AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಸಾರ್ವಜನಿಕ ಶೌಚಾಲಯಗಳ ಸ್ಥಿತಿಗತಿ ವರದಿ ಸಲ್ಲಿಸಲು ಬಿಬಿಎಂಪಿಗೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು ನಗರಕ್ಕೆ ಒಟ್ಟು ಎಷ್ಟು ಸಾರ್ವಜನಿಕ ಶೌಚಾಲಯಗಳು ಬೇಕು ಎಂಬುದನ್ನು ಕಂಡುಕೊಳ್ಳಲು ಸಮೀಕ್ಷೆ ನಡೆಸುವಂತೆ ಬಿಬಿಎಂಪಿಗೆ (ಬೃಹತ್ ಬೆಂಗಳೂರು ಮಹಾ ನಗರ ಪಾಲಿಕೆ) ಕರ್ನಾಟಕ ಹೈಕೋರ್ಟ್ ಸೋಮವಾರ ಸೂಚಿಸಿದೆ.

ಬೆಂಗಳೂರು ಸಾರ್ವಜನಿಕ ಶೌಚಾಲಯಗಳ ಸ್ಥಿತಿಗತಿ ವರದಿ ಸಲ್ಲಿಸಲು ಬಿಬಿಎಂಪಿಗೆ ಹೈಕೋರ್ಟ್ ನಿರ್ದೇಶನ
ಕರ್ನಾಟಕ ಹೈಕೋರ್ಟ್​
Follow us
preethi shettigar
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Dec 01, 2020 | 3:36 PM

ಬೆಂಗಳೂರು: ಗರಕ್ಕೆ ಒಟ್ಟು ಎಷ್ಟು ಸಾರ್ವಜನಿಕ ಶೌಚಾಲಯಗಳು ಬೇಕು ಎಂಬುದನ್ನು ಕಂಡುಕೊಳ್ಳಲು ಸಮೀಕ್ಷೆ ನಡೆಸುವಂತೆ ಬಿಬಿಎಂಪಿಗೆ (ಬೃಹತ್ ಬೆಂಗಳೂರು ಮಹಾ ನಗರ ಪಾಲಿಕೆ) ಕರ್ನಾಟಕ ಹೈಕೋರ್ಟ್ ಸೋಮವಾರ ಸೂಚಿಸಿದೆ.

ಬೆಂಗಳೂರಿನಲ್ಲಿ ಒಟ್ಟು ಜನಸಂಖ್ಯೆಗೆ ಅಗತ್ಯವಿರುವಷ್ಟು ಶೌಚಾಲಯಗಳು ಇಲ್ಲ. ಇರುವ ಶೌಚಾಲಯಗಳ ನಿರ್ವಹಣೆಯೂ ಸರಿಯಿಲ್ಲ ಎಂದು ಲೆಟ್ಸ್​ಕಿಟ್ ಫೌಂಡೇಶನ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯ ನಂತರ ನ್ಯಾಯಪೀಠವು ಮೇಲಿನಂತೆ ನಿರ್ದೇಶನ ನೀಡಿತು.

ಬೆಂಗಳೂರಿನ ಸಾರ್ವಜನಿಕ ಶೌಚಾಲಯಗಳ ಸ್ಥಿತಿಗತಿ ಸುಧಾರಣೆಗೆ ಏನು ಮಾಡಬೇಕು ಎಂಬ ಬಗ್ಗೆ ಜನವರಿ 9, 2021ರ ಒಳಗೆ ಕಾರ್ಯಯೋಜನೆ ವರದಿ ಸಲ್ಲಿಸಬೇಕು. ಅದರಲ್ಲಿ ಶೌಚಾಲಯಗಳಲ್ಲಿ ಒದಗಿಸುತ್ತಿರುವ ಸೌಲಭ್ಯಗಳ ಬಗ್ಗೆ, ಸ್ವಚ್ಛತೆ ಕಾಪಾಡಿಕೊಳ್ಳುತ್ತಿರುವ ಬಗ್ಗೆ ಮಾಹಿತಿಯಿರಬೇಕು. ನಂತರದ ದಿನಗಳಲ್ಲಿ ಈ ಕಾರ್ಯಯೋಜನೆಯನ್ನು ರಾಜ್ಯದ ಇತರ ನಗರಾಡಳಿತ ಸಂಸ್ಥೆಗಳಿಗೂ ವಿಸ್ತರಿಸಲು ನಿರ್ದೇಶನ ನೀಡಲಾಗುವುದು ಎಂದು ಹೈಕೋರ್ಟ್​ ಹೇಳಿದೆ.

ಬೆಂಗಳೂರಿನಲ್ಲಿ ಜನಸಂಖ್ಯೆಗೆ ತಕ್ಕಷ್ಟು ಪಾವತಿಸಿ ಬಳಸುವ ಮತ್ತು ಉಚಿತ ಶೌಚಾಲಯಗಳನ್ನು ಒದಗಿಸಬೇಕು. ಈ ಶೌಚಾಲಯಗಳು ಕೇಂದ್ರ ಸರ್ಕಾರದ ಸ್ವಚ್ಛ ಭಾರತ್ ಅಭಿಯಾನದ ಮಾರ್ಗಸೂಚಿಗಳಿಗೆ ಅನುಗುಣವಾಗಿ ಕಾರ್ಯನಿರ್ವಹಿಸುತ್ತಿವೆ ಎಂಬುದನ್ನು ಖಾತ್ರಿಪಡಿಸಿಕೊಳ್ಳಲು ಬಿಬಿಎಂಪಿಗೆ ನಿರ್ದೇಶನ ನೀಡಬೇಕೆಂದು ಅರ್ಜಿದಾರರು ಕೋರಿದ್ದರು.

