AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಂದು ಹೊಸದಾಗಿ ಹುಟ್ಟಿಕೊಂಡ ಕೋವಿಡ್ ರೂಪಾಂತರಿ: ಕರ್ನಾಟಕದಲ್ಲಿ ಅಲರ್ಟ್, ನಿರ್ಲಕ್ಷ್ಯ ಬೇಡ ಎಂದ ಡಾಕ್ಟರ್ಸ್

ಸಾಂಕ್ರಾಮಿಕದಿಂದ ಇಡೀ ಜಗತ್ತು ಸಂಪೂರ್ಣ ಚೇತರಿಸಿಕೊಂಡಿದೆ ಎನ್ನುವಷ್ಟರಲ್ಲೇ ಹೊಸ ಕೋವಿಡ್ ರೂಪಾಂತರಿ ತಳಿಗಳು ಹುಟ್ಟಿಕೊಳ್ಳುತ್ತಿವೆ. ಜಗತ್ತನ್ನೇ ತಲ್ಲಣಗೊಳಿಸಿದ್ದ ಕೊರೊನಾ ಸಾಂಕ್ರಾಮಿಕ ಹೆಮ್ಮಾರಿ ಮತ್ತೆ ಹೆಮ್ಮಾರಿಯಾಗಿ ಒಕ್ಕರಿಸಲು ರೆಡಿಯಾಗಿದೆ. ಕಳೆದ ಒಂದು ವರ್ಷದಿಂದ ಕೋಟ್ಯಾಂತರ ಮಂದಿಯನ್ನು ಬಲಿ ಪಡೆದುಕೊಂಡು ಸೈಲೆಂಟ್ ಆಗಿದ್ದ ಹೆಮ್ಮಾರಿ ಈಗ ಮತ್ತೆ ಹೊಸ ರೂಪದಲ್ಲಿ ಒಕ್ಕರಿಸಲು ಶುರುವಾಗಿದೆ.

ಮತ್ತೊಂದು ಹೊಸದಾಗಿ ಹುಟ್ಟಿಕೊಂಡ ಕೋವಿಡ್ ರೂಪಾಂತರಿ: ಕರ್ನಾಟಕದಲ್ಲಿ ಅಲರ್ಟ್, ನಿರ್ಲಕ್ಷ್ಯ ಬೇಡ ಎಂದ ಡಾಕ್ಟರ್ಸ್
ಕೊರೊನಾ
ವಿನಯ್​ ಕಾಶಪ್ಪನವರ್​
| Edited By: |

Updated on:Aug 21, 2023 | 8:34 AM

Share

ಬೆಂಗಳೂರು, (ಆಗಸ್ಟ್​ 21): ಹೋದೆಯಾ ಪಿಶಾಚಿ ಎಂದರೆ ಬಂದೆ ಗವಾಕ್ಷಿ ಎನ್ನುವಂತೆ ಕೊರೋನಾ ವೈರಸ್ (Coronavirus Virus)​ ಮತ್ತೆ ಒಕ್ಕರಿಸಲ ಕಾದು ಕುಳತಿದೆ. ಹೌದು…ಕೊರೊನಾ ರೂಪಾಂತರಿ EG.5 ವೈರಸ್ (COVID variant EG.5 )​ ವಿದೇಶಗಳಲ್ಲಿ ಆತಂಕ ಸೃಷ್ಟಿಸಿದ್ದು, ಓಮಿಕ್ರಾನ್ ತಳಿಯ ಉಪ ತಳಿ ಎರಿಸ್ EG.5 ಹೊಸ ಅಲೆಗೆ ಕಾರಣವಾಗುವ ಆತಂಕ ಸೃಷ್ಟಿಮಾಡಿದೆ. ಸದ್ಯ ಎರಿಸ್ EG.5 ಅತಿವೇಗವಾಗಿ ಹರಡುವ ರೂಪಾಂತರವಾಗುವ ಆತಂಕ ಮನೆ ಮಾಡಿದ್ದು, ಅಮೇರಿಕಾ, ಜಪಾನ್ ಹಾಗೂ ಬ್ರಿಟನ್‌ನಲ್ಲಿ ಹೊಸ ಅಲೆ ಸೃಷ್ಟಿಸುವ ಭೀತಿ ಶುರುವಾಗಿದೆ. ಹೀಗಾಗಿ ಇತ್ತ ಕರ್ನಾಟಕದಲ್ಲೂ ಕೋವಿಡ್ ಮತ್ತೆ ಏರಿಕೆಯ ಆತಂಕ ಶುರುವಾಗಿದೆ.

