ಕರ್ನಾಟಕದ ಆಕ್ಸಿಜನ್ ಕೋಟಾ ಹೆಚ್ಚಿಸ್ತೀರೋ ಇಲ್ಲವೋ? ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಖಡಕ್ ಎಚ್ಚರಿಕೆ

Karnataka Oxygen Shortage: ಸೋಂಕು ಕಡಿಮೆ ಇರುವ ರಾಜ್ಯಗಳಿಗೆ ಹೆಚ್ಚು ಆಕ್ಸಿಜನ್ ಹೆಚ್ಚು ಒದಗಿಸಿದ್ದೀರಿ. ಕರ್ನಾಟಕದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಹೆಚ್ಚಿದ್ದರೂ ಅಗತ್ಯ ಪ್ರಮಾಣದ ಆಕ್ಸಿಜನ್ ಪೂರೈಕೆ ಮಾಡಿಲ್ಲ. ಜನರ ಸಾವು ಹೆಚ್ಚಾಗಿರುವ ಕಾರಣ ಕೋಟಾಗಿಂತ ಹೆಚ್ಚಿನ ಆಕ್ಸಿಜನ್ ಒದಗಿಸಿ ಎಂದು ಕೇಂದ್ರ ಸರ್ಕಾರದ ವಕೀಲರನ್ನು ಹೈಕೋರ್ಟ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.

ಕರ್ನಾಟಕದ ಆಕ್ಸಿಜನ್ ಕೋಟಾ ಹೆಚ್ಚಿಸ್ತೀರೋ ಇಲ್ಲವೋ? ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಖಡಕ್ ಎಚ್ಚರಿಕೆ
ಕರ್ನಾಟಕ ಹೈಕೋರ್ಟ್​
Follow us
guruganesh bhat
|

Updated on: May 04, 2021 | 4:01 PM

ಬೆಂಗಳೂರು: ಚಾಮರಾಜನಗರದಲ್ಲಿ ಆಕ್ಸಿಜನ್ ಕೊರತೆಯಿಂದ ರೋಗಿಗಳು ಮೃತಪಟ್ಟ ಘಟನೆ ಕುರಿತು ಕರ್ನಾಟಕ ಹೈಕೋರ್ಟ್​ ತೀವ್ರ ಕಳವಳ ವ್ಯಕ್ತಪಡಿಸಿದೆ. ಸ್ವಯಂ ಪ್ರೇರಿತ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಘಟನೆ ಬಗ್ಗೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳಿಂದ ತನಿಖೆ ನಡೆಸುವಂತೆ ಸಲಹೆ ನೀಡಿದೆ. ಕರ್ನಾಟಕದ ಆಕ್ಸಿಜನ್ ಕೋಟಾ ಹೆಚ್ಚಿಸ್ತೀರೋ, ಇಲ್ಲವೋ? ಇನ್ನೂ ಎಷ್ಟು ಜನ ಮೃತಪಡಬೇಕು? ನಿಮಗೆ ಜನ ಮೃತಪಡುವುದು ಬೇಕೇ? ಎಂದು ಕೇಂದ್ರ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಜತೆಗೆ ನಾಳೆ ಬೆಳಗ್ಗೆ 10.30ರೊಳಗೆ ನಿರ್ಧಾರ ತಿಳಿಸುವಂತೆ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎ.ಎಸ್.ಒಕಾ ಮತ್ತು ನ್ಯಾ.ಅರವಿಂದ್ ಕುಮಾರ್‌ರವರಿದ್ದ ಪೀಠ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

ಇಂದೇ ಹೆಚ್ಚು ಆಕ್ಸಿಜನ್ ಹೆಚ್ಚಿಸುತ್ತೀರೋ ಇಲ್ಲವೋ. ಚಾಮರಾಜನಗರ, ಕಲ್ಬುರ್ಗಿ ಘಟನೆ ನಂತರವಾದರೂ ನಿರ್ಧಾರ ಬದಲಿಸಿ. ತಕ್ಷಣ ಆಕ್ಸಿಜನ್ ಪ್ರಮಾಣ ಹೆಚ್ಚಿಸುತ್ತೀರೋ ಇಲ್ಲವೋ ಎಂದು ಕೇಂದ್ರ ಸರ್ಕಾರವನ್ನು ಕೋರ್ಟ್ ಪ್ರಶ್ನಿಸಿದೆ.

ಆರೋಗ್ಯದ ಹಕ್ಕು ಬದುಕಿನ ಹಕ್ಕಿನ ಭಾಗವಾಗಿದೆ. ಪಿಐಎಲ್ ವಿಚಾರಣೆ ನಾಳೆಗೆ ನಿಗದಿಯಾಗಿತ್ತು. ತುರ್ತುಸ್ಥಿತಿ ಎದುರಾದ್ದರಿಂದ ಇಂದೇ ವಿಚಾರಣೆ ನಡೆಸಿದ್ದೇವೆ ಕೇಂದ್ರ ಸರ್ಕಾರದ ವಕೀಲರು ಮೆಮೋ ಸಲ್ಲಿಸಿದ್ದಾರೆ.  ಮೇ 5ಕ್ಕೆ 1792 ಮೆಟ್ರಿಕ್ ಟನ್ ಅಗತ್ಯವೆಂದು ರಾಜ್ಯ ಪತ್ರ ಬರೆದಿತ್ತು. ಕನಿಷ್ಟ 1162 ಮೆಟ್ರಿಕ್ ಟನ್ ಬೇಕೆಂದು ಪತ್ರದಲ್ಲಿ ಉಲ್ಲೇಖಿಸಲಾಗಿತ್ತು. 802 ಮೆಟ್ರಿಕ್ ಟನ್‌ನಿಂದ 865 ಮೆಟ್ರಿಕ್ ಟನ್‌ಗೆ ಮಾತ್ರ ಏರಿಸಿದ್ದಾರೆ ಎಂದು ಕೋರ್ಟ್ ಸರ್ಕಾರಕ್ಕೆ ನೆನಪಿಸಿತು.

