇಳಿಕೆಗಳಿವೆಯೇ ಹೊರತು ನಿಖರ ಆರೋಪವಿಲ್ಲ.

KSDL ಟೆಂಡರ್ ಪ್ರಕ್ರಿಯೆಯಲ್ಲಿ ಮಾಡಾಳ್ ವಿರೂಪಾಕ್ಷಪ್ಪ ಭಾಗಿಯಾಗಿಲ್ಲ. KSDL ಎಂಡಿ, ಸಿಬ್ಬಂದಿ ಮಾತ್ರ ಟೆಂಡರ್ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದಾರೆ. ಹೀಗಾಗಿ ಪ್ರಕರಣ ಮುಂದುವರಿಸುವುದು ಕಾನೂನಿನ ದುರ್ಬಳಕೆಯಾಗಲಿದೆ ಎಂದು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಹೊರಡಿಸಿದ ಆದೇಶದಲ್ಲಿದೆ.

ಪ್ರಕರಣ ಹಿನ್ನೆಲೆ

ಮಾರ್ಚ್ 2ರಂದು ಶಾಸಕ ಮಾಡಾಳ್‌ ವಿರುಪಾಕ್ಷಪ್ಪ ಅವರ ಪುತ್ರ ಬೆಂಗಳೂರು ಜಲಮಂಡಳಿಯ ಚೀಫ್‌ ಅಕೌಂಟಿಂಗ್‌ ಆಫೀಸರ್‌ ಮಾಡಾಳ್‌ ಪ್ರಶಾಂತ್‌ ಅವರು 40 ಲಕ್ಷ ರೂ. ಹಣವನ್ನು ಪಡೆಯುವಾಗ ಲೋಕಾಯುಕ್ತರ ಬಲೆಗೆ ಬಿದ್ದಿದ್ದರು. ಈ ವೇಳೆ ಪ್ರಶಾಂತ್‌ ಅವರಿಗೆ ಹಣ ಕೊಡಲು ಬಂದ ವ್ಯಕ್ತಿಗಳು ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (ಕೆಎಸ್‌ಡಿಎಲ್‌) ಅಧ್ಯಕ್ಷರಾಗಿದ್ದ ಮಾಡಾಳ್‌ ವಿರುಪಾಕ್ಷಪ್ಪ ಅವರಿಗೆ ಸಂಬಂಧಪಟ್ಟ ಹಣವಾಗಿದೆ ಎಂದು ಹೇಳಿದ್ದರು. ಬಳಿಕ ಲೋಕಾಯುಕ್ತ ಅಧಿಕಾರಿಗಳು ವಿರುಪಾಕ್ಷಪ್ಪ ಹಾಗೂ ಅವರ ಪುತ್ರ ಪ್ರಶಾಂತ್​ ನಿವಾಸದ ಮೇಲೆ ದಾಳಿ ಮಾಡಿತ್ತು. ಬೆಂಗಳೂರಿನ ಮನೆ, ಕಚೇರಿ, ಚನ್ನೇಶಪುರ ಗ್ರಾಮದ ಮನೆಯಲ್ಲಿ ಕಾರ್ಯಚರಣೆ ನಡೆಸಿತ್ತು, ಈ ವೇಳೆ ಕೋಟಿ ಕೋಟಿ ಹಣ, ಚಿನ್ನ, ಅಪಾರ ಪ್ರಮಾಣದ ಆಸ್ತಿ ಪತ್ರಗಳು ಪತ್ತೆಯಾಗಿದ್ದವು.

ಈ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರಿಗೆ 6 ದಿನಗಳ ಕಾಲ ಸಿಗದೇ ಕಣ್ಮರೆಸಿಕೊಮಡಿದ್ದ ಮಾಡಾಳ್‌ ವಿರುಪಾಕ್ಷಪ್ಪ ಹೈಕೋರ್ಟ್‌ನಿಂದ ಮಧ್ಯಂತರ ನಿರೀಕ್ಷಣಾ ಜಾಮೀನು ಪಡೆದು ಲೋಕಾಯುಕ್ತ ಪೊಲೀಸರ ಮುಂದೆ ಹಾಜರಾಗಿದ್ದರು. ಆದರೆ ಲೋಯುಕ್ತರ ಪ್ರಶ್ನೆಗಳಿಗೆ ಸರಿಯಾದ ಉತ್ತರಗಳನ್ನು ನೀಡಿಲ್ಲ ಎಂದು ತಿಳಿದುಬಂದಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:09 pm, Wed, 20 December 23

IPL 2025: ಕನ್ನಡಿಗನ ಕರಾರುವಾಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್
IPL 2025: ಕನ್ನಡಿಗನ ಕರಾರುವಾಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್
Daily Devotional: ಯುಗಾದಿ ಆಚರಣೆ ಹಾಗೂ ಅದರ ಮಹತ್ವ ತಿಳಿಯಿರಿ
Daily Devotional: ಯುಗಾದಿ ಆಚರಣೆ ಹಾಗೂ ಅದರ ಮಹತ್ವ ತಿಳಿಯಿರಿ
Daily Horoscope: ಯುಗಾದಿಯಂದು ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
Daily Horoscope: ಯುಗಾದಿಯಂದು ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?