ರಾಜ್ಯದ ಎಲ್ಲಾ ಕಲ್ಲು ಕ್ವಾರಿಗಳ ಸರ್ವೆ ನಡೆಸಿ ವರದಿ ನೀಡಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ
ಕ್ವಾರಿಗಳಲ್ಲಿ ಸುರಕ್ಷತಾ ನಿಯಮಾವಳಿ ಪಾಲಿಸಲಾಗುತ್ತಿದೆಯೇ, ನಿಯಮ ಪಾಲಿಸದ ಕ್ವಾರಿಗಳ ಮೇಲೆ ಕೈಗೊಂಡ ಕ್ರಮವೇನು ಎಂಬ ಬಗ್ಗೆ ಹೈಕೋರ್ಟ್ ವಿಭಾಗೀಯ ಪೀಠ ಸರ್ಕಾರವನ್ನು ಪ್ರಶ್ನೆ ಮಾಡಿದೆ.
ಬೆಂಗಳೂರು: ರಾಜ್ಯದ ಎಲ್ಲಾ ಕಲ್ಲು ಕ್ವಾರಿಗಳ ಸರ್ವೆ ನಡೆಸಿ ವರದಿ ನೀಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಇಂದು (ಫೆ.3) ನಿರ್ದೇಶನ ನೀಡಿದೆ. ಕ್ವಾರಿಗಳಲ್ಲಿ ಕೈಗೊಳ್ಳುತ್ತಿರುವ ಸುರಕ್ಷತಾ ನಿಯಮಾವಳಿಗಳ ಬಗ್ಗೆ ವರದಿ ನೀಡಲು ಸರ್ಕಾರಕ್ಕೆ 1 ತಿಂಗಳ ಗಡುವನ್ನು ನೀಡಿದೆ.
ಕ್ವಾರಿಗಳಲ್ಲಿ ಸುರಕ್ಷತಾ ನಿಯಮಾವಳಿ ಪಾಲಿಸಲಾಗುತ್ತಿದೆಯೇ, ನಿಯಮ ಪಾಲಿಸದ ಕ್ವಾರಿಗಳ ಮೇಲೆ ಕೈಗೊಂಡ ಕ್ರಮವೇನು ಎಂಬ ಬಗ್ಗೆ ಹೈಕೋರ್ಟ್ ವಿಭಾಗೀಯ ಪೀಠ ಸರ್ಕಾರವನ್ನು ಪ್ರಶ್ನೆ ಮಾಡಿದೆ. ಕಲ್ಲು ಕ್ವಾರಿಗಳ ವಿಚಾರವಾಗಿ, ಜನರ ದೂರು ಪರಿಗಣಿಸಲು ವ್ಯವಸ್ಥೆ ರೂಪಿಸುವಂತೆಯೂ ಹೈಕೋರ್ಟ್ ವಿಭಾಗೀಯ ಪೀಠ ಸೂಚಿಸಿದೆ. ಅಕ್ರಮ ಗಣಿಗಾರಿಕೆ ಪ್ರಕರಣಗಳು ಹೆಚ್ಚುತ್ತಿರುವ ಹಾಗೂ ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುತ್ತಿರುವ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ.
ಕ್ವಾರಿಗಳ ಕುರಿತಾಗಿ ಸರ್ಕಾರ ಡ್ರೋನ್ ಸರ್ವೆ ನಡೆಸುತ್ತಿರುವುದಾಗಿ ಮಾಹಿತಿ ನೀಡಿತ್ತು. ಇದೀಗ, ಡಿ.10ರ ಹೈಕೋರ್ಟ್ ನಿರ್ದೇಶನ ಪಾಲನೆಯ ಬಗ್ಗೆ ವರದಿ ಸಲ್ಲಿಸಿ ಎಂದು ರಾಜ್ಯ ಸರ್ಕಾರಕ್ಕೆ ವಿಭಾಗೀಯ ಪೀಠ ಸೂಚನೆ ನೀಡಿದೆ. ಮುಖ್ಯ ನ್ಯಾಯಾಧೀಶ ಎ.ಎಸ್. ಒಕಾ, ನ್ಯಾಯಾಧೀಶ ಸಚಿನ್ ಶಂಕರ್ ಮಗದುಮ್ ನೇತೃತ್ವದ ವಿಭಾಗೀಯ ಪೀಠ ಸೂಚನೆ ನೀಡಿದೆ. ಮುಂದಿನ ವಿಚಾರಣೆಯನ್ನು ಮಾರ್ಚ್ 8ಕ್ಕೆ ಮುಂದೂಡಿ ಹೈಕೋರ್ಟ್ ಆದೇಶಿಸಿದೆ.
Shivamogga Blast ಲಾರಿಯಲ್ಲಿದ್ದ ಜಿಲೆಟಿನ್ ಸ್ಫೋಟ, ಸಾವಿನ ಸಂಖ್ಯೆ 8ಕ್ಕೆ ಏರಿಕೆ
ಗೋಹತ್ಯೆ ನಿಷೇಧ ಕಾಯ್ದೆ ಪ್ರಶ್ನಿಸಿ ಹೈಕೋರ್ಟ್ಗೆ PIL ಸಲ್ಲಿಕೆ: ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ
Published On - 9:58 pm, Wed, 3 February 21