ಜೂನ್ ನಲ್ಲಿ ಪತ್ತೆಯಾಗಿದ್ದ ಓಮಿಕ್ರಾನ್ ತಳಿಯ ಉಪ ತಳಿ ಎರಿಸ್ EG.5 ಈಗ ವಿದೇಶಗಳಲ್ಲಿ ಅರ್ಭಟಿಸಲು ಮುಂದಾಗಿದೆ. ಹೀಗಾಗಿ ರಾಜ್ಯದಲ್ಲಿಯೂ ಸಹ ಕೋವಿಡ್ ಮತ್ತೆ ಭಯ ಶುರುವಾಗಿದೆ. ಹೀಗಾಗಿ ಜ್ವರ, ಕೆಮ್ಮು, ಶೀತ, ಉಸಿರಾಟದ ತೊಂದರೆ, ಆಯಾಸ, ಸ್ನಾಯಿ ಸೆಳೆತ, ತಲೆನೋವು , ಗಂಟಲು ನೋವು, ಮೂಗಿನಲ್ಲಿ ಸೊರುವಿಕೆ, ವಾಕರಿಕೆ, ವಾಂತಿ ಕಂಡು ಬಂದರೆ ನಿರ್ಲಕ್ಷ್ಯ ಮಾಡಬೇಡಿ ಎಂದಿದ್ದಾರೆ.

ಇದನ್ನೂ ಓದಿ: ತುಳಸಿ ನೀರು ಕುಡಿಯುವುದರಿಂದ ಆರೋಗ್ಯಕ್ಕೆ ಏನೆಲ್ಲಾ ಪ್ರಯೋಜನಗಳಿವೆ ತಿಳಿಯಿರಿ

ಸದ್ಯ ಎರಿಸ್ EG.5 ಅಮೆರಿಕಾ, ಜಾಪಾನ್ ಹಾಗೂ ಬ್ರಿಟನ್ ನಲ್ಲಿ ಹೊಸ ತಳಿ ಪತ್ತೆಯಾಗಿದ್ದು, ಅಲ್ಲಿ ಈ ರೂಪಾಂತರಿ ವೇಗವಾಗಿ ಹರಡುತ್ತಿದೆ. ಹೊಸ ವೇರಿಯೆಂಟ್‌ನ ರೋಗಲಕ್ಷಣಗಳಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಹೀಗಾಗಿ, ಆರೋಗ್ಯ ತಜ್ಞರು ಎಚ್ಚರಿಕೆಯಿಂದ ಇರಿ ಎಂದು ಎಚ್ಚರಿಕೆ ನೀಡಿದ್ದಾರೆ.

ಚಿಕ್ಕ ಪುಟ್ಟ ಲಕ್ಷಣ ಕಂಡು ಬಂದರೂ ನಿರ್ಲಕ್ಷ್ಯ ಮಾಡಬೇಡಿ ಎಂದು ಸೂಚಿಸಿದ್ದಾರೆ. ವಿದೇಶದಲ್ಲಿ ಶುರುವಾದ ಆತಂಕದಿಂದ ಇತ್ತ ಕರ್ನಾಟಕದಲ್ಲೂ ಆರೋಗ್ಯ ಇಲಾಖೆಯೂ ಮತ್ತೆ ಅಲರ್ಟ್ ಆಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 8:32 am, Mon, 21 August 23

Follow Us
ವಿನಯ್​ ಕಾಶಪ್ಪನವರ್​
ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್