ಬೆಂಗಳೂರು: ಬೆಳ್ಳಂದೂರು ಬಳಿಯ ಜಮೀನು ಡಿನೋಟಿಫಿಕೇಷನ್ ಪ್ರಕರಣದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಂಕಷ್ಟ ಎದುರಾಗಿದೆ. ಯಡಿಯೂರಪ್ಪ ವಿರುದ್ಧದ ಪ್ರಕರಣವನ್ನು ರದ್ದುಪಡಿಸಲು ಹೈಕೋರ್ಟ್ ಏಕಸದಸ್ಯ ಪೀಠ ನಿರಾಕರಿಸಿದೆ. ನ್ಯಾ.ಜಾನ್ ಮೈಕೆಲ್ ಕುನ್ಹಾರವರ ಏಕಸದಸ್ಯ ಪೀಠ ಈ ತೀರ್ಪು ನೀಡಿದೆ.
2013 ರಲ್ಲಿ ವಾಸುದೇವ ರೆಡ್ಡಿ ಎಂಬುವವರು ಖಾಸಗಿ ದೂರು ದಾಖಲಿಸಿದ್ದರು. ದೂರಿನನ್ವಯ ಲೋಕಾಯುಕ್ತ ವಿಶೇಷ ಕೋರ್ಟ್ ತನಿಖೆಗೆ ಆದೇಶಿಸಿತ್ತು. ಹೀಗಾಗಿ, 2015 ರಲ್ಲಿ ಲೋಕಾಯುಕ್ತ ಪೊಲೀಸರು FIR ದಾಖಲಿಸಿದ್ದರು.
ಸಂದ ಹಾಗೆ, ಮಾಜಿ ಸಚಿವ ಆರ್.ವಿ.ದೇಶಪಾಂಡೆ ವಿರುದ್ಧವೂ ಈ ಕುರಿತು ಕೇಸ್ ದಾಖಲಾಗಿತ್ತು. ಆದರೆ, ದೇಶಪಾಂಡೆ ವಿರುದ್ಧದ ಕೇಸ್ನ ಹೈಕೋರ್ಟ್ ರದ್ದುಪಡಿಸಿತ್ತು. ಜೊತೆಗೆ, ಸುಪ್ರೀಂಕೋರ್ಟ್ ಕೂಡ ಈ ಆದೇಶವನ್ನು ಎತ್ತಿಹಿಡಿದಿತ್ತು.
ಬಿಜೆಪಿ ನಾಯಕರ ವಿರುದ್ಧದ 62 ಕ್ರಿಮಿನಲ್ ಕೇಸ್ ಹಿಂಪಡೆಯಲು ರಾಜ್ಯ ಸರ್ಕಾರದಿಂದ ಸಿದ್ಧತೆ: ಹೈಕೋರ್ಟ್ನಿಂದ ತಡೆ