ರಾಜ್ಯದಲ್ಲಿ ರೆಮ್‌ಡಿಸಿವಿರ್ ಇಂಜೆಕ್ಷನ್ ಕೊರತೆಯಿದೆ. ಇನ್ನೂ 32 ಸಾವಿರಕ್ಕೂ ಹೆಚ್ಚು ರೆಮ್‌ಡಿಸಿವಿರ್ ಅಗತ್ಯವಿದೆ. ದಿನಕ್ಕೆ 15,800 ರೆಮ್‌ಡಿಸಿವಿರ್ ಹಂಚಿಕೆ ಮಾಡಲಾಗಿದೆ ಎಂ ಕೋರ್ಟ್ ರಾಜ್ಯಕ್ಕೆ ರೆಮ್‌ಡಿಸಿವಿರ್ ಹಂಚಿಕೆ ಬಗ್ಗೆಯೂ ವರದಿ ನೀಡಲು ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ. ಅಮೈಕಸ್ ಕ್ಯೂರಿಯಾಗಿ ವಕೀಲ ವಿಕ್ರಮ್ ಹುಯಿಲಗೋಳ್ ಅವರನ್ನು ನೇಮಕ ಮಾಡಿದೆ.

ಸೋಂಕು ಕಡಿಮೆ ಇರುವ ರಾಜ್ಯಗಳಿಗೆ ಹೆಚ್ಚು ಆಕ್ಸಿಜನ್ ಹೆಚ್ಚು ಒದಗಿಸಿದ್ದೀರಿ. ಕರ್ನಾಟಕದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಹೆಚ್ಚಿದ್ದರೂ ಅಗತ್ಯ ಪ್ರಮಾಣದ ಆಕ್ಸಿಜನ್ ಪೂರೈಕೆ ಮಾಡಿಲ್ಲ. ಜನರ ಸಾವು ಹೆಚ್ಚಾಗಿರುವ ಕಾರಣ ಕೋಟಾಗಿಂತ ಹೆಚ್ಚಿನ ಆಕ್ಸಿಜನ್ ಒದಗಿಸಿ ಎಂದು ಕೇಂದ್ರ ಸರ್ಕಾರದ ವಕೀಲರನ್ನು ಹೈಕೋರ್ಟ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.

ಕೋರ್ಟ್​ನ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸರ್ಕಾರದ ಪರ ವಕೀಲ ಕ್ಲಿಫ್ಟನ್ ರೊಜಾರಿಯೋ ಸಭೆ ನಡೆಸಿ ತೀರ್ಮಾನ ತೆಗೆದುಕೊಳ್ಳಲು ಕಾಲಾವಕಾಶ ಬೇಕು ಎಂದು ನಾಳೆ ಮಧ್ಯಾಹ್ನದವರೆಗೂ ಕಾಲಾವಕಾಶ ಕೇಳಿದ್ದಾರೆ. ಇನ್ನೂ 10 ಆಸ್ಪತ್ರೆಗಳಿಗೆ ಆಕ್ಸಿಜನ್ ಕೊರತೆಯಿದೆ. ಈ ಬಗ್ಗೆ ಆಸ್ಪತ್ರೆಗಳು ಸರ್ಕಾರಕ್ಕೆ ಪತ್ರ ಬರೆದಿವೆ ಎಂದು ಅವರು ಹೈಕೋರ್ಟ್​ಗೆ ತಿಳಿಸಿದ್ದಾರೆ.

ಹೈಕೋರ್ಟ್ ಈ ಸ್ವಯಂ ಪ್ರೇರಿತ ದೂರಿನ ವಿಚಾರಣೆಯನ್ನು ನಾಳೆ ಬೆಳಗ್ಗೆ 10.30ಕ್ಕೆ ಮುಂದೂಡಿಕೆ ಮಾಡಿದೆ.

ಇದನ್ನೂ ಓದಿ: Covid Lockdown: ಕೋವಿಡ್ 2ನೇ ಅಲೆಗೆ ಕಡಿವಾಣ ಹಾಕಲು ಲಾಕ್​ಡೌನ್ ಹೇರಿ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ಸುಪ್ರೀಂಕೋರ್ಟ್​ ಸೂಚನೆ 

ಮಾಧ್ಯಮಗಳು ಹೈಕೋರ್ಟ್ ಅಭಿಪ್ರಾಯ ವರದಿ ಮಾಡದಂತೆ ನಿರ್ಬಂಧ ವಿಧಿಸಲಾಗುವುದಿಲ್ಲ: ಸುಪ್ರೀಂಕೋರ್ಟ್

(High Court asks central govt to increase the oxygen quota of Karnataka and demands judicial investigation of Chamarajanagar oxygen incident )

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್