ಜುಲೈ 12-15ರವರೆಗೆ ಭಾರಿ ಮಳೆಯ ಮುನ್ಸೂಚನೆ; ರಾಯಚೂರು ಕಂಟ್ರೋಲ್ ರೂಮ್​ನಲ್ಲಿ ಸಿದ್ಧತೆ

ರಾಯಚೂರು ಜಿಲ್ಲೆಯಲ್ಲಿ ಕಂದಾಯ ಅಧಿಕಾರಿಗಳು ಕೇಂದ್ರ ಸ್ಥಾನ ಬಿಡದಂತೆ ಸೂಚನೆ ನೀಡಲಾಗಿದೆ. 24/7 ಕಂಟ್ರೋಲ್ ರೂಮ್ ಓಪನ್ ಮಾಡಿ ಡಿಸಿ ಆದೇಶ ಹೊರಡಿಸಿದ್ದಾರೆ.

ಜುಲೈ 12-15ರವರೆಗೆ ಭಾರಿ ಮಳೆಯ ಮುನ್ಸೂಚನೆ; ರಾಯಚೂರು ಕಂಟ್ರೋಲ್ ರೂಮ್​ನಲ್ಲಿ ಸಿದ್ಧತೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on: Jul 09, 2021 | 12:21 PM

ರಾಯಚೂರು: ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಬಗ್ಗೆ ಈಗಾಗಲೇ ಹವಾಮಾನ ಇಲಾಖೆ ಸೂಚನೆ ನೀಡಿದೆ. ಸದ್ಯ ಜುಲೈ 12-15ರವರೆಗೆ ಭಾರಿ ಮಳೆಯ ಮುನ್ಸೂಚನೆ ಸಿಕ್ಕಿರುವ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲೆಯಲ್ಲಿ ಕಂದಾಯ ಅಧಿಕಾರಿಗಳು ಕೇಂದ್ರ ಸ್ಥಾನ ಬಿಡದಂತೆ ಸೂಚನೆ ನೀಡಲಾಗಿದೆ. 24/7 ಕಂಟ್ರೋಲ್ ರೂಮ್ ಓಪನ್ ಮಾಡಿ ಡಿಸಿ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ಎಲ್ಲ ತಹಶೀಲ್ದಾರ್ ಕಚೇರಿಗಳಲ್ಲಿ ಕಂಟ್ರೋಲ್ ರೂಮ್‌ ಓಪನ್ ಮಾಡಿ 3 ಶಿಫ್ಟ್‌ನಲ್ಲಿ ಸಿಬ್ಬಂದಿ ಕೆಲಸ ಮಾಡಲು ತಿಳಿಸಲಾಗಿದೆ. ಭಾರಿ ಮಳೆಯಾಗುವ ಮುನ್ಸೂಚನೆ ಹಿನ್ನೆಲೆ ಸಾರ್ವಜನಿಕರ ಸಮಸ್ಯೆಗೆ ತ್ವರಿತವಾಗಿ ಸ್ಪಂದಿಸಲು ಸೂಚನೆ ನೀಡಲಾಗಿದೆ.

ಕೋಲಾರದ ಮನೆಗಳಿಗೆ ನುಗ್ಗಿದ ನೀರು ಕೋಲಾರದಲ್ಲಿ ತಡರಾತ್ರಿ ಸುರಿದ ಮಳೆಯಿಂದ ಭಾರಿ ಅವಾಂತರವಾಗಿದೆ. ತಗ್ಗು ಪ್ರದೇಶದ ಮನೆಗಳಿಗೆ ಮಳೆ ನೀರು ನುಗ್ಗಿ ಜನರು ಪರದಾಡುತ್ತಿದ್ದಾರೆ. ಕೋಲಾರದ ರಹಮತ್ ನಗರ, ಶಾಂತಿನಗರ, ಕಾರಂಜಿಕಟ್ಟೆ, ಗಲ್‌ಪೇಟೆ ಪೊಲೀಸ್ ಕ್ವಾರ್ಟರ್ಸ್ ಮುಖ್ಯರಸ್ತೆ ಜಲಾವೃತಗೊಂಡಿದೆ. ಮನೆಗಳಿಗೆ ಚರಂಡಿ ನೀರಿನ ಜೊತೆಗೆ ಮಳೆ ನೀರು ನುಗ್ಗಿ ಜನರು ನೀರು ಹೊರ ಹಾಕಲು ಹರಸಾಹಸ ಪಟ್ಟಿದ್ದಾರೆ.

ಇದನ್ನೂ ಓದಿ: Karnataka Weather: ಕರ್ನಾಟಕಕ್ಕೆ ವರುಣನ ಮರು ಪ್ರವೇಶ; ಮತ್ತೆ ಜೋರಾಗಲಿದೆ ಮಳೆ