ಕೆಪಿಸಿಸಿ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳುವ ಬಗ್ಗೆ ಯೋಚನೆ ಮಾಡಿಲ್ಲ, ಮುಂದೆ ನೋಡೋಣ: ಸತೀಶ್ ಜಾರಕಿಹೊಳಿ

|

Updated on: Nov 26, 2024 | 3:40 PM

ಕಳೆದ ವಿಧಾನಸಭಾ ಚುನಾವಣೆಯಿಂದ ರಾಜ್ಯದ ಎಸ್ಟಿ ಜನಾಂಗ ಕಾಂಗ್ರೆಸ್ ಕೈ ಹಿಡಿದಿದೆ ಎಂದು ಹೇಳಿದ ಸತೀಶ್ ಜಾರಕಿಹೊಳಿ ಗ್ಯಾರಂಟಿ ಯೋಜನೆಗಳನ್ನು ಯಾವ ಕಾರಣಕ್ಕೂ ನಿಲ್ಲಿಸಲ್ಲ, ಆ ಯೋಜನೆಗಳಿಗಾಗಿ ಬಜೆಟ್​​ನಲ್ಲಿ ಪ್ರತ್ಯೇಕವಾಗಿ ಹಣ ತೆಗೆದಿರಿಸಲಾಗಿದೆ, ಅನುದಾನಗಳ ಹಣ ಪ್ರತ್ಯೇಕವಾಗಿದೆ ಎಂದು ಹೇಳಿದರು.

ಬೆಂಗಳೂರು: ನಗರದಲ್ಲಿಂದು ನಮ್ಮ ವರದಿಗಾರನೊಂದಿಗೆ ಮಾತಾಡಿದ ಲೋಕೋಪಯೋಗಿ ಖಾತೆ ಸಚಿವ ಸತೀಶ್ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷರನ್ನು ಬದಲಾಯಿಸುವ ವಿಚಾರ ಸದ್ಯಕ್ಕಂತೂ ಹೈಕಮಾಂಡ್ ಮುಂದಿಲ್ಲ, ಮುಂಬರುವ ದಿನಗಳಲ್ಲಿ ಅದನ್ನು ಮಾಡುವುದಾದರೆ ಮತ್ತು ಅಧ್ಯಕ್ಷ ಸ್ಥಾನಕ್ಕೆ ತನ್ನನ್ನು ಪರಿಗಣಿಸುವುದಾದರೆ ನೋಡೋಣ, ಅದು ಯೋಚಿಸಬೇಕಾದ ವಿಷಯ ಎಂದರು. ಶಿಗ್ಗಾವಿ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿದ ಬಳಿಕ ಸತೀಶ್ ಅವರ ಸಂಘಟನಾ ಸಾಮರ್ಥ್ಯದ ಬಗ್ಗೆ ಪ್ರಶಂಸೆಯ ಮಾತುಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅವರ ಹೆಸರು ಕೇಳಿಬರುತ್ತಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದ ಪ್ರಸನ್ನಾನಂದಪುರಿ ಸ್ವಾಮೀಜಿ