ಶಾಸಕರ ಅಭಿಪ್ರಾಯ ಪಡೆದು ಹೈಕಮಾಂಡ್ ತೆಗೆದುಕೊಳ್ಳುವ ನಿರ್ಣಯಕ್ಕೆ ಎಲ್ಲರೂ ಬದ್ಧ: ಕೆಎನ್ ರಾಜಣ್ಣ

ಅರುಣ್​ ಕುಮಾರ್​ ಬೆಳ್ಳಿ

Updated on: Jan 28, 2025 | 3:57 PM

ಇಕ್ಬಾಲ್ ಹುಸ್ಸೇನ್ ಅವರು ಶಿವಕುಮಾರ್ ಬಣದವರು ಮತ್ತು ರಾಜಣ್ಣ ಅವರು ಸಿದ್ದರಾಮಯ್ಯ ಬಣದವರು ಅಂತ ಕನ್ನಡಿಗರಿಗೆ ಗೊತ್ತಿಲ್ಲದೇನಿಲ್ಲ, ಆದರೆ ಕೆಪಿಸಿಸಿ ಅಧ್ಯಕ್ಷನ ಬದಲಾವಣೆ ಅಥವಾ ಅಧಿಕಾರ ಹಂಚಿಕೆಯ ವಿಷಯ ಪ್ರಸ್ತಾಪವಾದಾಗ ರಾಜಣ್ಣ ತಮ್ಮ ಅಭಿಪ್ರಾಯ ಹೇಳಿದ ಬಳಿಕವೇ ಸುಮ್ಮನಾಗುತ್ತಾರೆ. ಇವತ್ತು ಬೆಳಗ್ಗೆಯಷ್ಟೇ ಕಡೂರು ಶಾಸಕ ಆನಂದ್ ಕೆಎಸ್ ರಾಜಣ್ಣನ ಧೋರಣೆ ಖಂಡಿಸಿದ್ದಾರೆ.

ಬೆಂಗಳೂರು: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲು ಶಾಸಕರ ಬೆಂಬಲ ಇರಲೇಬೇಕು ಅಂತೇನಿಲ್ಲ, ಹೈಕಮಾಂಡ್ ಹೇಳಿದರೆ ಸಾಕು ಎಂದು ರಾಮನಗರ ಶಾಸಕ ಇಕ್ಬಾಲ್ ಹುಸ್ಸೇನ್ ಹೇಳಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಸಹಕಾರ ಸಚಿವ ಕೆಎನ್ ರಾಜಣ್ಣ, ಶಾಸಕಾಂಗ ಪಕ್ಷದ ನಿರ್ಧಾರವನ್ನು ಪಡೆದೇ ಹೈಕಮಾಂಡ್ ನಿರ್ಣಯಗಳನ್ನು ತೆಗೆದುಕೊಳ್ಳುತ್ತದೆ ಎಂದು ಹೇಳಿದರು. ಕಾಂಗ್ರೆಸ್ ಪಕ್ಷದ ವರಿಷ್ಠರು ಯಾವತ್ತೂ ಏಕಪಕ್ಷೀಯ ನಿರ್ಣಯಗಳಮ್ಮು ತೆಗೆದುಕೊಳ್ಳಲ್ಲ, ಶಾಸಕರ ಅಭಿಪ್ರಾಯಗಳಿಗೆ ಮನ್ನಣೆ ನೀಡುತ್ತಾರೆ, ಅವರು ತೆಗೆದುಕೊಳ್ಳುವ ಅಂತಿಮ ನಿರ್ಣಯಕ್ಕೆ ಎಲ್ಲರೂ ಬದ್ಧರಾಗಿರುತ್ತಾರೆ ಎಂದು ರಾಜಣ್ಣ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಸಿದ್ದರಾಮಯ್ಯ ಏಯ್ ಭೀಮ ಅಂತ ಕೂಗಿದಾಗ ಓಡಿಬಂದಿದ್ದು ಕೋಟುಧಾರಿ ಕೆಎನ್ ರಾಜಣ್ಣ!

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.