AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್ಚಾದ ವೈಮನಸ್ಸು: ಆಗಸ್ಟ್ 2 ರಂದು ಕರ್ನಾಟಕ ಕಾಂಗ್ರೆಸ್ ನಾಯಕರ ಸಭೆ ಕರೆದ ಹೈಕಮಾಂಡ್

ಕರ್ನಾಟಕ ಕಾಂಗ್ರೆಸ್​ನಲ್ಲಿ ಒಳ ಬೇಗುದಿ ಹೆಚ್ಚಾಗುತ್ತಿದ್ದಂತೆ ಎಚ್ಚೆತ್ತ ಹೈಕಮಾಂಡ್, ಆಗಸ್ಟ್ 2 ರಂದು ದೆಹಲಿಯಲ್ಲಿ ರಾಜ್ಯ ನಾಯಕರ ಸಭೆ ಕರೆದಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಸಚಿವರೊಂದಿಗೆ ಸಭೆ ನಡೆಯಲಿದೆ.

ಹೆಚ್ಚಾದ ವೈಮನಸ್ಸು: ಆಗಸ್ಟ್ 2 ರಂದು ಕರ್ನಾಟಕ ಕಾಂಗ್ರೆಸ್ ನಾಯಕರ ಸಭೆ ಕರೆದ ಹೈಕಮಾಂಡ್
ಕರ್ನಾಟಕ ಕಾಂಗ್ರೆಸ್ ನಾಯಕರ ನಡುವಿನ ವೈಮನಸ್ಸು ಹೆಚ್ಚಾಗುತ್ತಿದ್ದಂತೆಯೇ ದೆಹಲಿಯಲ್ಲಿ ಸಭೆ ಕರೆದ ಹೈಕಮಾಂಡ್Image Credit source: FILE PHOTO
Follow us
ಹರೀಶ್ ಜಿ.ಆರ್​. ನವದೆಹಲಿ
| Updated By: Rakesh Nayak Manchi

Updated on: Jul 27, 2023 | 10:47 PM

ನವದೆಹಲಿ, ಜುಲೈ 27: ಕರ್ನಾಟಕ ಕಾಂಗ್ರೆಸ್​ನಲ್ಲಿ ಒಳ ಬೇಗುದಿ ಹೆಚ್ಚಾದ ಹಿನ್ನೆಲೆ ಎಚ್ಚೆತ್ತಿರುವ ಹೈಕಮಾಂಡ್, ಆಗಸ್ಟ್ 2 ರಂದು ದೆಹಲಿಯಲ್ಲಿ ರಾಜ್ಯ ನಾಯಕರ ಸಭೆ ಕರೆದಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjuna Kharge) ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah), ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಸೇರಿದಂತೆ ಸಚಿವರೊಂದಿಗೆ ಸಭೆ ನಡೆಯಲಿದೆ. ಇತ್ತೀಚೆಗೆ ಮುಖ್ಯಮಂತ್ರಿ ವಿರುದ್ಧ ಅಸಮಾಧಾನ ಹೊರಹಾಕಿದ್ದ ಎಂಎಲ್​ಸಿ ಬಿಕೆ ಹರಿಪ್ರಸಾದ್ (BK Hariprasad) ಅವರಿಗೂ ಬುಲಾವ್ ನೀಡಿದೆ.

ಮಧ್ಯಾಹ್ನ 2 ಗಂಟೆಗೆ ನಡೆಯುವ ರಾಜ್ಯ ನಾಯಕರ ಸಭೆಯಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕೂಡ ಭಾಗಿಯಾಗಲಿದ್ದಾರೆ. ಸಚಿವರ ವಿರುದ್ಧ ಸ್ವಪಕ್ಷೀಯ ಶಾಸಕರೇ ಅಸಮಧಾನ ಹೊರಹಾಕುತ್ತಿದ್ದು, ಇದನ್ನು ತಣಿಸುವ ನಿಟ್ಟಿನಲ್ಲಿ ಸಭೆ ಕರೆಯಲಾಗಿದೆ. ಮುಂದಿನ ವರ್ಷ ಲೋಕಸಭಾ ಚುನಾವಣಾ ಕೂಡ ನಡೆಯಲಿದ್ದು, ಇದರ ತಯಾರಿ ಬಗ್ಗೆಯೂ ಸಭೆಯಲ್ಲಿ ಸಮಾಲೋಚನೆ ನಡೆಯಲಿದೆ.

