ಬೆಂಗಳೂರು: ಅಗ್ರಹಾರ ದಾಸರಹಳ್ಳಿಯಲ್ಲಿ ಸ್ಲಂ ನಿವಾಸಿಗಳ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ನಲ್ಲಿ ನಿವಾಸಿಗಳ ರಿಟ್ ಅರ್ಜಿ ವಿಚಾರಣೆ ನಡೆಯಿತು. ಈ ನಡುವೆ, ನಿವಾಸಿಗಳಿಗೆ ತಾತ್ಕಾಲಿಕವಾಗಿ ಕಲ್ಯಾಣ ಮಂಟಪದಲ್ಲಿ ವ್ಯವಸ್ಥೆ ಮಾಡುವುದಾಗಿ ಅಧಿಕಾರಿಗಳು ಹೈಕೋರ್ಟ್ಗೆ ತಿಳಿಸಿದ್ದಾರೆ. Agrahara Dasarahalli
ಕಲ್ಯಾಣ ಮಂಟಪದಲ್ಲಿ ವ್ಯವಸ್ಥೆ ಮಾಡುವುದಾಗಿ ಸ್ಲಂ ಬೋರ್ಡ್ ಅಧಿಕಾರಿಗಳು ಹೈಕೋರ್ಟ್ಗೆ ಹೇಳಿದ್ದಾರೆ. ಈ ಮಧ್ಯೆ, ಜಾಗದ ಮೂಲ ದಾಖಲೆ ಒದಗಿಸುವಂತೆ ಹೈಕೋರ್ಟ್ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಸ್ಲಂ ಬೋರ್ಡ್ ಅಧಿಕಾರಿಗಳಿಗೆ ಹೈಕೋರ್ಟ್ ಸೂಚನೆ ಕೊಟ್ಟಿದೆ.
ಇದಕ್ಕೂ ಮುನ್ನ, BBMP ಗುರುತಿಸಿದ್ದ ಫಲಾನುಭವಿಗಳು ಇವರಲ್ಲ ಎಂದು ಹೈಕೋರ್ಟ್ಗೆ ಪಾಲಿಕೆ ಪರ ವಕೀಲ ಕೆ.ಎನ್.ಪುಟ್ಟೇಗೌಡ ಮಾಹಿತಿ ನೀಡಿದರು. 2019 ರಲ್ಲಿ BBMP ಫಲಾನುಭವಿಗಳ ಪಟ್ಟಿ ಸಿದ್ಧಪಡಿಸಿತ್ತು. ಆ ಫಲಾನುಭವಿಗಳ ಪಟ್ಟಿಯಲ್ಲಿ ಈ 16 ಕುಟುಂಬಗಳು ಇರಲಿಲ್ಲವೆಂದು ವಕೀಲರು ಮಾಹಿತಿ ನೀಡಿದರು. ಇದೀಗ, ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಫೆ.16 ಕ್ಕೆ ಮುಂದೂಡಿದೆ.
ಇದನ್ನೂ ಓದಿ: ಚಾಲಕನ ನಿಯಂತ್ರಣ ತಪ್ಪಿ Tata Ace ಪಲ್ಟಿ: ಅಕ್ಕಿಗುಂದ ಬಳಿ ಓರ್ವ ಸ್ಥಳದಲ್ಲೇ ಸಾವು