AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸಚಿವ ಸದಾನಂದ ಗೌಡ ಶಿಫಾರಸಿನಂತೆ BWSSB ಸದಸ್ಯನ ನೇಮಕ ಆರೋಪ; ಹೈಕೋರ್ಟ್ ಗರಂ

ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಶಿಫಾರಸಿನಂತೆ BWSSB ಸದಸ್ಯರಾಗಿ ರುದ್ರೇಗೌಡರ ನೇಮಕವನ್ನು ಪ್ರಶ್ನಿಸಿ ಜಲಮಂಡಳಿಯ SC, STನೌಕರರ ಸಂಘ ಹೈಕೋರ್ಟ್​ಗೆ PIL ಸಲ್ಲಿಸಿದ್ದರು.

ಕೇಂದ್ರ ಸಚಿವ ಸದಾನಂದ ಗೌಡ ಶಿಫಾರಸಿನಂತೆ BWSSB ಸದಸ್ಯನ ನೇಮಕ ಆರೋಪ; ಹೈಕೋರ್ಟ್ ಗರಂ
D.V.ಸದಾನಂದ ಗೌಡ
KUSHAL V
|

Updated on:Feb 12, 2021 | 5:44 PM

Share

ಬೆಂಗಳೂರು: ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಶಿಫಾರಸಿನಂತೆ BWSSB ಸದಸ್ಯರನ್ನಾಗಿ ರುದ್ರೇಗೌಡ ಎಂಬವವರು ನೇಮಕವಾಗಿರುವುದನ್ನು ಪ್ರಶ್ನಿಸಿ ಜಲಮಂಡಳಿಯ SC, ST ನೌಕರರ ಸಂಘ ಹೈಕೋರ್ಟ್​ಗೆ PIL ಸಲ್ಲಿಸಿತ್ತು.  ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಹುದ್ದೆಗೆ ಸೂಕ್ತ ಅರ್ಹತೆ ಇಲ್ಲದ ರುದ್ರೇಗೌಡರನ್ನು ನೇಮಕ ಮಾಡಲಾಗಿದೆ ಎಂದು ಸಂಘ ಉಲ್ಲೇಖಿಸಿತ್ತು. High Court expresses displeasure against DV Sadananda Gowda

ಇದೀಗ, ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್ ಕೇಂದ್ರ ಸಚಿವರ ಶಿಫಾರಸಿನ ನೇಮಕಕ್ಕೆ ತನ್ನ ಅಸಮಾಧಾನ ವ್ಯಕ್ತಪಡಿಸಿದೆ. ಜೊತೆಗೆ, ಸಂಜೆ 4.45ರೊಳಗೆ ನೇಮಕಾತಿ ಕುರಿತು ನಿಲುವು ತಿಳಿಸಿ ಇಲ್ಲವಾದ್ರೆ ಕೇಂದ್ರ ಸಚಿವರನ್ನ ಪ್ರತಿವಾದಿ ಮಾಡುವುದಾಗಿ ಎಚ್ಚರಿಕೆ ಸಹ ನೀಡಿದೆ. ಸಿಜೆ A.S.ಒಕಾ, ನ್ಯಾ.ಸಚಿನ್ ಶಂಕರ್ ಮಗದುಮ್​ರವರ ಪೀಠ ಈ ಎಚ್ಚರಿಕೆ ನೀಡಿದೆ.

ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ BWSSB ಸದಸ್ಯರಾಗಿ ರುದ್ರೇಗೌಡರ ನೇಮಕಕ್ಕೆ ಶಿಫಾರಸು ಮಾಡಿದ್ದರು. ಶಿಫಾರಸಿನಂತೆ ನೇಮಕಾತಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಸಹ ಸೂಚಿಸಿದ್ದರು ಎಂದು ತಿಳಿದುಬಂದಿದೆ.

ಇನ್ನು, ಹೈಕೋರ್ಟ್​ ಸೂಚನೆಯಂತೆ ನಿಲುವು ತಿಳಿಸಿದ ಸರ್ಕಾರ  3 ವಾರಗಳಲ್ಲಿ ಜಲಮಂಡಳಿ ಪುನರ್ ರಚಿಸುವುದಾಗಿ ಹೇಳಿದೆ. ಹೈಕೋರ್ಟ್​​ಗೆ ಸರ್ಕಾರಿ ವಕೀಲರು ಈ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ 3 ವಾರಗಳ ಕಾಲ‌ ಮುಂದೂಡಿದೆ.

ಇದೂ ಓದಿ: BDAನಲ್ಲಿ ಮತ್ತೊಂದು ಕರ್ಮಕಾಂಡ: BBMP ಮಾಜಿ ಕಾರ್ಪೊರೇಟರ್ ವಿರುದ್ಧವೇ FIR ದಾಖಲು

Published On - 4:58 pm, Fri, 12 February 21

ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