ಈಡಿಗ ಸಮುದಾಯಕ್ಕೆ ಸೂಕ್ತ ರಾಜಕೀಯ ಸ್ಥಾನಮಾನ ನೀಡದ ಬಗ್ಗೆ ಅಸಮಾಧನ ಹೊರಹಾಕಿದ್ದ ಬಿಕೆ ಹರಿಪ್ರಸಾದ್, ಸಿಎಂ ಆಯ್ಕೆ ಮಾಡುವುದು ಗೊತ್ತು, ಕೆಳಗಿಳಿಸುವುದು ಗೊತ್ತು ಎಂದು ಸಿದ್ದರಾಮಯ್ಯ ಅವರ ಹೆಸರು ಹೇಳದೆ ಪರೋಕ್ಷವಾಗಿ ಎಚ್ಚರಿಕೆಯ ಸಂದೇಶ ರವಾನಿಸಿದ್ದರು. ಈ ಹೇಳಿಕೆ ರಾಜ್ಯ ಕಾಂಗ್ರೆಸ್​ಗೆ ಮುಜುಗರ ಉಂಟು ಮಾಡಿದ್ದಲ್ಲದೆ, ಆಂತರಿಕ ಚರ್ಚೆಗೆ ಕಾರಣವಾಗಿತ್ತು. ನಂತರ ಹೈಕಮಾಂಡ್ ಸೂಚನೆಯಂತೆ ಡಿಕೆ ಶಿವಕುಮಾರ್ ಅವರು ಬಿಕೆ ಹರಿಪ್ರಸಾದ್ ಅವರ ಜೊತೆ ಗೌಪ್ಯ ಸಭೆ ನಡೆಸಿ ಮುನಿಸು ಶಮನಗೊಳಿಸುವ ಯತ್ನ ನಡೆಸಿದ್ದಾರೆ.

ಇದನ್ನೂ ಓದಿ: Congress CLP Meeting: ಬಸವರಾಜ ರಾಯರೆಡ್ಡಿಯ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಸಿಎಂ ಸಿದ್ದರಾಮಯ್ಯ

ಇದರ ಬೆನ್ನಲ್ಲೇ, ಸಚಿವರು ಹಾಗೂ ಕಾಂಗ್ರೆಸ್ ಶಾಸಕರ ನಡುವೆ ಮುಸುಕಿನ ಗುದ್ದಾಟ ಸ್ಫೋಟಗೊಳ್ಳಲು ಆರಂಭವಾಯಿತು. ಬಸವರಾಜ ರಾಯರೆಡ್ಡಿ ಮತ್ತು ಇತರ ಶಾಸಕರು ಸಚಿವರ ವಿರುದ್ಧ ಸಿಎಂ ಸಿದ್ದರಾಮಯ್ಯ ಅವರಿಗೆ ದೂರು ನೀಡಿದ್ದರು. ಈ ವಿಚಾರ ತಿಳಿದ ವಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ಕಾಂಗ್ರೆಸ್​ನಲ್ಲಿ ಉರಿಯುತ್ತಿರುವ ಬೆಂಕಿಗೆ ಮತ್ತಷ್ಟು ತುಪ್ಪ ಸುರಿಯಲಾರಂಭಿಸುತ್ತು. ಬೀಸುವ ದೊಣ್ಣೆಯಿಂದ ಪಾರಾಗಲು ಕಾಂಗ್ರೆಸ್ ನಾಯಕರು, ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ಪತ್ರ ಬರೆದಿದ್ದಾರೆ ಎಂದು ಹೇಳಿ ಶಾಸಕರ ದೂರಿಗೆ ತೇಪೆಹಚ್ಚುವ ಕೆಲಸ ಮಾಡಿದ್ದರು.

ಬೀಸುವ ದೋಣ್ಣೆಯಿಂದ ಪಾರಾದೆವು ಎಂದು ಭಾವಿಸಿದ್ದ ರಾಜ್ಯ ಕೈ ನಾಯಕರಿಗೆ ಆಳಂದ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ಅವರದ್ದು ಎನ್ನಲಾದ ಪತ್ರ ಬೆವರಿಳಿಸಿತ್ತು. ಅನುದಾನ ಬಿಡುಗಡೆ ಮಾಡಲು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರು ಮೂರನೇ ವ್ಯಕ್ತಿ ಮೂಲಕ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ಪಾಟೀಲ್ ಅವರು ಸಿದ್ದರಾಮಯ್ಯ ಅವರಿಗೆ ಬರೆದಿದ್ದಾರೆ ಎನ್ನಲಾದ ಪತ್ರವೊಂದು ಬಹಿರಂಗವಾಗಿತ್ತು. ಇದರು ತೀವ್ರ ಚರ್ಚೆಗೂ ಕಾರಣವಾಗಿತ್ತು.

ಇದು ವಿಪಕ್ಷಗಳಿಗೆ ಅಸ್ತ್ರವಾಗಿ ಸಿಗುತ್ತಿದ್ದಂತೆ ಎಚ್ಚೆತ್ತ ಪಾಟೀಲರು, ಸ್ಪಷ್ಟನೆ ನೀಡಿದ್ದರು. ನನ್ನ ಹಳೆಯ ಲೆಟರ್‌ಹೆಡ್‌ ಬಳಸಿ ಪತ್ರ ವೈರಲ್ ಮಾಡಿದ್ದಾರೆ. ಈ ಹಿಂದೆ ಶಾಸಕನಾಗಿದ್ದಾಗಿನ ಲೆಟರ್‌ಹೆಡ್‌ ಬಳಸಿ ಪತ್ರ ವೈರಲ್ ಮಾಡಲಾಗಿದೆ. ಆ ಪತ್ರದಲ್ಲಿ ಶಾಂತಿನಗರದ ಮನೆಯ ವಿಳಾಸವಿದೆ ಎಂದು ಹೇಳಿದ್ದಾರೆ. ಅಲ್ಲದೆ, ಈ ಪತ್ರವನ್ನು ಬಿಜೆಪಿಯವರೇ ವೈರಲ್ ಮಾಡಿಸಿರಬಹುದು ಎಂದು ಆರೋಪಿಸಿದ್ದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