ಸ್ವಚ್ಛ ಭಾರತ ಅಭಿಯಾನದ ಮಾರ್ಗಸೂಚಿ ಪ್ರಕಾರ, ಬೆಂಗಳೂರಿನಲ್ಲಿ ಒಟ್ಟು 1100 ಸಾರ್ವಜನಿಕ ಶೌಚಾಲಯಗಳು ಇರಬೇಕು. ಪ್ರತಿ 7 ಕಿಮೀಗೆ ಒಂದರಂತೆ ಶೌಚಾಲಯ ಸಮುಚ್ಚಯಗಳನ್ನು ನಿರ್ಮಿಸಬೇಕು. ಆದರೆ ಬಿಬಿಎಂಪಿ ವೆಬ್​ಸೈಟ್​ನಲ್ಲಿ ಲಭ್ಯವಿರುವ ಮಾಹಿತಿಯ ಪ್ರಕಾರ, 1965ರಿಂದ 2014ರ ನಡುವೆ ಬೆಂಗಳೂರಿನಲ್ಲಿ ಕೇವಲ 479 ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸಲಾಗಿದೆ ಎಂದು ಅರ್ಜಿದಾರರು ವಾದಿಸಿದ್ದಾರೆ.

ಇದನ್ನೂ ಓದಿ: World Toilet Day 2020: ಪಾಳುಬಿದ್ದ BBMP ಸಾರ್ವಜನಿಕ ಶೌಚಾಲಯಗಳು

ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಹತ್ಯೆಯಾದ ಯುವಕನ ತಾಯಿಯಿಂದ ಅಸ್ಪಷ್ಟ ಮಾಹಿತಿ!
ಹತ್ಯೆಯಾದ ಯುವಕನ ತಾಯಿಯಿಂದ ಅಸ್ಪಷ್ಟ ಮಾಹಿತಿ!
ಪಾಕಿಸ್ತಾನಕ್ಕೆ ಭಾರತದಿಂದ ಚೆನಾಬ್ ನದಿ ನೀರು ಬಂದ್; ಒಣಗಿದ ಸಲಾಲ್ ಡ್ಯಾಂ
ಪಾಕಿಸ್ತಾನಕ್ಕೆ ಭಾರತದಿಂದ ಚೆನಾಬ್ ನದಿ ನೀರು ಬಂದ್; ಒಣಗಿದ ಸಲಾಲ್ ಡ್ಯಾಂ
ಜಿಂಕೆಯನ್ನ ಬೇಟೆಯಾಡಿ ಬಾಯಲ್ಲಿ ಹಿಡಿದ ಹುಲಿಯ ಅಪರೂಪದ ದೃಶ್ಯ
ಜಿಂಕೆಯನ್ನ ಬೇಟೆಯಾಡಿ ಬಾಯಲ್ಲಿ ಹಿಡಿದ ಹುಲಿಯ ಅಪರೂಪದ ದೃಶ್ಯ
ಅಖ್ನೂರ್​ ಬಳಿ ಬರಿದಾದ ಚೆನಾಬ್ ನದಿ, ಖಾಲಿ ನದಿಯಲ್ಲಿ ಸ್ಥಳೀಯರ ಓಡಾಟ
ಅಖ್ನೂರ್​ ಬಳಿ ಬರಿದಾದ ಚೆನಾಬ್ ನದಿ, ಖಾಲಿ ನದಿಯಲ್ಲಿ ಸ್ಥಳೀಯರ ಓಡಾಟ
ಹರೀಶ್ ಪೂಂಜಾ ಸೀರಿಯಲ್ ಅಫೆಂಡರ್ ಹಾಗೆ ಗೋಚರಿಸಸುತ್ತಾರೆ: ದಿನೇಶ್ ಗುಂಡೂರಾವ್
ಹರೀಶ್ ಪೂಂಜಾ ಸೀರಿಯಲ್ ಅಫೆಂಡರ್ ಹಾಗೆ ಗೋಚರಿಸಸುತ್ತಾರೆ: ದಿನೇಶ್ ಗುಂಡೂರಾವ್
ಭದ್ರತಾ ಸಿಬ್ಬಂದಿ ಮೇಲೆ ಕಾರು ಹತ್ತಿಸಿದ ಚಾಲಕ
ಭದ್ರತಾ ಸಿಬ್ಬಂದಿ ಮೇಲೆ ಕಾರು ಹತ್ತಿಸಿದ ಚಾಲಕ
ಪೆಟ್ರೋಲ್​ ಹಾಕುವ ವಿಚಾರಕ್ಕೆ ಗಲಾಟೆ: ಅಟ್ಟಾಡಿಸಿ ಕೆಲಸಗಾರರ ಮೇಲೆ ಹಲ್ಲೆ
ಪೆಟ್ರೋಲ್​ ಹಾಕುವ ವಿಚಾರಕ್ಕೆ ಗಲಾಟೆ: ಅಟ್ಟಾಡಿಸಿ ಕೆಲಸಗಾರರ ಮೇಲೆ ಹಲ್ಲೆ
ಸದಾನಂದಗೌಡರು ಬುಲ್ಡೋಜರ್ ಬಳಸುವ ಬಗ್ಗೆ ಹೇಳಿದ್ದು ಗೊತ್ತಿಲ್ಲ: ಪರಮೇಶ್ವರ್
ಸದಾನಂದಗೌಡರು ಬುಲ್ಡೋಜರ್ ಬಳಸುವ ಬಗ್ಗೆ ಹೇಳಿದ್ದು ಗೊತ್ತಿಲ್ಲ: ಪರಮೇಶ್ವರ್